ಶಿವಮೊಗ್ಗ:ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಹೊತ್ತೊಯ್ದ ಚಿರತೆ, ಆಕೆಯ ಕತ್ತು ಹಾಗೂ ಪೃಷ್ಠದ ಭಾಗವನ್ನು ತಿಂದು ಹಾಕಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇಂಥದ್ದೊಂದು ದಾರುಣ ಪ್ರಕರಣ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಮುಖ್ಯ ರಸ್ತೆಯಲ್ಲಿರುವ ಬಿಕೋನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಇಂದು ಮಧ್ಯಾಹ್ನದ ವೇಳೆ ಜೋಳದ ಹೊಲಕ್ಕೆ ಹೋಗಿದ್ದ ಮಹಿಳೆ ಯಶೋದಮ್ಮ (47) ಚಿರತೆಗೆ ಬಲಿಯಾದವರು.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯಶೋದಮ್ಮನ ಮೇಲೆ ಚಿರತೆ ಹಿಂಬದಿಯಿಂದ ದಾಳಿ ಮಾಡಿದ್ದು, ಆಕೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬಳಿಕ ಆಕೆಯ ಶವವನ್ನು ಚಿರತೆ ಹೊತ್ತೊಯ್ದಿದೆ. ನಂತರ ಆಕೆಯ ಕತ್ತು ಹಾಗೂ ಪೃಷ್ಠದ ಭಾಗವನ್ನು ತಿಂದು ಹಾಕಿದೆ.
ಇದನ್ನೂ ಓದಿ:ಮದುವೆಯಾಗುವ ಕನಸು ಚಿಗುರಿಸಿದ ಟೊಮ್ಯಾಟೋ; ಹುಡುಗಿ ಹುಡುಕಲು ಮುಂದಾದ ಕೃಷಿಕ!
ಯಶೋದಮ್ಮ ಜೋಳಕ್ಕೆ ಗೊಬ್ಬರ ಹಾಕಲೆಂದು ಹೋಗಿದ್ದಾಗ ಇಂದು ಸಂಜೆ 4ರ ಸುಮಾರಿಗೆ ಈ ಘಟನೆ ನಡೆದಿದೆ. ಹಲವು ವರ್ಷಗಳಿಂದ ಗಂಡನ ಮನೆ ಬಿಟ್ಟು ತಂದೆ ತಾಯಿಯೊಂದಿಗೆ ಜೀವನ ನಡೆಸುತ್ತಿದ್ದ ಯಶೋದಮ್ಮ, ತಾಯಿ-ತಂದೆಗೆ ಬೆನ್ನೆಲುಬಾಗಿದ್ದರು.
ಈ ಗ್ರಾಮದಲ್ಲಿ ಚಿರತೆ ದಾಳಿಯಿಂದ ಭಯದ ವಾತಾವರಣ ಸೃಷ್ಟಿಯಾಗಿದೆ. ಕಳೆದ ಹಲವು ವರ್ಷಗಳಿಂದ ಗ್ರಾಮದ ಸುತ್ತಮುತ್ತಲಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು ಹಸುಗಳ ಮೇಲೆ ದಾಳಿ ನಡೆಸಿತ್ತು. ಈಗ ಮನುಷ್ಯರ ಮೇಲೆ ದಾಳಿ ನಡೆದಿದ್ದನ್ನು ಕಂಡು ಗ್ರಾಮಸ್ಥರು ಭಯದಲ್ಲಿ ಕಾಲ ಕಳೆಯುವಂತಾಗಿದೆ.
ಕಳವಾದ ಮೊಬೈಲ್‌ಫೋನ್ ಪತ್ತೆ ಹಚ್ಚಿ ವಾರಸುದಾರರಿಗೆ ಒಪ್ಪಿಸುವಲ್ಲಿ ಕರ್ನಾಟಕ ಪೊಲೀಸರೇ ಪ್ರಥಮ!

ತುಂಡಾಗಿ ದೇಹದಿಂದ ದೂರದಲ್ಲಿ ಬಿದ್ದ ಕೈ; ಭೀಕರ ಅಪಘಾತದಲ್ಲಿ ಮೂವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 11 =
Remember me
