ಶಿವಮೊಗ್ಗ:ಮೆಗ್ಗಾನ್ ಆಸ್ಪತ್ರೆಯ ಸಖಿ ವಿಭಾಗದಲ್ಲಿದ್ದ 15 ವರ್ಷದ ಬಾಲಕಿಗೆ ಕರೊನಾ ಸೋಂಕು ಇರುವುದು ದೃಢಪಟ್ಟಿದೆ. 5 ದಿನಗಳ ಹಿಂದೆ ಶಿಕಾರಿಪುರ ತಾಲೂಕಿನ ಗ್ರಾಮವೊಂದರಲ್ಲಿ ಬಾಲ್ಯವಿವಾಹ ನಡೆಯುತ್ತಿರುವ ಬಗ್ಗೆ ಶಿಶು ಅಧಿಕಾರಿಗಳಿಗೆ ಮಾಹಿತಿ ಬಂದಿತ್ತು. ಅಲ್ಲಿಂದ ಬಾಲಕಿಯನ್ನು ರಕ್ಷಿಸಿ ಕರೆತರಲಾಗಿತ್ತು. ವೈದ್ಯಕೀಯ ತಪಾಸಣೆಗೊಳಪಡಿಸಿದಾಗ 5 ತಿಂಗಳ ಗರ್ಭಿಣಿಯಾಗಿರುವುದು ತಿಳಿದ ಹಿನ್ನೆಲೆಯಲ್ಲಿ ಸಖಿ ವಿಭಾಗಕ್ಕೆ ಕಳಿಸಲಾಗಿತ್ತು.
ಅಪ್ರಾಪ್ತೆ ಗರ್ಭ ಧರಿಸಲು ಕಾರಣನಾದ ಆರೋಪಿಯನ್ನು ಠಾಣೆಗೆ ಕರೆಸಿಕೊಂಡು ತನಿಖೆ ನಡೆಸಲಾಗಿತ್ತು. ತನಿಖೆ ನಡೆಸಿದ್ದ ಕೆಲ ಪೊಲೀಸ್ ಅಧಿಕಾರಿಗಳು ಇಲಾಖೆ ಸಭೆಯಲ್ಲೂ ಭಾಗವಹಿಸಿದ್ದರು. ಮೆಗ್ಗಾನ್ ಆಸ್ಪತ್ರೆಯ ಸಖಿ ವಿಭಾಗದಲ್ಲಿ ಅಪ್ರಾಪ್ತೆಗೆ ಆಪ್ತಸಮಾಲೋಚನೆ ನೀಡಲಾಗಿತ್ತು. ಹೀಗಾಗಿ ಹಲವು ಪೊಲೀಸರು ಹಾಗೂ ಮೆಗ್ಗಾನ್ ಆಸ್ಪತ್ರೆಯ ಸಖಿ ವಿಭಾಗದ ಸಿಬ್ಬಂದಿಯನ್ನೂ ಕ್ವಾರಂಟೈನ್​ಗೆ ಒಳಪಡಿಸಬೇಕಾಗಿದೆ. ಕೆಲ ದಿನಗಳ ಮಟ್ಟಿಗೆ ಸಖಿ ಕೇಂದ್ರವನ್ನು ಸೀಲ್​ಡೌನ್ ಮಾಡುವ ಸಾಧ್ಯತೆಯೂ ಇದೆ.
ಸಂತ್ರಸ್ತೆ ಮತ್ತು ಆರೋಪಿಯನ್ನು ಪೊಲೀಸರು ಕರೆದೊಯ್ದು ಸ್ಥಳ ಮಹಜರು ಮಾಡಿ ಠಾಣೆಗೂ ಕರೆತಂದಿದ್ದಾರೆ. ಹೀಗಾಗಿ ದೊಡ್ಡ ಪ್ರಮಾಣದಲ್ಲಿ ಶಿವಮೊಗ್ಗ ಪೊಲೀಸ್ ಆಡಳಿತದಲ್ಲಿ ಎಎಸ್​ಪಿ, ಡಿವೈಎಸ್​ಪಿ, ಸಿಪಿಐ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗುತ್ತಿದೆ.
| ಬಸವರಾಜ ಬೊಮ್ಮಾಯಿ ಗೃಹ ಸಚಿವ (ಹಾವೇರಿಯಲ್ಲಿ)
ಇದನ್ನೂ ಓದಿ:ಮುಂಬೈನಲ್ಲಿ ಮಾಡುತ್ತಿದ್ದದ್ದು ಕೂಲಿ ಕೆಲಸ, ಇಲ್ಲಿ ಬೇಕಂತೆ ಬಾಸುಮತಿ ಅನ್ನ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − eight =
Remember me
