ಶಿವಮೊಗ್ಗ:ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶ್ವ ನಾಯಕ. ಅವರ ಪೋಟೋ ಬಳಸಬಾರದೆಂದು ಎಲ್ಲಿಯೂ ಹೇಳಿಲ್ಲ. ಮೋದಿ ಅವರು ನನ್ನ ಹೃದಯದಲ್ಲಿದ್ದು ಬಿಜೆಪಿಯವರು ಚುನಾವಣೆಗೆ ಫೋಟೊ ಬಳಸದಂತೆ ಕೇಸ್ ಹಾಕಿಕೊಳ್ಳುತ್ತಾರೆ ಎಂಬ ಕಾರಣಕ್ಕೆ ನಾನೇ ಕೇವಿಯೇಟ್ ಹಾಕಿದ್ದೇನೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಇದನ್ನೂ ಓದಿ:ಅಶ್ವಿನಿ ಪುನೀತ್​​ರಾಜ್​ಕುಮಾರ್​ ಬೆಂಬಲಕ್ಕೆ ನಿಂತ ನಟ ಜಗ್ಗೇಶ್; ನೇರವಾಗಿ ಇವರ ವಿರುದ್ಧ ಆಕ್ರೋಶ
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸ್ಪರ್ಧೆ ಮಾಡಲು ನಿರ್ಧರಿಸಿ ಆಗಿದೆ. ಸ್ಪರ್ಧೆ ಮಾಡಿದರೆ ಬಿಜೆಪಿಯವರು ನನ್ನನ್ನು ಪಕ್ಷದಿಂದ ಉಚ್ಚಾಟನೆ ಮಾಡಬಹುದು ಅಷ್ಟೆ. ಅದನ್ನು ಬಿಟ್ಟು ಬೇರೇನೂ ಮಾಡಲು ಸಾಧ್ಯವಿಲ್ಲ. ನಾನು ಯಡಿಯೂರಪ್ಪ ಅವರಂತೆ ಪಕ್ಷ ಬಿಟ್ಟು ಕೆಜೆಪಿ ಕಟ್ಟಲಿಲ್ಲ. ಜಗದೀಶ್ ಶೆಟ್ಟರ್ ಅವರಂತೆ ಕಾಂಗ್ರೆಸ್‌ಗೆ ಹೋಗಿಲ್ಲ. ನಾನಿನ್ನೂ ಪಕ್ಷ ಬಿಟ್ಟು ಹೋಗಿಲ್ಲ ಎಂದು ಹೇಳಿದರು.
ಪಾಲಿಕೆ ಟಿಕೆಟ್‌ಗೆ ನಾನೇ ಫೈನಲ್: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಈ ಬಾರಿ 3 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತೇನೆ. ಗೆದ್ದ ನಂತರ ಬಿಜೆಪಿಗೆ ಮತ್ತೆ ಸೇರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಸಚಿವ ಈಶ್ವರಪ್ಪ, ಮುಂಬರುವ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಾನೇ ಟಿಕೆಟ್ ಕೊಡುತ್ತೇನೆ. ನನ್ನದೇ ಅಂತಿಮ ನಿರ್ಧಾರ ಆಗಿರಲಿದೆ ಎಂದು ಯಡಿಯೂರಪ್ಪ ಬೆಂಬಲಿಗರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.
ಈಗಾಗಲೇ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದೇನೆ. ನನಗೆ ಅನ್ಯಾಯ ಆಗಿದ್ದು ಬಿಜೆಪಿ ಅಪ್ಪ ಮಕ್ಕಳ ಕೈಯಲ್ಲಿದೆ. ನಾವು ನಿಮಗೆ ಮತ ಕೊಡುತ್ತೇನೆ ಎಂದು ಮತದಾರರು ಹೇಳುತ್ತಿದ್ದಾರೆ. ಬೂತ್‌ಮಟ್ಟದ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಹೇಳಿದರು.
ಸಹೋದರನೇ ಕಣದಿಂದ ಹಿಂದೆ ಸರಿಯಲಿ:ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನನಗೆ ಮನವಿ ಮಾಡಿಕೊಳ್ಳುವ ಬದಲು ತನ್ನ ಸಹೋದರ ಬಿ.ವೈ.ರಾಘವೇಂದ್ರ ಅವರನ್ನೇ ಕಣದಿಂದ ಹಿಂದೆ ಸರಿಯುವಂತೆ ಹೇಳಲಿ ಎಂದು ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದರು.
ಈಶ್ವರಪ್ಪ ಗೆಲ್ಲಲಿ, ಸ್ಥಾನ ಬಿಟ್ಟುಕೊಡು ಎಂದು ತನ್ನ ಸಹೋದರನಿಗೆ ಧೈರ್ಯವಿದ್ದರೆ ವಿಜಯೇಂದ್ರ ಹೇಳಬೇಕು. ಈ ವಿಷಯವನ್ನು ತನ್ನ ಅಣ್ಣನಿಗೆ ಏಕೆ ಹೇಳುವುದಕ್ಕೆ ತಾಕತ್ ಇಲ್ಲವಾ ಅಥವಾ ತನ್ನ ಅಣ್ಣ ಸೋಲುತ್ತಾನೆ ಎಂಬ ಭಯನಾ ಎಂದು ಪ್ರಶ್ನಿಸಿದರು. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ರಾಜ್ಯಾಧ್ಯಕ್ಷ ಸ್ಥಾನ ತೊರೆದರೆ ಎಲ್ಲರ ನೋವಿಗೆ ಪರಿಹಾರ ಸಿಗುತ್ತದೆ ಎಂದರು.
ಗಜಪಡೆಯ ಕೀಳು ಮಟ್ಟದ ಪೋಸ್ಟ್‌ ವಿಚಾರಕ್ಕೆ ಸ್ಟ್ರಾಂಗ್ ಕೌಂಟರ್ ಕೊಟ್ಟ ಆ್ಯಂಕರ್ ಅನುಶ್ರೀ! ಏನಿದೆ ಪೋಸ್ಟ್​ನಲ್ಲಿ ?

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
