ಬೆಂಗಳೂರು:ರಾಜ್ಯದಲ್ಲಿ 61 ಲಕ್ಷ ಕೋವಿಡ್ ಲಸಿಕೆ ನೀಡಿದ್ದು, ಈ ಪೈಕಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ಲಸಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಚಿವರು, ರಾಜ್ಯಕ್ಕೆ 72 ಲಕ್ಷಕ್ಕೂ ಹೆಚ್ಚು ಲಸಿಕೆ ಬಂದಿದೆ. ರಾಜ್ಯದಲ್ಲಿ 61 ಲಕ್ಷ ಕೋವಿಡ್ ಲಸಿಕೆ ನೀಡಿದ್ದು, 53% ರಷ್ಟು ಮಹಿಳೆಯರಿಗೆ ನೀಡಲಾಗಿದೆ. ಆದ್ದರಿಂದ ಮಹಿಳೆಯರೇ ನಿಜವಾದ ಮಾದರಿ, ಮಾರ್ಗದರ್ಶಕರು. ಈ ಶತಮಾನದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದರು.
ಇದನ್ನೂ ಓದಿ:ಸಿದ್ದರಾಮಯ್ಯ ನಾಲಿಗೆ ಮತ್ತು ಮಿದುಳಿಗೆ ನಿಯಂತ್ರಣ ಇಲ್ಲ: ಶೋಭಾ ಕರಂದ್ಲಾಜೆ
ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿದ, ಅಸಮಾನತೆ ನಿವಾರಿಸಲು ಕೆಲಸ ಮಾಡಿದ ಜ್ಯೋತಿಬಾಫುಲೆ ಅವರ ಜನ್ಮದಿನ ಹಾಗೂ ಸಮಾನತೆ, ಸ್ವಾತಂತ್ರ್ಯ ಕ್ಕೆ ಹೋರಾಡಿದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಕರೆ ಮೇರೆಗೆ ಲಸಿಕೋತ್ಸವ ಮಾಡಲಾಗುತ್ತಿದೆ. ಲಸಿಕೆ ವಿಚಾರದಲ್ಲಿ ರಾಜಕೀಯ, ಧರ್ಮ, ಭಾಷೆ ಬೆರೆಸುವ ಕೆಲಸ ಮಾಡಬಾರದು. ಸಾಂಕೇತಿಕವಾಗಿ ಎಲ್ಲ ಧರ್ಮಗಳ ಮಹಿಳೆಯರಿಗೆ ಲಸಿಕೆ ನೀಡುವ ಮೂಲಕ ವಿಶೇಷ ಲಸಿಕೋತ್ಸವಕ್ಕೆ ಚಾಲನೆ ನೀಡಲಾಗಿದೆ ಎಂದರು.
ಮೇ ತಿಂಗಳ ಆರಂಭದಲ್ಲಿ ಕರೊನಾ ಪ್ರಕರಣ ಹೆಚ್ಚಳ ಅಂತ್ಯದಲ್ಲಿ ಇಳಿಕೆ: ತಜ್ಞರ ಅಂದಾಜು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − 14 =
Remember me
