ಬೆಂಗಳೂರು : ರಾಜ್ಯದಲ್ಲಿ ಚಳಿ ತೀವ್ರಗೊಂಡಿದ್ದು, ಆರೋಗ್ಯದ ಕಾಳಜಿ ವಹಿಸಿಸುವಂತೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಪೂರ್ವ ಹಾಗೂ ಮಧ್ಯ ಫೆಸಿಫಿಕ್ ಮಹಾಸಾಗರದಲ್ಲಿ ಉಷ್ಣಾಂಶ ಸಾಮಾನ್ಯ ಮಟ್ಟಕ್ಕಿಂತ ಕಡಿಮೆಯಾಗಿ ಲಾ ನಿನಾ ಉಂಟಾಗಿದ್ದು, ಇದರ ಪರಿಣಾಮದಿಂದ ಈಶಾನ್ಯ ಮಾರುತಗಳು ದುರ್ಬಲಗೊಂದು ಚಳಿ ಹೆಚ್ಚಳಗೊಂಡಿದೆ. ಸಂಕ್ರಾಂತಿವರೆಗೆ ರಾಜ್ಯದಲ್ಲಿ ಚಳಿ ತೀವ್ರತೆ ಇನ್ನಷ್ಟು ಇರಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.
ಎಚ್ಚರಿಕೆಯಿಂದಿರಿ:ಮುಂಜಾನೆ 4ಗಂಟೆಯಿಂದ 8ಗಂಟೆವರೆಗೆ ಚಳಿಯ ತೀವ್ರತೆ ಹೆಚ್ಚಿರುತ್ತದೆ. ಈ ಅವಧಿಯಲ್ಲಿ ವಾಯುವಿಹಾರ ಹಾಗೂ ವ್ಯಾಯಾಮಕ್ಕೆ ಹೋಗುವವರು ಎಚ್ಚರಿಕೆಯಿಂದ ಇರಬೇಕು. ಉಸಿರಾಟ ಸಮಸ್ಯೆ ಎದುರಿಸುತ್ತಿರುವವರು, ಎಲುಬು, ಕೀಲು ನೋವಿನಿಂದ ಬಳಲುತ್ತಿರುವವರು ಮನೆಯಿಂದ ಹೊರಹೋಗಬಾರದು ಎನ್ನುತ್ತಾರೆ ತಜ್ಞರು.
ಬಿಸಿ ನೀರು ಶುಚಿ ಆಹಾರ ಸೇವಿಸಿ :ಚಳಿಗಾಲದಲ್ಲಿ ಶೀತ, ನೆಗಡಿ, ಕೆಮ್ಮು, ಜ್ವರ, ಎದುರಾಗುವ ಸಾಧ್ಯತೆಗಳಿವೆ. ಕಾಲಿನ ಹಿಮ್ಮಡಿ, ತುಟಿ ಸೇರಿ ಕೈಕಾಲಿನ ಚರ್ಮ ಒಣಗಲಿದೆ. ಈ ಬಗ್ಗೆ ಜನರು ಅಗತ್ಯ ಮುನ್ನಚ್ಚರಿಕಾ ಕ್ರಮ ತೆಗೆದುಕೈಗೊಳ್ಳಬೇಕು. ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿರಿಸಿಕೊಳ್ಳುವ ಜತೆಗೆ ಕುದಿಸಿ ಆರಿಸಿದ ನೀರು, ಬಿಸಿ ಹಾಗೂ ಶುಚಿಯಾದ ಆಹಾರ, ಫ್ರೀಡ್ಜ್​ನಲ್ಲಿ ಹೆಚ್ಚು ಹೊತ್ತು ಇಟ್ಟ ಆಹಾರ ಸೇವಿಸಬಾರದು. ದೂಳಿನಿಂದ ದೂರವಿದ್ದು, ಚನ್ನಾಗಿ ಒಣಗಿಸಿದ ಬಟ್ಟೆಯನ್ನು ಮೈ ತುಂಬಾ ಧರಿಸುವುದು ಸೂಕ್ತ ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಪರಿಶಿಷ್ಟ ಜಾತಿಯವರ ಪೋಸ್ಟ್ ಮೆಟ್ರಿಕ್ ಸ್ಕಾಲರ್​ಷಿಪ್​ಗೆ 59,000 ಕೋಟಿ ರೂ. ಹೂಡಿಕೆ: ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 12 =
Remember me
