ಚಿತ್ರದುರ್ಗ:ದೆವ್ವ ಬಿಡಿಸುವ ನೆಪದಲ್ಲಿ ಮಂತ್ರವಾದಿಯ ಪುತ್ರನೊಬ್ಬ ಯುವತಿಯ ಬೆತ್ತಲೆ ದೃಶ್ಯವನ್ನು ವಿಡಿಯೋ ಮಾಡಿದ್ದಾನೆ. ಅದೇ ದೃಶ್ಯವನ್ನು ವೈರಲ್​ ಮಾಡುವುದಾಗಿ ಬೆದರಿಕೆ ಹಾಕಿ ಬಲವಂತವಾಗಿ ಮದುವೆಯನ್ನೂ ಮಾಡಿಕೊಂಡಿದ್ದಾನೆ!
ಹೌದು, ಇಂತಹದ್ದೊಂದು ಪ್ರಕರಣ ಚಳ್ಳಕೆರೆ ತಾಲೂಕಿನ ಭರಮಸಾಗರ ಗ್ರಾಮದಲ್ಲಿ ಸಂಭವಿಸಿದ್ದು, ಆರೋಪಿ ವಿರುದ್ಧ ಎಸ್ಪಿಗೆ ಸಂತ್ರಸ್ತ ಯುವತಿ ದೂರು ನೀಡಿದ್ದಾರೆ.
ಮಂತ್ರವಾದಿ ಶರಣಪ್ಪ ಮತ್ತು ಈತನ ಪುತ್ರ ಭಾಸ್ಕರ್​ ಆರೋಪಿಗಳು. ಇವರಿಬ್ಬರೂ 19 ವರ್ಷದ ಯುವತಿಯೊಬ್ಬಳಿಗೆ ದೆವ್ವ ಬಿಡಿಸುವ ನೆಪದಲ್ಲಿ ಗ್ರಾಮ ಹೊರವಲಯದ ಜಾಲಿಗಿಡಗಳ ಪ್ರದೇಶಕ್ಕೆ ಕರೆದೊಯ್ದು ಆಕೆಗೆ ಮತ್ತು ಬರುವ ಪಾನೀಯ ಕುಡಿಸಿದ್ದಾರೆ. ಯುವತಿ ಪ್ರಜ್ಞೆ ತಪ್ಪಿದ ಬಳಿಕ ಆಕೆಯನ್ನು ಬೆತ್ತಲೆಗೊಳಿಸಿ ವಿಡಿಯೋ ಮಾಡಿದ್ದಾರೆ.
ಈ ದೃಶ್ಯ ತೋರಿಸಿ ತಾನು ಹೇಳಿದಂತೆ ಕೇಳದಿದ್ದರೆ ವಾಟ್ಸ್ಆ್ಯಪ್​ ಮತ್ತು ಫೇಸ್​ಬುಕ್​ಗೆ ಹಾಕುವುದಾಗಿ ಬೆದರಿಕೆ ಹಾಕಿದ್ದ ಭಾಸ್ಕರ್​, ಯುವತಿಯನ್ನ ಪಾವಗಡಕ್ಕೆ ಕರೆದೊಯ್ದು ವಿವಾಹ ಆಗಿದ್ದಾನೆ ಎಂದು ಸಂತ್ರಸ್ತೆ ಮತ್ತು ಆಕೆಯ ಕುಟುಂಬಸ್ಥರು ಚಿತ್ರದುರ್ಗ ಎಸ್ಪಿ ಜಿ.ರಾಧಿಕಾ ಅವರಿಗೆ ದೂರು ನೀಡಿದ್ದಾರೆ.
ಯುವತಿ ಪ್ರಜ್ಞೆ ತಪ್ಪಿದ ಬಳಿಕ ಅತ್ಯಾಚಾರ ನಡೆಸಿರುವ ಆರೋಪ ಕೇಳಿಬಂದಿದೆ. ಆರೋಪಿ ಭಾಸ್ಕರ್​ ಐದು ತಿಂಗಳ ಹಿಂದೆ 14 ವರ್ಷದ ಬಾಲಕಿಯನ್ನ ವಿವಾಹ ಆಗಿದ್ದ ಎಂದು ಗೊತ್ತಾಗಿದೆ.
ಈ ಬಗ್ಗೆ ದೂರಿನಲ್ಲಿ ವಿವರಿಸಿರುವ ಸಂತ್ರಸ್ತ ಯುವತಿ, ಮಂತ್ರವಾದಿ ತಂದೆ-ಮಗನಿಂದ ಹೆಣ್ಣುಮಕ್ಕಳ ಜೀವನ ಹಾಳಾಗುತ್ತಿದೆ. ದಯವಿಟ್ಟು ನಮ್ಮನ್ನು ಅವರಿಂದ ಕಾಪಾಡಿ ಎಂದು ಕೋರಿದ್ದಾರೆ.
ನಾನು ಮಾಜಿ ಡಿಸಿಎಂ ಅಣ್ಣನ ಮಗಳು… ಮದುವೆ ಆಗದಿದ್ರೆ ರೇಪ್​ ಕೇಸ್​ ಹಾಕ್ತೀನಿ: ಬೆಚ್ಚಿಬೀಳಿಸುತ್ತೆ ಆಕೆಯ ಹಿಸ್ಟರಿ

ಇಬ್ಬರು ಪತ್ನಿಯರೊಂದಿಗಿನ ಕಾಮದಾಟದ ಲೈವ್​ ದೃಶ್ಯವನ್ನೇ ಮಾರಾಟಕ್ಕಿಟ್ಟ 24ರ ಯುವಕ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen − eleven =
Remember me
