ಬೆಂಗಳೂರು:ಹಿಂದು ಪದಕ್ಕೆ ಅಶ್ಲೀಲ ಎಂಬ ಅರ್ಥವಿದೆ ಎಂಬ ಹೇಳಿಕೆ ನೀಡಿದ್ದ ಸಚಿವ ಸತೀಶ್‌ ಜಾರಕಿಹೊಳಿ ಸಂಕಷ್ಟ ಎದುರಾಗಿದ್ದು, ಈ ಸಂಬಂಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲು ಜನಪ್ರತಿನಿಧಿಗಳ ನ್ಯಾಯಾಲಯ ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿದೆ.
ಇದನ್ನೂ ಓದಿ:ನಮಾಜ್‌ಗಾಗಿ ಪರೀಕ್ಷೆ ಸಮಯವೇ ಬದಲು ಮಾಡಿತ ರಾಜ್ಯ ಸರ್ಕಾರ?
ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ 2022ರ ನವೆಂಬರ್ 6ರಂದು ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅವರು, ಹಿಂದು ಎಂಬ ಪದಕ್ಕೆ ಅಶ್ಲೀಲ, ಕೊಳಕು, ಅಸಭ್ಯ ಅರ್ಥವಿದೆ. ಇದರ ಮೂಲ ಭಾರತದಲ್ಲ ಹಿಂದು ಎಂಬ ಪದ ಪರ್ಷಿಯನ್ ಭಾಷೆಯಿಂದ ಬಂದಿದೆ. ಹಿಂದು ಎಂಬ ಪದ ಎಲ್ಲಿಂದ ಹುಟ್ಟಿತು? ಅದು ನಮ್ಮದೇ? ಇದು ಪರ್ಷಿಯನ್, ಇರಾನ್, ಇರಾಕ್, ಉಜ್ಬೇಕಿಸ್ತಾನ್, ಕಜಕಿಸ್ತಾನ್ ಪ್ರದೇಶದಿಂದ ಬಂದಿದೆ. ಹಿಂದು ಪದಕ್ಕೂ ಭಾರತಕ್ಕೂ ಏನು ಸಂಬಂಧ? ಹಾಗಾದರೆ ನೀವು ಅದನ್ನು ಹೇಗೆ ಒಪ್ಪಿಕೊಳ್ಳುತ್ತೀರಿ? ಇದನ್ನು ಚರ್ಚೆ ಮಾಡಬೇಕು ಎಂದಿದ್ದರು.
ಇದಾದ ನಂತರ ಸತೀಶ್​ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಬಿಜೆಪಿ ನಾಯಕರು, ಹಿಂದೂ ಕಾರ್ಯಕರ್ತರು ಹಾಗೂ ವಕೀಲ ದಿಲೀಪ್ ಕುಮಾರ್ ಅವರು ಖಾಸಗಿ ದೂರು ದಾಖಲಿಸಿದ್ದರು. ಈ ಹೇಳಿಕೆ ನಂತರ ಸತೀಶ್​ ಜಾರಕಿಹೊಳಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ, ಲೋಕೋಪಯೋಗಿ ಸಚಿವ ಆಗಿದ್ದಾರೆ. ಆದ್ದರಿಂದ ವಕೀಲ ದಿಲೀಪ್​ ಕುಮಾರ್​ ಎಂಬುವರು ನೀಡಿದ್ದ ದೂರಿನ ಪ್ರಕರಣದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಜನಪ್ರತಿನಿಧಿಗಳ ನ್ಯಾಯಾಲಯ, ಸಚಿವ ಸತೀಶ್ ಜಾರಕಿಹೊಳಿ‌ ವಿರುದ್ಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಕೇಸ್​ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶಿಸಿದೆ.
ಕಾನೂನು ಹೋರಾಟ ಮಾಡುತ್ತೇವೆ:ಆದೇಶದ ಪ್ರತಿಯಲ್ಲಿ ಏನಿದೆ ಅಂತಾ ನೋಡಬೇಕಿದೆ. ಆದೇಶದ ಪ್ರತಿ ನನಗೆ ಸಿಕ್ಕಿಲ್ಲ, ಕಾನೂನು ಹೋರಾಟ ಮಾಡುತ್ತೇವೆ. ಹಿಂದು ಪದದ ಬಗ್ಗೆ ನನ್ನ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಯಾರೋ ಕೇಸ್ ಹಾಕಿದ್ದರು. ನ್ಯಾಯಾಲಯ ಏನು ಆದೇಶ ನೀಡಿದೆ ನೋಡೋಣ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಹೇಳಿದರು.
ಇದು ಚೀಲ ಅಲ್ಲ, ಶೀಲದ ವಿಚಾರ…ಪತಿವ್ರತೆ ಅಂತ ಪ್ರೂವ್ ಮಾಡೋಕೆ ಹೊರಟುಬಿಟ್ಟಿದ್ದಳು: ಹೀಗೆಂದಿದ್ಯಾಕೆ ಗುರುಪ್ರಸಾದ್?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − five =
Remember me
