ಬೆಳಗಾವಿ:ಮನೆಯೊಂದರಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಆಕೆಯ ಸೊಸೆ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದ್ದು, ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಸೊಸೆ ಮತ್ತು ಆಕೆಯ ಕುಟುಂಬಸ್ಥರ ವಿರುದ್ಧ ದೂರು ಕೂಡ ದಾಖಲಾಗಿದೆ.
ಬೆಳಗಾವಿಯ ಬೈಲಹೊಂಗಲ ನಿವಾಸಿ ಮಹಾಬೂಬಿ ಯಾಕೂಶಿ (53) ಸಾವಿಗೀಡಾದ ಮಹಿಳೆ. ಸೊಸೆ ಮೆಹರೂಣಿ ಮತ್ತು ಆಕೆಯ ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ದೂರು ದಾಖಲಾಗಿದೆ. ಯಾಕೂಶಿ ಪುತ್ರ ಸುಬಾನ್ ಮತ್ತು ಮೆಹರೂಣಿ ಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು.
ಇದನ್ನೂ ಓದಿ:ರಾಜಕೀಯದಿಂದ ನಿವೃತ್ತನಾಗಿದ್ದೇನೆ; ಇದನ್ನು ಹೈಕಮಾಂಡ್‌ಗೆ ತಿಳಿಸಿದರೆ ಪಿಂಚಣಿ ಕೊಡ್ತಾರಾ?: ಎಸ್.ಎಂ. ಕೃಷ್ಣ ಪ್ರಶ್ನೆ
ಮದುವೆ ಬಳಿಕ ಬೇರೆ ಮನೆ ಮಾಡುವಂತೆ ಗಂಡ ಸುಬಾನ್​ಗೆ ಮೆಹರೂಣಿ ಕಿರುಕುಳ ನೀಡುತ್ತಿದ್ದಳು ಎನ್ನಲಾಗಿದೆ. ಬೇರೆ ಮನೆ ಮಾಡಲು ಗಂಡನ ಮನೆಯವರು ನಿರಾಕರಿಸಿದ್ದಕ್ಕೆ ಸೊಸೆ ತನ್ನ ಕುಟುಂಬಸ್ಥರನ್ನು ಕರೆಸಿ ಅತ್ತೆ ಹಾಗೂ ಪತಿ ಮೇಲೆ ಹಲ್ಲೆ ಮಾಡಿಸಿದ್ದು, ಅತ್ತೆ ಗಾಯಗೊಂಡಿದ್ದರು.
ಇದನ್ನೂ ಓದಿ:ಡಾ.ರಾಜ್​ ಕಪ್​ಗೆ ದುಬೈನಲ್ಲಿ ಹರಾಜು ಪ್ರಕ್ರಿಯೆ: ವಿಶೇಷ ಅತಿಥಿಯಾಗಿ ಅಶ್ವಿನಿ ಪುನೀತ್ ರಾಜಕುಮಾರ್ ಭಾಗಿ
ಗಾಯಗೊಂಡಿದ್ದ ಮಹಾಬೂಬಿಯನ್ನು ಮೇ 22ರಂದು ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೂನ್ 1ರಂದು ಆಕೆ ಆಸ್ಪತ್ರೆಯಿಂದ ಡಿಸ್​​ಚಾರ್ಜ್​ ಆಗಿದ್ದರು. ಆ ಬಳಿಕ ಮಹಾಬೂಬಿ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ, ಆಕೆ ಕೊನೆಯುಸಿರೆಳೆದಿದ್ದು, ಲೋ ಬಿಪಿ ಇಲ್ಲವೇ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಸೊಸೆ ಮತ್ತು ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ದೂರು ದಾಖಲಾಗಿದ್ದು, ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.
ಆಧಾರ್ ಆನ್​ಲೈನ್​​ ಉಚಿತ ಅಪ್​ಡೇಟ್​​ಗೆ ನಾಳೆಯೇ ಕಡೇ ದಿನ: ಇಲ್ಲಿದೆ ಮಾಹಿತಿ..

ಮೂರನೇ ಮಗುವಾದರೆ 5 ಲಕ್ಷ ರೂ. ಕೊಡ್ತಾರಂತೆ!; ಶಿಕ್ಷಣ-ಚಿಕಿತ್ಸೆಯೂ ಉಚಿತ, ಮದ್ವೆ ಖರ್ಚಿಗೂ ಧನಸಹಾಯ: ಇಲ್ಲಿದೆ ವಿವರ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + four =
Remember me
