ಬೆಂಗಳೂರು:ಭೂ ಸುಧಾರಣೆ, ಎಪಿಎಂಸಿ ಹಾಗೂ ಕಾರ್ವಿುಕ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಿರುವುದನ್ನು ಹಿಂಪಡೆಯದಿದ್ದರೆ ಬೀದಿಗಿಳಿದು ಹೋರಾಡುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಸುಗ್ರೀವಾಜ್ಞೆ ಮೂಲಕ ಕಾಯ್ದೆಗಳನ್ನು ಜಾರಿಗೆ ತಂದಿದ್ದಾರೆ. ರೈತರು, ಕಾರ್ವಿುಕರನ್ನು ಬೀದಿಪಾಲು ಮಾಡುತ್ತಿದ್ದಾರೆ. ಈ ಸುಗ್ರೀವಾಜ್ಞೆಗಳನ್ನ ಸರ್ಕಾರ ಹಿಂದೆಗೆದುಕೊಳ್ಳಬೇಕು, ಅದಕ್ಕಾಗಿ ಈಗಾಗಲೇ 3 ಸಲ ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಕರೊನಾ ವೈದ್ಯಕೀಯ ಉಪಕರಣಗಳ ಹಗರಣದಲ್ಲಿ 2 ಸಾವಿರ ಕೋಟಿ ರೂ. ಹಗರಣ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇದರ ಬಗ್ಗೆ ಹೋರಾಡಬೇಕೋ ಬೇಡವೋ ಗೊತ್ತಾಗುತ್ತಿಲ್ಲ. ಯಾರು ಭ್ರಷ್ಟಾಚಾರ ಮಾಡಿರುತ್ತಾರೋ ಅವರಿಗೇ ಮತ್ತೆ ಶಕ್ತಿ ಬರುತ್ತದೆ ಎಂದರು. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ತೆಗೆದಿದ್ಯಾರು? ರಾಜಾಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ತೆಗೆಯುತ್ತಿರುವುದ್ಯಾರು? ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಕೇವಲ ಅಧಿಕಾರ ಹಿಡಿಯುವುದೇ ಇವರಿಗೆ ಮುಖ್ಯವಾಗಿದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಮತ್ತೊಂದೆಡೆ ಇದೇ ವಿಷಯ ಸಂಬಂಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ ಪ್ರಜಾಪ್ರಭುತ್ವ ಉಳಿಸಿ ಎಂದು ಹೋರಾಡುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಬಿಎಸ್​ಪಿಯ ಎಲ್ಲ ಶಾಸಕರನ್ನೂ ಕಾಂಗ್ರೆಸ್ ಸೆಳೆದಿಲ್ಲವೇ? ಇದು ಖರೀದಿಯಲ್ಲವೇ? ಎಂದು ಕುಮಾರಸ್ವಾಮಿ ಕೆಣಕಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 9 =
Remember me
