ಬಾಗಲಕೋಟೆ:ಮೂವತ್ತು ಪ್ರಯಾಣಿಕರಿದ್ದ ಕೆಎಸ್​​ಆರ್​​ಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ರಸ್ತೆ ಬದಿಯಲ್ಲಿ ಸಾಗುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ಬಾಗಲಕೋಟೆ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಬಾದಾಮಿಯಲ್ಲಿ ನಡೆದ ಈ ಅಪಘಾತದಲ್ಲಿ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕಾಳಾಪುರ ತಾಂಡಾ ನಿವಾಸಿ ವೆಂಕುಬಾಯಿ ರಾಮಣ್ಣ ಚವ್ಹಾಣ (35) ಸಾವಿಗೀಡಾಗಿದ್ದಾರೆ. ಈಕೆ ತನ್ನ ಪತಿ ಹಾಗೂ ಮಗುವಿನೊಂದಿಗೆ ದೇವಸ್ಥಾನಕ್ಕೆ ಹೋಗುವಾಗ ಈ ಅಪಘಾತ ಸಂಭವಿಸಿದೆ‌.
ಬಾದಾಮಿಯಿಂದ ಕೆರೂರು ಕಡೆಗೆ ಹೋಗುತ್ತಿದ್ದ ಕೆಎಸ್ಆರ್​​ಟಿಸಿ ಬಸ್ ಪಾಟಾ ಕಟ್​ ಆಗಿ ನಿಯಂತ್ರಣ ತಪ್ಪಿ ವೆಂಕುಬಾಯಿ ಅವರ ಮೈಮೇಲೆ ಸಾಗಿಹೋಗಿದೆ. ಅದೃಷ್ಟವಶಾತ್ ಇವರ ಪತಿ ಹಾಗೂ ಮಗು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ವೆಂಕುಬಾಯಿ ಹಾಗೂ ಕುಟುಂಬ ಬಾದಾಮಿ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಬಸ್​ನಲ್ಲಿ ಮೂವತ್ತಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಸ್ಥಳಕ್ಕೆ ಬಾದಾಮಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದು ವಿದೇಶದಲ್ಲಿನ ಪ್ರಪ್ರಥಮ ಸ್ವಂತ ಕನ್ನಡ ಭವನ; 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ..
ಹುಣಸೇಮರದಲ್ಲಿ ಕೋತಿಗಳಿಗೆ ನೇಣು; 2 ಮಂಗಗಳ ಸಾವು, ಇನ್ನೆರಡು ಬಚಾವು: ಇದೆಂಥ ವಿಕೃತಿ?
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven + 16 =
Remember me
