ಬೆಂಗಳೂರು:ಇತ್ತೀಚೆಗೆ ಲೈಂಗಿಕ ಕಿರುಕುಳ, ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು ಈಗ ನಾಗರಭಾವಿಯ ಬಳಿ ನಡೆದ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.
ಸಂತ್ರಸ್ತ ಮಹಿಳೆ, ನಿನ್ನೆ (ಮಂಗಳವಾರ) ಸಂಜೆ ಸುಮಾರು 5.30ರ ಹೊತ್ತಿಗೆ ನಾಯಂಡಹಳ್ಳಿ ಜಂಕ್ಷನ್ ಬಳಿ ಬಸ್ ಹತ್ತಿದ್ದರು. ಬಸ್​ನಲ್ಲಿ ಯಾರೂ ಇರಲಿಲ್ಲ. ಆದರೆ ಚಾಲಕ ಪರಿಚಿತ ಆಗಿದ್ದ ಕಾರಣ ಮಹಿಳೆ ಬಸ್​ ಹತ್ತಿದ್ದರು. ಈ ವೇಳೆ ಬಸ್ಅನ್ನು ನಾಗರಭಾವಿ ಸರ್ವೀಸ್ ರಸ್ತೆಗೆ ಕಿರಾತಕ ತೆಗೆದುಕೊಂಡು ಹೋಗಿದ್ದಾನೆ. ಕೈಲಾಸಗಿರಿ ಬಳಿ ಇರುವ ಮಲೆ ಮಹದೇಶ್ವರ ದೇವಸ್ಥಾನದ ಬಳಿ ಬಸ್​ ನಿಲ್ಲಿಸಿ ಮಹಿಳೆ ಮೇಲೆ ಅತ್ಯಾಚಾರ ಮಾಡಿ ಎಸ್ಕೇಪ್ ಆಗಿದ್ದಾನೆ. ಈ ವೇಳೆ ಸಂತ್ರಸ್ತ ಮಹಿಳೆ ಬಸ್ ಪೋಟೋ ತೆಗೆದುಕೊಂಡಿದ್ದಾರೆ.
ಇದಾದ ಬಳಿಕ ಆಘಾತಗೊಂಡ ಮಹಿಳೆ ತನ್ನ ಮಗನಿಗೆ ಘಟನೆಯ ಬಗ್ಗೆ ತಿಳಿಸಿದ್ದರು. ಈ ಘಟನೆಯ ನಂತರ ಸಂತ್ರಸ್ತೆ ಮಗ ಚಾಲಕನನ್ನು ಹುಡುಕಿಕೊಂಡು ಹೋಗಿ ಜಗಳವಾಡಿದ್ದಾನೆ. ಈ ಮಾಹಿತಿಯನ್ನು ಯಾರೋ ಚಂದ್ರಾ ಲೇಔಟ್​ ಪೊಲೀಸರಿಗೆ ಮುಟ್ಟಿಸಿದ್ದು ಇದರಿಂದ ಘಟನೆ ಬೆಳಕಿಗೆ ಬಂದಿದೆ.
ಇದಾದ ಮೇಲೆ ಸಂತ್ರಸ್ತೆ ಚಂದ್ರಾ ಲೇಔಟ್​ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eight + twenty =
Remember me
