ಬೆಂಗಳೂರು:ರಾಜ್ಯದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಕರ್ನಾಟಕ ಲೇಖಕಿಯರ ಸಂಘದ ಕಾರ್ಯ ಚಟುವಟಿಕೆಗಳಿಗೆ ಒಂದು ಕೋಟಿ ರೂಪಾಯಿ ವಿಶೇಷ ಅನುದಾನ ನೀಡಬೇಕು ಎಂದು ಸಂಘದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.
ಸಂಘದ ಅಧ್ಯಕ್ಷೆ ಹೆಚ್.ಎಲ್.ಪುಷ್ಪ ಅವರ ನೇತೃತ್ವದ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹಲವು ಮಹತ್ವದ ಸಂಗತಿಗಳನ್ನು ಚರ್ಚಿಸಿ ತಮ್ಮ ಬೇಡಿಕೆಗಳನ್ನು ಮಂಡಿಸಿದೆ.
ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್.ಪುಷ್ಪ ಅವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿ@siddaramaiahಅವರನ್ನು ಭೇಟಿಯಾಗಿ ಹಲವು ಪ್ರಮುಖ ಸಂಗತಿಗಳ ಕುರಿತು ಚರ್ಚಿಸಿ, ತಮ್ಮ ಬೇಡಿಕೆಗಳನ್ನು ಸಲ್ಲಿಸಿದರು.pic.twitter.com/Wv39Lqoc76
ಇದನ್ನೂ ಓದಿ:ಈದ್​ ಹಬ್ಬದಂದು ಮುಸ್ಲಿಂ ಬಾಲಕಿಗೆ ದುರ್ಗೆಯ ಅಲಂಕಾರ
ವಿಶೇಷ ಅನುದಾನದ ಜತೆಗೆ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅರ್ಹ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು, ‘ನನ್ನ ಕವಿತೆ-ನನ್ನ ಹಾಡು” ಯೋಜನೆಯ ಹಣವನ್ನು ಬಿಡುಗಡೆ ಮಾಡಲು ಸೂಚಿಸಬೇಕು ಎನ್ನುವುದೂ ಸೇರಿ ಹಲವು ಹಕ್ಕೊತ್ತಾಯಗಳನ್ನು ಮುಖ್ಯಮಂತ್ರಿಗಳ ಬಳಿ ಮಂಡಿಸಿದ್ದಾರೆ.
ನಿಯೋಗದಲ್ಲಿ ವಸುಂಧರಾ ಭೂಪತಿ, ಎಂ.ಎಸ್.ಆಶಾದೇವಿ, ಬಿ.ಟಿ.ಲಲಿತಾನಾಯಕ್ ಸೇರಿ ಹಲವು ಲೇಖಕಿಯರು ಉಪಸ್ಥಿತರಿದ್ದರು.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:two × two =
Remember me
