ಬೆಂಗಳೂರು:ಇತ್ತೀಚಿನ ದಿನಗಳಲ್ಲಿ ನಟ ದರ್ಶನ್​​ಗೂ ವಿವಾದಕ್ಕೂ ಎಲ್ಲಿಲ್ಲದ ನಂಟು ಎಂದು ಹೇಳಬಹುದಾಗಿದೆ. ಕಾಟೇರ 50ನೇ ದಿನದ ಸಂಭ್ರಮಾಚರಣೆ ಹಾಗೂ ಡಿ ಪರ್ವ 25 ಕಾರ್ಯಕ್ರಮದಲ್ಲಿ ನಟ ದರ್ಶನ್​ ನೀಡಿದ್ದ ಹೇಳಿಕೆಗಳು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಈಗ ನಟ ದರ್ಶನ್​ಗೆ ರಾಜ್ಯ ಮಹಿಳಾ ಆರೋಗ ನೋಟಿಸ್​ ಜಾರಿ ಮಾಡಿದೆ.
ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಗೌಡತಿಯರ ಸಂಘ ನೀಡಿದ ದೂರನ್ನು ಆಧರಿಸಿ ನಟ ದರ್ಶನ್​ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ರಾಜ್ಯ ಮಹಿಳಾ ಆರೋಗವು ಒಂದು ವಾರದೊಳಗೆ ವಿವರಣೆ ನೀಡುವಂತೆ ಜಾರಿ ಮಾಡಲಾಗಿರುವ ನೋಟಿಸ್​ನಲ್ಲಿ ಸೂಚಿಸಲಾಗಿದೆ.
ಇದನ್ನೂ ಓದಿ:ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಕೃತ್ಯ; ಭೂ ಒತ್ತುವರಿ ಪ್ರಶ್ನಿಸಿದ್ದಕ್ಕೆ ವಿವಸ್ತ್ರಗೊಳಿಸಿ ಮಹಿಳೆ ಮೇಲೆ ಹಲ್ಲೆ
ಶ್ರೀರಂಗಪಟ್ಟಣದಲ್ಲಿ ನಡೆದ 25ನೇ ವರ್ಷದ ವಾರ್ಷಿಕೋತ್ಸವದ  ಸಾರ್ವಜನಿಕ ಸಭೆಯಲ್ಲಿ ದರ್ಶನ್‌ ಮಹಿಳೆಯರ ಬಗ್ಗೆ  ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆಂದು ಗೌಡತಿಯರ ಸೇನೆ  ಆರೋಪಿಸಿತ್ತು. ಇದನ್ನ ಖಂಡಿಸಿ ಗೌಡತಿಯ ಸೇನೆ ಪ್ರತಿಭಟನೆ ನಡೆಸಿ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿತ್ತು.
ಹೆಣ್ಣಿನ ಬಗ್ಗೆ ಅವಹೇಳನಕಾರಿಯಾಗಿ ದರ್ಶನ್ ಮಾತನಾಡಿದ್ದಾರೆ. ಇವತ್ತು ಇವಳು ಇರುತ್ತಾಳೆ, ನಾಳೆ ಅವಳು ಬರ್ತಾಳೆ ಎಂದು ವೇದಿಕೆಯ ಮೇಲೆಯೇ ಹೇಳಿದ್ದಾರೆ. ಈ ಹೇಳಿಕೆಗೆ ವಿರೋಧಿಸಿ ಒಕ್ಕಲಿಗ ಗೌಡತಿಯರು ಆಕ್ಷೇಪ ವ್ಯಕ್ತ ಪಡಿಸಿದ್ದರು. ಹೆಣ್ಣು ಮಕ್ಕಳಿಗೆ ಇದು ಅವಮಾನ ಮಾಡುವಂಥದ್ದು ಎಂದು ಮಹಿಳಾ ಆಗೋಕ್ಕೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
