ಬೆಂಗಳೂರು:ನಿಯಾಮವಳಿ ಉ್ಲಲಂಘಿಸಿದ ಆರೋಪದ ಮೇಲೆ ತಮ್ಮ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್​ ಜಾರಿ ಮಾಡಿರುವ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಬಸನ್​ಗೌಡ ಪಾಟೀಲ್​ ಯತ್ನಾಳ್​, ‘ಕೈ’ಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ ಎಂಬುದು ಗೊತ್ತಿರುವ ವಿಷಯವೇ ಎಂದು ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ನನ್ನ ಮಿತಿಯಲ್ಲಿ ನನ್ನದೇ ಕಾರ್ಖಾನೆಗಳಲ್ಲಿ ನೂರಾರು ಜನರಿಗೆ ಉದ್ಯೋಗ ಸೃಷ್ಟಿಸಿದ್ದೇನೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
'ಕೈ'ಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ ಎಂಬುದು ಗೊತ್ತಿರುವ ವಿಷಯವೇ.ಬಡವರಿಗೆ, ದೀನ-ದಲಿತರಿಗೆ, ಪಕ್ಷದ ಕಾರ್ಯಕರ್ತರಿಗೆ ಸಹಾನೂಭೂತಿಯಿಂದ ಕಾಣುತ್ತ ಬಂದಿರುವ ನಾನು, ನನ್ನ ಮಿತಿಯಲ್ಲಿ ನನ್ನದೇ ಕಾರ್ಖಾನೆಗಳಲ್ಲಿ ನೂರಾರು ಜನರಿಗೆ ಉದ್ಯೋಗ ಸೃಷ್ಟಿಸಿದ್ದೇನೆ. ಜಿಲ್ಲೆಯ ಆರ್ಥಿಕತೆಯನ್ನು ಸುಧಾರಿಸಲು ನನ್ನ ಅಳಿಲು ಸೇವೆಯೂ ಇದೆ.
ಇದನ್ನೂ ಓದಿ:ನಿಯಾಮವಳಿ ಉಲ್ಲಂಘನೆ; ಯತ್ನಾಳ್ ಮಾಲೀಕತ್ವದ ಕಾರ್ಖಾನೆ ಮುಚ್ಚುವಂತೆ ನೋಟಿಸ್
‘ಕೈ’ಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ ಎಂಬುದು ಗೊತ್ತಿರುವ ವಿಷಯವೇ. ಬಡವರಿಗೆ, ದೀನ-ದಲಿತರಿಗೆ, ಪಕ್ಷದ ಕಾರ್ಯಕರ್ತರಿಗೆ ಸಹಾನೂಭೂತಿಯಿಂದ ಕಾಣುತ್ತ ಬಂದಿರುವ ನಾನು, ನನ್ನ ಮಿತಿಯಲ್ಲಿ ನನ್ನದೇ ಕಾರ್ಖಾನೆಗಳಲ್ಲಿ ನೂರಾರು ಜನರಿಗೆ ಉದ್ಯೋಗ ಸೃಷ್ಟಿಸಿದ್ದೇನೆ. ಜಿಲ್ಲೆಯ ಆರ್ಥಿಕತೆಯನ್ನು ಸುಧಾರಿಸಲು ನನ್ನ ಅಳಿಲು ಸೇವೆಯೂ ಇದೆ.ರಾಜಕೀಯ ಒತ್ತಡಕ್ಕೆ ಮಣಿದು ನನ್ನ ಕಾರ್ಖಾನೆಯನ್ನು ಮುಚ್ಚಿಸುವುದರಿಂದ ಇವರು ಏನನ್ನೂ ಕೂಡ ಸಾಧಿಸಲು ಸಾಧ್ಯವಿಲ್ಲ. ಕಾರ್ಖಾನೆ ಮತ್ತೆ ತೆರೆಯುವುದು ನಿಶ್ಚಿತ, ಈ ನಿಟ್ಟಿನಲ್ಲಿ ಕಾನೂನು ಹೋರಾಟವನ್ನು ನಾನು ಮಾಡುತ್ತೇನೆ.
ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿ ಎದುರಿಸಲಾಗದೆ ನಮ್ಮ ಎಥನಾಲ್ ಕಾರ್ಖಾನೆಗೆ ನೋಟಿಸ್ ಕೊಡಿಸಿದೆ. ರೈತರಿಗೆ ನೆರವಾಗಲು ಹಾಗು ಹಿಂದುಳಿದ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಮಾಡಲು ಕಾರ್ಖಾನೆ ಸ್ಥಾಪಿಸಲಾಗಿದೆ. ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸಲಾಗುತ್ತದೆ. ಈ ನೋಟಿಸ್, ಆದೇಶಗಳಿಗೆ ಹೆದರುವ ಜಾಯಮಾನ ನನ್ನದಲ್ಲ ಕಾಂಗ್ರೆಸ್ ಆಡಳಿತದ ವಿರುದ್ಧ ಹೋರಾಟ ಮಾಡಲು ಶಕ್ತಿ ಇಮ್ಮಡಿಯಾಗಿದೆ ಎಂದು ಬಿಜೆಪಿ ಶಾಸಕ ಬಸನ್​ಗೌಡ ಪಾಟೀಲ್ ಯತ್ನಾಳ್​ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 15 =
Remember me
