ನೆಲಮಂಗಲ:ನಿನ್ನೆಯಷ್ಟೇ ಎರಡು ಕೆಎಸ್​ಆರ್​ಟಿಸಿ ಬಸ್​ಗಳು ಪಲ್ಟಿಯಾಗಿ ಅಪಘಾತ ಸಂಭವಿಸಿದ ಎರಡು ಪ್ರತ್ಯೇಕ ಪ್ರಕರಣಗಳು ನಡೆದಿದ್ದು, ಒಟ್ಟು ಮೂವರು ಸಾವಿಗೀಡಾಗಿ ಸುಮಾರು 50 ಮಂದಿ ಗಾಯಗೊಂಡಿದ್ದರು. ಇಂದು ಮತ್ತೊಂದು ಕೆಎಸ್​ಆರ್​ಟಿಸಿ ಬಸ್​ ಅಪಘಾತಕ್ಕೀಡಾಗಿದ್ದು, ಮಹಿಳೆಯೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಐವರು ಗಾಯಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ-75ರ ಕುಣಿಗಲ್ ರಸ್ತೆ ನೆಲಮಂಗಲದ ಮಹದೇವಪುರ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಗುರುವನಹಳ್ಳಿ ಶೋಭಾ (26) ಸ್ಥಳದಲ್ಲೇ ಸಾವಿಗೀಡಾಗಿದ್ದು, ಸುನೀಲ್, ಜೈಲವುದೀನ್, ಹುಸೇನ್‌ಬೀ, ಕಮಲ್ ಉದ್ದೀನ್ ಮತ್ತು ಹನುಮಂತರಾಜು ಎಂಬವರು ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಕಾರುಗಳು ಪರಸ್ಪರ ಡಿಕ್ಕಿ, ಸಂಪೂರ್ಣ ಜಖಂ; ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವು..
ಟ್ರ್ಯಾಕ್ಟರ್​ನಿಂದ ಹೆದ್ದಾರಿ ಬದಿಯ ಗಿಡಗಳಿಗೆ ನೀರು ಹಾಯಿಸುತ್ತಿದ್ದಾಗ ಬಸ್​ ಬಂದು ಡಿಕ್ಕಿ ಹೊಡೆದಿದ್ದರಿಂದ ಶೋಭಾ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಾಯಳುಗಳಿಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 2 =
Remember me
