ಕೋಲಾರ:ಸ್ವಲ್ಪ ಜಾಗ್ರತೆ ತಪ್ಪಿದರೂ ಸಾಕು, ಯಮಪಾಶ ಕೊರಳಿಗೇ ಬಂದು ಬೀಳುತ್ತದೆ ಎಂಬುದಕ್ಕೆ ಇದೊಂದು ಉದಾಹರಣೆ ಎನ್ನಬಹುದು. ಏಕೆಂದರೆ ಸಣ್ಣದೊಂದು ಅಜಾಗರೂಕತೆಯಿಂದಾಗಿ ಇಲ್ಲೊಬ್ಬಳು ಮಹಿಳೆ ಪ್ರಾಣ ಕಳೆದುಕೊಂಡಿದ್ದಾಳೆ.
ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ರಾಬರ್ಟ್​​ಸನ್​ ಪೇಟೆಯಯಲ್ಲಿ ಇಂಥದ್ದೊಂದು ಅವಘಡ ಸಂಭವಿಸಿದೆ. ಕೌಸರ್ (37) ಎಂಬಾಕೆ ಸಾವಿಗೀಡಾದ ಮಹಿಳೆ. ಈಕೆ ಇಲ್ಲಿನ ತಹಸೀಲ್ದಾರ್ ಕಚೇರಿ ಬಳಿಯ ಅಂಗಡಿಯೊಂದರಲ್ಲಿ ಈ ದುರಂತಕ್ಕೀಡಾಗಿದ್ದಾಳೆ.
ಕಬ್ಬಿನ ಹಾಲು ತೆಗೆಯುವ ವೇಳೆ ಈಕೆಯ ಉಡುಪು ಯಂತ್ರಕ್ಕೆ ಸಿಲುಕಿ ದೇಹವನ್ನೂ ಬಳಿಗೆ ಎಳೆದುಕೊಂಡಿದ್ದರಿಂದ ಸಾವು ಸಂಭವಿಸಿದೆ. ರಾಬರ್ಟ್​ಸನ್​ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಾಕ್ಷ್ಯಚಿತ್ರದಲ್ಲಿ ‘ಕಾಳಿ’ಗೆ ಅವಮಾನ; ಚಿತ್ರ ಪ್ರದರ್ಶನ ಮಾಡದಂತೆ ಸೂಚನೆ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
