ಬೆಂಗಳೂರು:ನಗರದ ಸುಬ್ಬಯ್ಯ ವೃತ್ತದ ಬಳಿ ಗುರುವಾರ ರಸ್ತೆ ದಾಟುತ್ತಿದ್ದ ವೇಳೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಮಹಿಳೆಯನ್ನು ಪುಷ್ಪಾ ಎಂದು ಗುರುತಿಸಲಾಗಿದೆ. ನಗರದ ಕಬ್ಬನ್ ಪೇಟೆ ನಿವಾಸಿ. ಪುಷ್ಪಾ ಅವರು ಮನೆಯಿಂದ ಬೇಕರಿಗೆ ತೆರಳುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ
ಬಸ್ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡ ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದರು.
ಬಿಎಂಟಿಸಿ ಬಸ್ ಚಾಲಕ ನಾಗರಾಜ್ ಅವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿಯಲು ಪೊಲೀಸರು ಚಾಲಕನನ್ನು ವಿಚಾರಣೆಗೆ ಒಳಪಡಿಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮಮಂದಿರಕ್ಕೆ ಹನುಮಾನ್ ಧ್ವಜ ಸಿದ್ಧಪಡಿಸಿದ್ದು ಮುಸ್ಲಿಂ ಟೈಲರ್

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:9 − 7 =
Remember me
