ಬೆಂಗಳೂರು:ಕೆಪಿಎಸ್ಸಿಯು 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗಾಗಿ ಆಗಸ್ಟ್ 27ರಂದು ನಡೆಸಿದ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಕಂಡು ಗ್ರಾಮೀಣ ಭಾಗದ ಹಾಗೂ ಕನ್ನಡ ಮಾಧ್ಯಮದ ಅಭ್ಯರ್ಥಿಗಳು ದಿಗ್ಬ್ರಾಂತರಾಗಿದ್ದರು. ಪ್ರಶ್ನೆ ಪತ್ರಿಕೆಯಲ್ಲಿ ಪ್ರಶ್ನೆಗಳ ತರ್ಜುಮೆ ಸರಿಯಾಗಿಲ್ಲ. ಭಾಷಾಂತರ ಮಾಡುವಲ್ಲಿ ದೊಡ್ಡ ಎಡವಟ್ಟು ಮಾಡಿದ್ದಾರೆ. ಹೀಗಾದರೆ ಹೇಗೆ ನಾವು ಪರೀಕ್ಷೆಯಲ್ಲಿ ಉತ್ತೀರ್ಣವಾಗಲು ಸಾಧ್ಯ ಎಂದು ರಾಜ್ಯ ಸರ್ಕಾರ ವಿರುದ್ಧ ಅಭ್ಯರ್ಥಿಗಳು ತೀವ್ರ ಕಿಡಿಕಾರಿದ್ದರು. ವ್ಯಾಪಕ ಟೀಕೆ, ಆಕ್ರೋಶದ ಬೆನ್ನಲ್ಲೇ ಇದೀಗ ಸಿಎಂ ಇನ್ನೆರೆಡು ತಿಂಗಳೊಳಗೆ ಕೆಎಎಸ್ ಪ್ರಿಲಿಮ್ಸ್ ಮರು ಪರೀಕ್ಷೆ ನಡೆಸಲು ಸೂಚನೆ ನೀಡಿದ್ದೇನೆ ಎಂದು ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಟ್ವೀಟ್ ಮಾಡಿ ತಿಳಿಸಿದ್ದಾರೆ.
In the light of reports of inappropriate kannada translation of questions in the KPSC Gazetted Probationers’ examination, I have directed KPSC to reconduct of the examination within 2 months to ensure fairness to all candidates
Those responsible for these lapses have been…
— Siddaramaiah (@siddaramaiah)September 2, 2024

ಮೂಲ ಸೌಕರ್ಯಗಳೇ ಇಲ್ಲದ, ಸದಾ ಶಿಕ್ಷಕರ ಕೊರತೆಯೇ ಎದ್ದು ಕಾಣುವಂತಹ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಕಲಿತ ಆಕಾಂಕ್ಷಿಗಳಲ್ಲಿ ಈ ಪ್ರಶ್ನೆ ಪತ್ರಿಕೆಗಳು ನಿರಾಸೆ ಮೂಡಿಸಿತ್ತು. ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಗಿಟ್ಟಿಸಲು ನಿಗದಿಪಡಿಸಲಾಗಿದ್ದ ಪತ್ರಿಕೆ 1 ಹಾಗೂ ಪತ್ರಿಕೆ 2ರಲ್ಲಿನ ಕನ್ನಡ ಭಾಷೆಯ ತರ್ಜುಮೆಯಲ್ಲಿ ಸಾಕಷ್ಟು ಲೋಪದೋಷಗಳಿದ್ದು, ಇದು ಕನ್ನಡ ಭಾಷೆಯ ವಿಷಯದಲ್ಲಿ ಕೆಪಿಎಸ್ಸಿಗಿರುವ ಬೇಜವಾಬ್ದಾರಿತನವನ್ನು ತೋರಿಸುತ್ತದೆ ಎಂದು ಅಭ್ಯರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ಷೇಪಣೆ ಹೊರಹಾಕಿದ್ದರು.
ಸದ್ಯ ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದ ಸಿಎಂ, “ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ” ಎಂದಿದ್ದಾರೆ.
ಇದನ್ನೂ ಓದಿ:ಬಿಬಿಎಂಪಿ ವ್ಯಾಪ್ತಿಯಲ್ಲಿ 300 ಕಿ.ಮೀ ಹೊಸ ರಸ್ತೆ: ಡಿಸಿಎಂ
“ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ” ಎಂದು ಭರವಸೆ ನೀಡಿದ್ದಾರೆ.
14 ತಿಂಗಳು ಕಿಡ್ನ್ಯಾಪರ್​ ಜತೆಗಿತ್ತು 2 ವರ್ಷದ ಕೂಸು! ಅರೆಸ್ಟ್​ ಆದ್ರೂ ತಾಯಿ ಬಳಿ ಹೋಗದೆ ಆತನನ್ನೇ ತಬ್ಬಿಡಿದು ಕಣ್ಣೀರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
