ಬೆಂಗಳೂರು:ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲಿನಲ್ಲಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ:ಚಿರಾಗ್ ಪಾಸ್ವಾನ್ ಸ್ವಂತ ಮಗನಿದ್ದಂತೆ, ಆತನೇ ಬಿಹಾರದ ಭವಿಷ್ಯ: ಪ್ರಧಾನಿ ಮೋದಿ
ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಗಜಾನನ ಭಟ್ ಅವರು, ಸುದೀರ್ಘವಾದ ವಾದ – ಪ್ರತಿವಾದ ಆಲಿಸಿ ತೀರ್ಪು ಪ್ರಕಟಿಸಿದ್ದಾರೆ.
ಈ ವೇಳೆ ರೇವಣ್ಣ ಪರ ಹಾಗೂ ಸರ್ಕಾರಿ ವಕೀಲರ ನಡುವೆ ವಾದ – ಪ್ರತಿವಾದಗಳು ನಡೆದಿವೆ. ಇಂಥ ಕಾರಣಗಳಿಗೆ ಜಾಮೀನು ಕೊಡಲೇ ಬೇಕು ಎಂದು ರೇವಣ್ಣ ಪರ ವಕೀಲರಾದ ನಾಗೇಶ್‌ ವಾದ ಮಂಡಿಸಿದರೆ, ಜಾಮೀನನ್ನು ಏಕೆ ಕೊಡಬಾರದು? ಕೊಟ್ಟರೆ ಮುಂದೇನಾಗುತ್ತದೆ ಎಂದು ಎಸ್‌ಐಟಿ ಪರ ವಕೀಲರಾದ (ಎಸ್‌ಪಿಪಿ) ಜಯ್ನಾ ಕೊಠಾರಿ ಹಾಗೂ ಅಶೋಕ್‌ ನಾಯ್ಕ್‌ ವಾದಿಸಿದ್ದಾರೆ.
ನ್ಯಾಯಾಲಯದಿಂದ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ನಾಳೆ (ಮಂಗಳವಾರ) ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ಭದ್ರತಾ ಪಡೆಗಳ ಕಾರ್ಯಾಚರಣೆ: ಮಹಾರಾಷ್ಟ್ರದಲ್ಲಿ ಇಬ್ಬರು ಮಹಿಳೆಯರು ಸೇರಿ ಮೂವರು ನಕ್ಸಲರ ಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − twelve =
Remember me
