ಗದಗ:ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸುವ ಸಲುವಾಗಿ, ಕಾಂಗ್ರೆಸ್ ತನ್ನ ಐದು ಗ್ಯಾರಂಟಿಗಳ ಪೈಕಿ ಒಂದಾಗಿ ಜಾರಿಗೆ ತಂದಿರುವ ‘ಶಕ್ತಿ’ ಯೋಜನೆಗೆ ಚಾಲನೆ ಸಿಕ್ಕ ಬಳಿಕ ಹಲವಾರು ಅವಾಂತರಗಳು ನಡೆದಿವೆ. ಇದೀಗ ಅಂಥದ್ದೇ ಒಂದು ಶಕ್ತಿ ಮೀರಿದ ಪ್ರಯತ್ನದಲ್ಲಿ ಮಹಿಳೆಯೊಬ್ಬರ ಕಾಲು ಜಖಂಗೊಂಡಿದೆ.
ಇದನ್ನೂ ಓದಿ:ಬಸ್​ ಡೋರೇ ಕಿತ್ತು ಹೋಯ್ತು!; ಉಚಿತ ಪ್ರಯಾಣಕ್ಕಾಗಿ ಮಹಿಳೆಯರ ‘ಶಕ್ತಿ’ ಪ್ರಯೋಗ
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಈ ದುರ್ಘಟನೆ ನಡೆದಿದೆ. ಲಕ್ಷ್ಮೇಶ್ವರದಿಂದ ಯಲಬುರ್ಗಾ ಮಾರ್ಗವಾಗಿ ತೆರಳುತ್ತಿದ್ದ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಗಾಯಗೊಂಡಿದ್ದಾಳೆ. ಈಕೆ ಬಸ್​ ತುಂಬಿದ್ದರೂ ಅದರ ಫುಟ್​ಪಾತ್​ನಲ್ಲಿ ನಿಂತು ಪ್ರಯಾಣಿಸುತ್ತಿದ್ದಾಗ ಅವಘಡ ಸಂಭವಿಸಿದೆ.
ಇದನ್ನೂ ಓದಿ:VIDEO | ಸೀಟ್​​ಗಾಗಿ ‘ಶಕ್ತಿ’ ಪ್ರಯೋಗ: ಬಸ್​​ನೊಳಗೇ ಜಡೆ ಹಿಡಿದು ಜಗಳವಾಡಿದ ಮಹಿಳೆಯರು!
ಮುಂಭಾಗದ ಪುಟ್​ಬೋರ್ಡ್​ನಲ್ಲಿದ್ದ ಈಕೆ ಚಲಿಸುತ್ತಿದ್ದ ಬಸ್​ನಿಂದ ಕೆಳಕ್ಕೆ ಬಿದ್ದಿದ್ದು, ಈಕೆಯ ಕಾಲಿನ ಮೇಲೆ ಬಸ್​ನ ಹಿಂಭಾಗ ಚಕ್ರ ಹಾದುಹೋಗಿದೆ. ಹೀಗಾಗಿ ಈಕೆಯ ಕಾಲಿಗೆ ಗಂಭೀರವಾದ ಗಾಯವಾಗಿದೆ. ಎರಡು ಮೂರು ದಿನಗಳ ಹಿಂದೆ ಸಂಭವಿಸಿರುವ ಈ ಈ ಘಟನೆಯ ಸಿಸಿಟಿವಿ ದೃಶ್ಯ ಇದೀಗ ವೈರಲ್ ಆಗಲಾರಂಭಿಸಿದೆ.
ಪ್ರೀತಿ ಇದ್ದರೂ ಪತ್ನಿ ಯಾಕೆ ಪತಿಯಿಂದ ವಿಮುಖಳಾಗುತ್ತಾಳೆ?; ಇದು ವಿವಾಹಿತರಿಗೊಂದು ಕಿವಿಮಾತು, ಎಚ್ಚರಿಕೆ ಕೂಡ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + twenty =
Remember me
