ದೇವನಹಳ್ಳಿ:ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ನಡುವೆ ಅನುಮಾನ ಉಂಟಾಗಿ, ಕಿರುಕುಳಕ್ಕೆ ತಿರುಗಿ ಅದೀಗ ಒಬ್ಬರ ಸಾವಿನಲ್ಲಿ ಕೊನೆಗೊಂಡಿದೆ. ಪತಿಯ ಅನುಮಾನ ಹಾಗೂ ಕಿರುಕುಳ ಎದುರಿಸಲಾಗದೆ ಪತ್ನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅರಸನಹಳ್ಳಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಇಲ್ಲಿನ ನಿವಾಸಿ ದೀಪ (27) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಾರ್ಪೆಂಟರ್ ಆಗಿರುವ, ಪತಿ ಮೋಹನ್​ಕುಮಾರ್ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ.
ಕಳೆದ 7 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಇಬ್ಬರ ಮಧ್ಯೆ ಮದುವೆಯಾದ ಮೂರು ವರ್ಷಗಳ ಬಳಿಕ ಭಿನ್ನಾಭಿಪ್ರಾಯ ಉಂಟಾಗಿತ್ತು. ಪತ್ನಿ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ ಪತಿ, ತವರು ಮನೆಯಿಂದ ಹಣ ತರುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
ದಂಪತಿ ಮಧ್ಯೆ ಕುಟುಂಬಸ್ಥರು ಎರಡು ಸಲ ರಾಜಿ ಪಂಚಾಯಿತಿ ನಡೆಸಿದ್ದರು. ಕಳೆದ ವಾರ ನಡೆದ ಎರಡನೇ ರಾಜಿ ಬಳಿಕ ದೀಪಾಳನ್ನು ಕುಟುಂಬಸ್ಥರು ಗಂಡನ ಮನೆಗೆ ಕಳಿಸಿದ್ದರು. ಆದರೆ ಗಂಡನ ಮನೆಗೆ ಬಂದ ನಾಲ್ಕು ದಿನಕ್ಕೆ ಗೃಹಿಣಿ ಫ್ಯಾನ್​ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದಕ್ಕೆ ಗಂಡನ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಲ್ಕು ತಿಂಗಳಿನಿಂದ ಸ್ನಾನವನ್ನೇ ಮಾಡದ ಯುವತಿ; ಫ್ಲ್ಯಾಟ್​ನಿಂದಲೇ ಹೊರಹಾಕಿದ ರೂಮ್​ಮೇಟ್​

ದತ್ತಪೀಠದ ದಾರಿಯಲ್ಲಿ ಮೊಳೆಗಳು; ಭಕ್ತರ ವಾಹನಗಳನ್ನು ಪಂಕ್ಚರ್ ಆಗಿಸುವ ಉದ್ದೇಶ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − twelve =
Remember me
