ಬೆಂಗಳೂರು:ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯ ಕುತ್ತಿಗೆಗೆ ಚೂರಿಯಿಂದ ಇರಿದು ಪತಿ ಹತ್ಯೆ ಮಾಡಿದ್ದಾನೆ. ಹೊರಮಾವಿನಲ್ಲಿ ಶುಕ್ರವಾರ ಕೃತ್ಯ ನಡೆದಿದ್ದು, ಆರೋಪಿಯನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ.
ಹೊರಮಾವು ನಿವಾಸಿ ನೇಪಾಳ ಮೂಲದ ರಾಮ್ ಬಹದ್ದೂರ್ ಬಾಟಕ್ (50) ಬಂಧಿತ. ಧೂಪಿದೇವಿ ಬಾಟಕ್ (47) ಹತ್ಯೆಯಾದ ಮಹಿಳೆ.
ರಾಮ್ ಬಹದ್ದೂರ್ ದಂಪತಿ ಕೆಲ ವರ್ಷಗಳ ಹಿಂದೆ ನೇಪಾಳದಲ್ಲಿ ವಿವಾಹವಾಗಿ ನಗರಕ್ಕೆ ಬಂದು ನೆಲೆಸಿದ್ದರು. ದಂಪತಿಗೆ ನಾಲ್ವರು ಮಕ್ಕಳಿದ್ದಾರೆ. ರಾಮ್ ಬಹದ್ದೂರ್ ಹೊರಮಾವಿನಲ್ಲಿರುವ ಐಸ್ ಕ್ರೀಂ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಪ್ರತಿನಿತ್ಯ ಮದ್ಯಸೇವಿಸಿ ಬಂದು ಪತ್ನಿ ಜತೆ ಜಗಳವಾಡಿ ಹಲ್ಲೆ ನಡೆಸುತ್ತಿದ್ದ. ಶುಕ್ರವಾರ ರಾತ್ರಿ 9 ಗಂಟೆಗೆ ಊಟ ಮಾಡುತ್ತಿದ್ದ ಸಮಯದಲ್ಲಿ ಪ್ರತಿದಿನ ಕುಡಿದು ಬಂದು ಸಣ್ಣ-ಪುಟ್ಟ ವಿಚಾರಕ್ಕೆ ಜಗಳ ಮಾಡುತ್ತಿದ್ದ ಪತಿಯ ವರ್ತನೆ ಬಗ್ಗೆ ಧೂಪಿದೇವಿ ಪ್ರಶ್ನಿಸಿದ್ದರು. ಇದರಿಂದ ಆಕ್ರೋಶಗೊಂಡ ರಾಮ್ ಬಹದ್ದೂರ್ ಮನೆಯಲ್ಲಿದ್ದ ಚೂರಿಯಿಂದ ಪತ್ನಿಯ ಕತ್ತಿಗೆ ಇರಿದು ಹತ್ಯೆ ಮಾಡಿದ್ದಾನೆ. ಅದನ್ನು ಕಂಡು ಆತಂಕಗೊಂಡ ಮಕ್ಕಳು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ತಲೆಮರೆಸಿಕೊಂಡಿದ್ದ ರಾಮ್ ಬಹದ್ದೂರ್​ನನ್ನು ಪತ್ತೆಹಚ್ಚಿ ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೃತ್ಯ ನಡೆಯುತ್ತಿದ್ದಾಗ ಇವರ ಮಕ್ಕಳು ಮನೆಯಲ್ಲೇ ಇದ್ದರು. ಜಗಳ ಬಿಡಿಸಲು ಮುಂದಾಗಬೇಕು ಎನ್ನುವಷ್ಟರಲ್ಲಿ ರಾಮ್ ಬಹದ್ದೂರ್ ಹತ್ಯೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
