ಬೆಂಗಳೂರು:ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಿಗದಿಯಾಗಿದ್ದ ದ್ವೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ಮೂರೂ ಪಕ್ಷಗಳ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ.
ಜೆಡಿಎಸ್​ನ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕಾಂಗ್ರೆಸ್​ನ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಈರಣ್ಣ ಕಡಾಡಿ ಹಾಗೂ ಅಶೋಕ್ ಗಸ್ತಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾದ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಪ್ರಕಟಿಸಿದ್ದಾರೆ.
ನಾಮಪತ್ರ ಹಿಂದಕ್ಕೆ ಪಡೆಯಲು ಶುಕ್ರವಾರ ಕೊನೆಯ ದಿನವಾಗಿತ್ತು. ಯಾರೊಬ್ಬರೂ ನಾಮಪತ್ರ ಹಿಂಪಡೆಯದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಖರ್ಗೆ, ಕಡಾಡಿ, ಗಸ್ತಿ ಸ್ವತಃ ಬಂದು ಆಯ್ಕೆಯ ಪ್ರಮಾಣ ಪತ್ರ ಪಡೆದರೆ, ದೇವೇಗೌಡರ ಪರವಾಗಿ ಅವರ ಪ್ರತಿನಿಧಿ ಪ್ರಮಾಣ ಪತ್ರ ಪಡೆದುಕೊಂಡರು.
ವಕೀಲರಾಗಿ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ತೇಜಸ್ವಿ ಸೂರ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − ten =
Remember me
