ವಿಜಯಪುರ:ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಮರ ಉರುಳಿ ಬಿದ್ದು ಓರ್ವ ಮಹಿಳೆ ಸಾವಿಗೀಡಾಗಿದ್ದು, ಐವರಿಗೆ ಗಂಭೀರ ಗಾಯಗಳಾಗಿವೆ.ಇಲ್ಲಿನ ಪೊಲೀಸ್ ಪರೇಡ್ ಮೈದಾನದ ಬಳಿ ಮಂಗಳವಾರ ಈ ಘಟನೆ ನಡೆದಿದೆ. ಸ್ಥಳೀಯ ಸಿದ್ದಾರೂಢ ಕಾಲನಿಯ ನಿವಾಸಿ ಯಲ್ಲಮ್ಮಾ ಕೊಂಡಗೂಳಿ (45) ಮೃತಪಟ್ಟವರು. ಇಂದುತಾಯಿ ಕುಲಕರ್ಣಿ, ಚಂದ್ರಕಲಾ ವಾಲೀಕಾರ, ಮಂದಾಕಿನಿ ಬಡಿಗೇರ, ಸುವರ್ಣಾ ಮಜ್ಜಿಗಿ, ಆಟೋ ಚಾಲಕ ಸಚಿನ ರಾಠೋಡ್‌ಗೆ ಗಾಯಗಳಾಗಿವೆ.
ಮದಬಾವಿ ತಾಂಡಾದ ಆಟೋ ಚಾಲಕನ ಸಂಬಂಧಿಕರ ಮನೆಯಲ್ಲಿನ ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಆಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಚಾಲಕನ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯಿಂದ ಕೆಲ ಕಾಲ ಸಂಚಾರ ಬಂದ್ ಆಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಮರ ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು.

ಬೆಂಗಳೂರು ಬಿಟ್ಟು ಹೈದರಾಬಾದ್​ಗೆ ಬನ್ನಿ ಎಂದ ತೆಲಂಗಾಣ ಸಚಿವ; ದಿಟ್ಟ ಉತ್ತರ ಕೊಟ್ಟ ಡಾ.ಕೆ.ಸುಧಾಕರ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 9 =
Remember me
