ಬೆಂಗಳೂರು:ಒಂದು ಜಿಲ್ಲೆ, ಒಂದು ಕ್ರೀಡೆ ಎಂಬ ಪರಿಕಲ್ಪನೆಯಡಿ ಹೋಬಳಿ ಮಟ್ಟದಲ್ಲಿ ಕ್ರೀಡಾಂಗಣ ಅಭಿವೃದ್ಧಿಗೆ ಕಾರ್ಯಯೋಜನೆ ಸಿದ್ಧಪಡಿಸಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾಸಚಿವ ಬಿ.ನಾಗೇಂದ್ರ ತಿಳಿಸಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಮತ್ತು ಹೋಬಳಿ ಮಟ್ಟದಲ್ಲಿ ಕ್ರೀಡಾ ಮೂಲ ಸೌಲಭ್ಯಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಕಂದಾಯ ಇಲಾಖೆ ಕ್ರೀಡಾಂಗಣಗಳಿಗಾಗಿ ಹೋಬಳಿ ಮಟ್ಟದಲ್ಲಿ ಸರ್ಕಾರಿ ಶಾಲೆಗಳ ಸಮೀಪ ಖಾಲಿ ಇರುವ ಜಾಗಗಳನ್ನು ಗುರುತಿಸಿದೆ. ಆ ಜಾಗದ ವಿವರವಾದ ಪಟ್ಟಿಯೊಂದಿಗೆ ಕಂದಾಯ ಇಲಾಖೆ ವರದಿ ಸಲ್ಲಿಸಿದ ಬಳಿಕ ಕ್ರೀಡಾಂಗಣದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪ್ರತಿ ವರ್ಷ ಕ್ರೀಡಾ ಇಲಾಖೆಗೆ 100 ಕೋಟಿ ರೂ ಅನುದಾನ ಲಭ್ಯವಿದೆ. ಅದರಲ್ಲಿ ಹಂತ ಹಂತವಾಗಿ ಕ್ರೀಡಾ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು. ಒಂದು ಜಿಲ್ಲೆ, ಒಂದು ಕ್ರೀಡೆ ಎಂಬ ಪರಿಕಲ್ಪನೆಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಬಿ.ನಾಗೇಂದ್ರ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + seven =
Remember me
