ಬೆಂಗಳೂರು:ದೀಪಾವಳಿ ಹಬ್ಬಕ್ಕೆ ಗಂಡ ತವರು ಮನೆಗೆ ಬರಲಿಲ್ಲ ಎಂದು ಸಿಟ್ಟಾದ ಪತ್ನಿ, ಪತಿಗೆ ವಿಡಿಯೋ ಕಾಲ್ ಮಾಡಿ ಬೈದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣವೊಂದು ನಡೆದಿದೆ. ರಾಜಧಾನಿ ಬೆಂಗಳೂರಿನ ಭಾರತಿನಗರದಲ್ಲಿ ಈ ಪ್ರಕರಣ ನಡೆದಿದೆ.
ಭಾರತಿನಗರ ನಿವಾಸಿ ಆರ್​. ದೇವಿಕಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 21 ವರ್ಷದ ಈಕೆ ಪತಿಯೊಂದಿಗೆ ವಿಡಿಯೋ ಕಾಲ್​ನಲ್ಲಿದ್ದಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಉಮೇಶ್ ವಿರುದ್ಧ ದೇವಿಕಾ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದಾರೆ.
ದೀಪಾವಳಿಗೆಂದು ತವರು ಮನೆಗೆ ಬಂದಿದ್ದ ಈಕೆ ಹಬ್ಬಕ್ಕೆ ಪತಿ ಅಲ್ಲಿಗೆ ಬರಲಿಲ್ಲ ಎಂದು ಮಂಗಳವಾರ ವಿಡಿಯೋ ಕಾಲ್ ಮಾಡಿ ತರಾಟೆಗೆ ತೆಗೆದುಕೊಂಡು, ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪತಿ ಆಕೆಯನ್ನು ತಡೆಯುವ ಬದಲು ಆತ್ಮಹತ್ಯೆಯ ಲೈವ್ ವಿಡಿಯೋ ನೋಡಿ ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿ ದೇವಿಕಾ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಇದನ್ನೂ ಓದಿ:ವಿಶ್ವಕಪ್ ಗೆಲ್ಲುವುದು ಹೇಗೆ?: ಭಾರತದ ಕ್ರಿಕೆಟ್ ತಂಡಕ್ಕೆ ಸದ್ಗುರು ನೀಡಿದ ಸಲಹೆ ಏನು?
ದೇವಿಕಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಆಕೆ ಗರ್ಭಿಣಿ ಆಗಿದ್ದಳು ಎಂಬುದು ತಿಳಿದುಬಂದಿದೆ. ಇಬ್ಬರದ್ದೂ ಪ್ರೇಮ ವಿವಾಹವಾಗಿದ್ದು, ಇದಕ್ಕೆ ಮನೆಯವರ ಒಪ್ಪಿಗೆ ಇರಲಿಲ್ಲ ಎಂದೂ ಹೇಳಲಾಗಿದೆ. ಆರೋಪಿ ಪತಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.
ವಿಶ್ವಕಪ್ ಫೈನಲ್​: ಒಂದೆಡೆ ಕೂಗು, ಹುರಿದುಂಬಿಸೋ ಜೈಕಾರ, ಇನ್ನೊಂದೆಡೆ ಸದ್ದಡಗಿಸೋ ಹುನ್ನಾರ: ಗೆಲ್ಲೋರು ಯಾರು?

ಭಾರತವೇ ಗೆಲ್ಲೋದು!: ಇದೇನಿದು ಕ್ರಿಕೆಟ್ ಅಭಿಮಾನಿಗಳ ಲೆಕ್ಕಾಚಾರ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 2 =
Remember me
