ಬೆಂಗಳೂರು:ನಾಪತ್ತೆಯಾಗಿರುವ ಪತಿಯನ್ನು ಹುಡುಕಿಕೊಡುವಂತೆ ಮಹಿಳೆಯೊಬ್ಬರು ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿರುವುದಲ್ಲದೆ, ನಗರ ಪೊಲೀಸ್ ಆಯುಕ್ತರಲ್ಲೂ ಈ ಬಗ್ಗೆ ಮನವಿ ಮಾಡಿದ್ದಾರೆ. ಟಾಟಾನಗರದ 5ನೇ ಮುಖ್ಯ ರಸ್ತೆ ನಿವಾಸಿ ವಿಪಿನ್ ಗುಪ್ತಾ (37) ನಾಪತ್ತೆಯಾದವ. ಇವರ ಪತ್ನಿ ಶ್ರೀಪರ್ಣಾ ದತ್ ಎಂಬುವರು ನೀಡಿದ ದೂರಿನ ಮೇರೆಗೆ ನಾಪತ್ತೆ ಪ್ರಕರಣ ದಾಖಲಿಸಿ ಕೊಂಡಿರುವ ಪೊಲೀಸರು, ಅಪಹೃತನ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲಖನೌ ಮೂಲದ ವಿಪಿನ್, ಪತ್ನಿ ಶ್ರೀಪರ್ಣಾ ಹಾಗೂ ಇಬ್ಬರು ಪುತ್ರಿಯರ ಜತೆ ಟಾಟಾನಗರದ ಅಪಾರ್ಟ್ಮೆಂಟ್​ನಲ್ಲಿ ನೆಲೆಸಿದ್ದಾರೆ. ವೃತ್ತಿಯಲ್ಲಿ ಸಾಫ್ಟ್​ವೇರ್ ಇಂಜಿನಿಯರ್ ಆಗಿದ್ದು, ಕಳೆದ ಜೂನ್ ತಿಂಗಳಲ್ಲಿ ಉದ್ಯೋಗ ತೊರೆದಿದ್ದ. ಆ. 4ರಂದು ಮಧ್ಯಾಹ್ನ 12.42ಕ್ಕೆ ಮನೆಯಿಂದ ದ್ವಿಚಕ್ರ ವಾಹನ ತೆಗೆದುಕೊಂಡು ಹೊರಗೆ ಹೋಗಿದ್ದ. ಅದಾಗಿ 25 ನಿಮಿಷಕ್ಕೆ ಖಾತೆಯಿಂದ 1.80 ಲಕ್ಷ ರೂ. ಹಣ ಡ್ರಾ ಮಾಡಿದ್ದ. ಬಳಿಕ ಕರೆ ಮಾಡಿದರೆ ಮೊಬೈಲ್ ಸ್ವಿಚ್ಡ್​ಆಫ್ ಬಂದಿತ್ತು. ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿಲ್ಲ. ಹೀಗಾಗಿ ತಮ್ಮ ಪತಿಯನ್ನು ಹುಡುಕಿ ಕೊಡಿ ಎಂದು ಶ್ರೀಪರ್ಣಾ ಠಾಣೆಗೆ ದೂರು ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2ನೇ ಬಾರಿ ನಾಪತ್ತೆ:ವಿಪಿನ್ ಎರಡನೇ ಬಾರಿಗೆ ನಾಪತ್ತೆಯಾಗಿದ್ದಾನೆ. ಎಂಟು ತಿಂಗಳ ಹಿಂದೆ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ಒಂಟಿಯಾಗಿ ದ್ವಿಚಕ್ರ ವಾಹನದಲ್ಲಿ ತೆರಳಿದ್ದ. ಬಳಿಕ ಗೋವಾದಲ್ಲಿ ಅವರನ್ನು ಪತ್ತೆಹಚ್ಚಿ ನಗರಕ್ಕೆ ಕರೆತರಲಾಗಿತ್ತು. ಈಗ ಮತ್ತೊಮ್ಮೆ ನಾಪತ್ತೆಯಾಗಿದ್ದಾನೆ. ಅಂದೇ ಪತ್ನಿ ಕೊಡಿಗೇಹಳ್ಳಿ ಠಾಣೆಗೆ ತೆರಳಿದ್ದರಾದರೂ ಪೊಲೀಸರು ಸ್ಪಂದಿಸಲಿಲ್ಲ. ಬಳಿಕ ಆ. 6ರಂದು ಎಫ್​ಐಆರ್ ದಾಖಲಿಸಿದ್ದಾರೆ. ಆದರೆ ಈವರೆಗೂ ಪತಿ ಪತ್ತೆಗೆ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆ ‘ಎಕ್ಸ್’ ಖಾತೆಯಲ್ಲಿ ಪೊಲೀಸರ ವಿರುದ್ಧ ಆರೋಪಿಸಿದ್ದಾರೆ.
ಆರ್ಥಿಕ ಸಮಸ್ಯೆ ಇರಲಿಲ್ಲ…
‘ನನಗೆ 5 ತಿಂಗಳ ಮತ್ತು 14 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ನಮಗೆ ಬೆಂಗಳೂರಿನಲ್ಲಿ ಯಾವುದೇ ಸಂಬಂಧಿಕರಿಲ್ಲ. ನಮ್ಮದು ಮಧ್ಯಮ ವರ್ಗದ ಚಿಕ್ಕ ಕುಟುಂಬ. ಸಾಂಸಾರಿಕ ಜೀವನ ಉತ್ತಮವಾಗಿದೆ. ಆರ್ಥಿಕವಾಗಿ ಯಾವುದೇ ಸಮಸ್ಯೆಯಿಲ್ಲ. ಆ.5ರಂದು ನಮ್ಮ ವಿವಾಹ ವಾರ್ಷಿಕೋತ್ಸವ ಇತ್ತು. ಪತಿ ನನಗೆ ಐಫೋನ್ ಗಿಫ್ಟ್ ಮಾಡಲು ನಿರ್ಧರಿಸಿದ್ದರು. 8ರಂದು ಕುಟುಂಬಸಮೇತ ಕಳಸ, ಹೊರನಾಡು, ಶೃಂಗೇರಿ, ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ತೆರಳುವ ಯೋಜನೆ ಇತ್ತು. ಆದರೆ, 4ರಂದು ವಿಪಿನ್ ಏಕಾಏಕಿ ನಾಪತ್ತೆಯಾಗಿದ್ದಾರೆ. ಅವರ ಬಗ್ಗೆ ಆತಂಕವಾಗಿದೆ. ದಯವಿಟ್ಟು ಹುಡುಕಿ ಕೊಡಿ’ ಎಂದು ಶ್ರೀಪರ್ಣಾ ಅವರು ನಗರ ಪೊಲೀಸ್ ಆಯುಕ್ತ, ಮುಖ್ಯಮಂತ್ರಿ ಹಾಗೂ ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.
5 ಲಕ್ಷ ರೂ.ಗಳಿಗೆ ಬೇಡಿಕೆಯಿಟ್ಟು ಧಮ್ಕಿ
ಅಪರಿಚಿತ ಮೊಬೈಲ್ ಸಂಖ್ಯೆಯಿಂದ ನನ್ನ ಮೊಬೈಲ್​ಗೆ ಬ್ಲಾ್ಯಕ್​ವೆುೕಲ್ ಸಂದೇಶ ಬರುತ್ತಿದೆ. 5 ಲಕ್ಷ ರೂ. ಹಣ ವರ್ಗಾವಣೆ ಮಾಡುವಂತೆ ಕೇಳುತ್ತಿದ್ದಾರೆ. ಹಣ ಕೊಡದಿದ್ದಲ್ಲಿ ನಿನ್ನ ಪತಿಯನ್ನು ಕೊಲೆ ಮಾಡುವುದಾಗಿ ಬೆದರಿಸುತ್ತಿದ್ದಾರೆ. ಅಪರಿಚಿತರು ನನ್ನ ಮೇಲೆ ನಿಗಾ ವಹಿಸಿದ್ದಾರೆ ಎಂದು ಶ್ರೀಪರ್ಣಾ ದತ್ ತಮ್ಮ ‘ಎಕ್ಸ್’ ಖಾತೆಯಲ್ಲಿ ಕೆಲವು ಸ್ಕ್ರೀನ್​ಶಾಟ್​ಗಳನ್ನು ಹಂಚಿಕೊಂಡಿದ್ದಾರೆ.
ಎಂಟು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇದೇ ಟೆಕ್ಕಿಯನ್ನು ಗೋವಾದಲ್ಲಿ ಪತ್ತೆ ಹಚ್ಚಿದ್ದಾಗ, ‘ನಾನು ಮನೆಗೆ ಬರುವುದಿಲ್ಲ. ಇಲ್ಲಿಯೇ ಇರುತ್ತೇನೆ’ ಎಂದಿದ್ದ. ನಂತರ ಪೊಲೀಸರು ಅವರ ಮನವೊಲಿಸಿ ಬೆಂಗಳೂರಿಗೆ ಕರೆದುಕೊಂಡು ಬಂದು ಕುಟುಂಬಸ್ಥರಿಗೆ ಒಪ್ಪಿಸಿದ್ದರು. ಇದೀಗ ಮತ್ತೆ ನಾಪತ್ತೆಯಾಗಿದ್ದಾರೆ. ಅವರ ಸುಳಿವು ಸಿಕ್ಕಿದ್ದು ಸದ್ಯದಲ್ಲಿಯೇ ಪತ್ತೆ ಹಚ್ಚುತ್ತೇವೆ.
| ವಿ.ಜೆ. ಸಜಿತ್ ಈಶಾನ್ಯ ವಿಭಾಗದ ಡಿಸಿಪಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + nine =
Remember me
