ಬೆಂಗಳೂರು:ಇತ್ತೀಚೆಗಷ್ಟೇ ಹಾಸನ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪ ವ್ಯಾಪಕವಾಗಿ ಕೇಳಿಬಂದಿದ್ದು, ಅದಕ್ಕೆ ಸಂಬಂಧಿಸಿದಂತೆ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಪ್ರಕರಣ ಲೋಕಸಭಾ ಚುನಾವಣೆಯ ಹಿನ್ನೆಲೆ ಹೊರಬಿದ್ದಿರುವುದು ಇದೀಗ ಹತ್ತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇನ್ನು ಈ ಕೇಸ್​ ವಿಚಾರ ತೀವ್ರವಾಗುತ್ತಿದ್ದಂತೆ ಇದರ ಬೆನ್ನಲ್ಲೇ ಸಂಸದನ ತಂದೆ, ಮಾಜಿ ಸಚಿವ ಎಚ್​.ಡಿ. ರೇವಣ್ಣ ವಿರುದ್ಧವೂ ಇದೇ ಆರೋಪ ಕೇಳಿಬಂದಿದೆ. ತಂದೆ ಮತ್ತು ಮಗ ಇಬ್ಬರ ವಿರುದ್ಧವೂ ಇದೀಗ ಹೊಳೆನರಸೀಪುರ ನಗರ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.
ಇದನ್ನೂ ಓದಿ:ಅದು ನನ್ನ ಜೀವನದ ಕರಾಳ ದಿನಗಳು… ಪ್ರಿಯಾಂಕಾ ಚೋಪ್ರಾ ಭಾವುಕ
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಜ್ವಲ್​ ರೇವಣ್ಣ ವಿರುದ್ಧ ಮೊದಲ ಎಫ್​ಐಆರ್​ ದಾಖಲಾಗಿತ್ತು. ಇದೀಗ ತಂದೆಯ ವಿರುದ್ಧವೂ ಎಫ್​ಐಆರ್​ ದಾಖಲಾಗಿದೆ. ಈ ಹಿಂದೆ ಎಚ್​.ಡಿ. ರೇವಣ್ಣ ಮನೆಯಲ್ಲಿ ಕೆಲಸ ಮಾಡಿದ್ದ ಮಹಿಳೆಯಿಂದಲೇ ದೂರು ದಾಖಲಾಗಿದೆ. ಭವಾನಿ ರೇವಣ್ಣ ಇಲ್ಲದ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪ ಮಾಡಿದ್ದಾರೆ. ಅಲ್ಲದೆ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
जिस नेता के कंधे पर हाथ रखकर PM फोटो खिंचवाते हैं। जिस नेता का चुनाव प्रचार करने 10 दिन पहले PM स्वयं जाते हैं। मंच पर उसकी प्रशंसा करते हैं। आज कर्नाटका का वह नेता देश से फरार है। उसके जघन्य अपराधों के बारे में सुनकर ही दिल दहल जाता है। सैकड़ों महिलाओं का जीवन जिसने तहस-नहस कर…
— Priyanka Gandhi Vadra (@priyankagandhi)April 29, 2024

ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 354ಎ, 354ಡಿ, 506, 509ರಡಿಯಲ್ಲಿ ಕ್ರಿಮಿನಲ್ ಕೇಸ್ ದಾಖಲಾಗಿದೆ. ಸದ್ಯ ಈ ಎಲ್ಲಾ ಬೆಳವಣಿಗೆಯನ್ನು ಗಮನಿಸಿದ ಪ್ರಿಯಾಂಕಾ, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠರಾದ ಎಚ್​.ಡಿ. ದೇವೇಗೌಡರೊಂದಿಗೆ ತೆಗೆಸಿಕೊಂಡ ಫೋಟೋವೊಂದನ್ನು ಎಕ್ಸ್​ನಲ್ಲಿ (ಈ ಹಿಂದಿನ ಟ್ವಿಟರ್​) ಹಂಚಿಕೊಳ್ಳುವ ಮೂಲಕ ಮೋದಿ ವಿರುದ್ಧ ಲೇವಡಿ ಮಾಡಿದ್ದಾರೆ.
ಇದನ್ನೂ ಓದಿ:ಮೈ ಬಗ್ಗಿಸಿ, ಬೆವರು ಹರಿಸಿ ಕೆಲಸ ಮಾಡೋ ಅಗತ್ಯ ಇಲ್ಲ..ಕೈ ತೋರಿಸಿದ್ರೆ ಸಾಕು ಲಕ್ಷ..ಲಕ್ಷ ಸಂಪಾದನೆ ಮಾಡಬಹುದು…
“ಒಬ್ಬ ಹೆಸರಾಂತ ನಾಯಕರ ಜತೆ ನಿಂತಿರುವ ಪ್ರಧಾನಿಗಳು ಅವರ ಹೆಗಲ ಮೇಲೆ ಕೈಯಿಟ್ಟು ಫೋಟೋ ತೆಗೆಸಿಕೊಂಡಿದ್ದಾರೆ. ಅಲ್ಲಿರುವ ನಾಯಕನ ಪರ ಚುನಾವಣಾ ಪ್ರಚಾರಕ್ಕಾಗಿ 10 ದಿನಗಳು ಹೋದ ಪ್ರಧಾನಿ, ಆತನನ್ನು ವೇದಿಕೆ ಮೇಲೆ ಮೆಚ್ಚಿ, ಮಾತನಾಡುತ್ತಾರೆ. ಆದರೆ, ಅದೇ ನಾಯಕ ಇಂದು ದೇಶದಿಂದ ಪರಾರಿಯಾಗಿದ್ದಾನೆ. ಇಂತಹ ನೀಚ, ಹೇಯ ಕೃತ್ಯಗಳನ್ನು ಕೇಳಿದಾಗ ಹೃದಯ ಹಿಂಡುತ್ತದೆ. ಆತ ನೂರಾರು ಹೆಣ್ಣುಮಕ್ಕಳ ಜೀವನ ಹಾಳುಮಾಡಿದ್ದಾನೆ. ಇಷ್ಟಾದರೂ ಸಹ ನೀವು ಇನ್ನೂ ಮೌನದಿಂದಲೇ ಇರ್ತೀರಾ ಮೋದಿ ಜೀ?” ಪ್ರಶ್ನಿಸುವ ಮುಖೇನ ಲೇವಡಿ ಮಾಡಿದ್ದಾರೆ.
ಡೆಲ್ಲಿ ವಿರುದ್ಧದ ಸೋಲಿಗೆ ತಿಲಕ್ ವರ್ಮ ಕಾರಣ ಎಂದ ಹಾರ್ದಿಕ್ ಪಾಂಡ್ಯ! ನೀನೆಂಥ ಕ್ಯಾಪ್ಟನ್​? ಫ್ಯಾನ್ಸ್​ ಕಿಡಿ

ಇನ್ನೇನು ತಾಳಿ ಕಟ್ಟಬೇಕು ಅಷ್ಟರೊಳಗೆ ಅವನು ಬೇಡ ಎಂದಳು ವಧು! ಆಕೆ ಕೊಟ್ಟ ಕಾರಣ ಕೇಳಿ ವರ ಕಂಗಾಲು

ಇಬ್ಬರ ಜೀವನದಲ್ಲಿ ಮಧ್ಯಪ್ರವೇಶಿಸುವ ಹಕ್ಕು ಯಾವನಿಗೂ ಇಲ್ಲ: ಸಿಡಿದೆದ್ದ ಗೌತಮ್​ ಗಂಭೀರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 8 =
Remember me
