ಬೆಳಗಾವಿ:ರಾಮದುರ್ಗ ತಾಲೂಕಿನ ಅಂಗವಿಕಲ ಯುವತಿಯೊಬ್ಬಳು ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಅವರ ಬಳಿ ಕಣ್ಣೀರಿಟ್ಟ ಘಟನೆ ಗುರುವಾರ ನಡೆದಿದೆ.
ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜನತಾ ದರ್ಶನಕ್ಕೆ ಬಂದಿದ್ದ ಅಂಗವಿಕಲ ಯುವತಿ ಸಲೀಮಾ ಅವರಿಗೆ ಅನುಕಂಪ ತೋರಿ ರಾಮದುರ್ಗ ತಹಸೀಲ್ದಾರ್ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಕೊಡಿಸಲಾಗಿತ್ತು. ಈಗ ದಿಢೀರನೆ ಕೆಲಸದಿಂದ ತೆಗೆದಿದ್ದಾರೆ. ಇದರಿಂದ ಮನನೊಂದ ಆ ಯುವತಿ, ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಜಿಲ್ಲಾಧಿಕಾರಿ ಎದುರು ‘ನನಗೆ ನ್ಯಾಯ ಕೊಡಿಸಿ’ ಎಂದು ಮಕ್ಕಳಂತೆ ಗಳಗಳನೆ ಅತ್ತರು.
ಇದನ್ನೂ ಓದಿ:ನನ್ನನ್ನು ಯಾರೂ ಅಲ್ಲಾಡಿಸಲು ಸಾಧ್ಯವಿಲ್ಲ ಎಂದು ಬೀಗಿದ ಈ ಪೊಲೀಸ್ ಗತಿ ಏನಾಯ್ತು ನೋಡಿ…!
‘ಕಳೆದ ಅಕ್ಟೋಬರ್‌ನಿಂದ ಪ್ರಸಕ್ತ ವರ್ಷದ ಮಾರ್ಚ್‌ವರೆಗೂ ಕೆಲಸ ಮಾಡಿರುವೆ. ತಿಂಗಳಿಗೆ 5 ಸಾವಿರ ರೂ. ಸಂಬಳ ಎಂದು ಹೇಳಿ 5 ತಿಂಗಳು ಕೆಲಸ ಮಾಡಿಸಿಕೊಂಡು ಕೇವಲ 10 ಸಾವಿರ ರೂ. ನೀಡಿದ್ದಾರೆ. ಈಗ ಮತ್ತೆ ಕೆಲಸಕ್ಕೆ ಹೋದರೆ ಬರುವುದು ಬೇಡ ಎನ್ನುತ್ತಿದ್ದಾರೆ’ ಎಂದು ಅಳಲು ತೋಡಿಕೊಂಡಳು. ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಡಾ. ಬೊಮ್ಮನಹಳ್ಳಿ, ಗುತ್ತಿಗೆ ಆಧಾರದ ಮೇಲೆ ಕೆಲಸ ಕೊಡಿಸುವೆ ಎಂದು ತಿಳಿಸಿದರು. ಅಷ್ಟಕ್ಕೆ ಸುಮ್ಮನಾಗದ ಯುವತಿ, ತಕ್ಷಣವೇ ಬಾಕಿ ಸಂಬಳ ಹಾಗೂ ಕೆಲಸ ನೀಡುವಂತೆ ಹಠ ಹಿಡಿದಳು. ಆದರೆ, ಜಿಲ್ಲಾಧಿಕಾರಿ ಅವರು ಭರವಸೆ ನೀಡಿ ಹೊರಟು ಹೋದರು.
ಈ ಮಹಿಳಾ ಪೊಲೀಸ್​​ಗೆ ಹ್ಯಾಟ್ಸಾಫ್ ಅಂದದ್ದು ಯಾಕೆ ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 1 =
Remember me
