ಬೆಂಗಳೂರು:ಕಾಡಾನೆ ತುಳಿತಕ್ಕೊಳಗಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಪ್ರಕರಣ ನಡೆದಿದೆ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಹಕ್ಕಿಪಿಕ್ಕಿ ಕಾಲನಿಯಲ್ಲಿ ಈ ಘಟನೆ ನಡೆದಿದೆ.
ಮಹದೇವಮ್ಮ (48) ಕಾಡಾನೆ ದಾಳಿಗೆ ಬಲಿಯಾದ ಮಹಿಳೆ. ಮಧ್ಯಾಹ್ನ 2.30ರ ಸುಮಾರಿಗೆ ಮಹದೇವಮ್ಮ ಹೊಲದಲ್ಲಿ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಡಾನೆ ದಾಳಿಯಿಂದಲೇ ಮೃತಪಟ್ಟಿದ್ದಾಳೆ ಎಂದು ದೃಢಪಟ್ಟ ಹಿನ್ನೆಲೆಯಲ್ಲಿ ಯಾರಿಗೂ ಗೊತ್ತಾಗದಂತೆ ಮೃತ ದೇಹವನ್ನು ತೆಗೆದುಕೊಂಡು ಹೋಗುವಂತೆ ಅಧಿಕಾರಿಗಳು ತಾಕೀತು ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.
ಅರಣ್ಯಾಧಿಕಾರಿಗಳ ಬೇಜವಾಬ್ದಾರಿತನವೇ ಈ ಘಟನೆಗೆ ಕಾರಣ ಎಂದು ಮಹದೇವಮ್ಮ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಅರಣ್ಯ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.
ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸರ್ಕಾರ ಆದ್ಯತೆ; ವಿಜಯವಾಣಿ-ದಿಗ್ವಿಜಯ ನ್ಯೂಸ್ ‘ಎಜುಕೇಷನ್ ಎಕ್ಸ್‌ಪೋ’ನಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − eight =
Remember me
