ವಿಜಯಪುರ:ಹುಣಸೆಹಣ್ಣಿಗೆ ಆಸೆಪಟ್ಟ ಮಹಿಳೆಯೊಬ್ಬಳು ಇನ್ನೇನು ಹುಳಿ ಕೈಗೆ ಸಿಕ್ಕೇಬಿಟ್ಟಿತು ಎನ್ನುವಷ್ಟರಲ್ಲಿ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ವಿಜಯಪುರ ಜಿಲ್ಲೆಯಲ್ಲಿ ಇಂಥದ್ದೊಂದು ದುರಂತ ಸಂಭವಿಸಿದೆ.
ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕು ಗೆದ್ದಲಮರಿ ಗ್ರಾಮದ ಪರಮವ್ವ ಮಲ್ಲಪ್ಪ ಕುರಿ (24) ಸಾವಿಗೀಡಾದ ಮಹಿಳೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಢವಳಗಿಯಲ್ಲಿ ಈ ಘಟನೆ ನಡೆದಿದೆ.
ಈಕೆ ಢವಳಗಿ ಭಾಗದ ಹೊಲಗಳಲ್ಲಿ ಕಬ್ಬು ಕಟಾವು ಮಾಡಲು ಬಂದಿದ್ದವರ ಪೈಕಿ ಒಬ್ಬಳಾಗಿದ್ದಳು. ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಉರುವಲು ಕಟ್ಟಿಗೆ ಮುಂತಾದ ಸಾಮಗ್ರಿ ತುಂಬಿದ್ದರಿಂದ ಹುಣಸೆ ಮರವೊಂದರಲ್ಲಿನ ಹಣ್ಣು ಕೈಗೆ ಸಿಗುವಂತಿತ್ತು. ಹೀಗಾಗಿ ಈಕೆ ಅಲ್ಲಿ ಕೂತೇ ಹಣ್ಣು ಕೀಳಲು ಹೋಗಿದ್ದಾಳೆ.
ಕೈಗೆಟುಕುತ್ತಿದ್ದ ಟೊಂಗೆಯನ್ನು ಹಿಡಿದೆಳೆದು ಇನ್ನೇನು ಹುಣಸೆಹಣ್ಣನ್ನು ಕೀಳಬೇಕು ಎನ್ನುವಷ್ಟರಲ್ಲಿ ಟ್ರ್ಯಾಕ್ಟರ್ ಮುಂದಕ್ಕೆ ಚಲಿಸಿದೆ. ಆಗ ಆಯತಪ್ಪಿದ್ದಿಂದ ಈಕೆ ಕೆಳಕ್ಕೆ ಬಿದ್ದಿದ್ದಳು. ನಂತರ ಟ್ರ್ಯಾಲಿಯ ಚಕ್ರದ ಕೆಳಕ್ಕೆ ಸಿಕ್ಕಿದ್ದರಿಂದ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
‘ದೊಡ್ಡ’ದಾದ ಜಾತಿ-ಮೀಸಲಾತಿ ವಿವಾದ, ಐತಿಹಾಸಿಕ ದೇವಸ್ಥಾನದ ಟೆಂಡರೇ ರದ್ದು!
ಒಬ್ಬನೇ ಇರ್ತಿದ್ದ, ಮೊಬೈಲ್​ಫೋನ್​ ಗೀಳು ಹೊಂದಿದ್ದ ಬಾಲಕ ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರ ಮಾಡಿ ಕೊಂದ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 8 =
Remember me
