ಬೆಂಗಳೂರು:ವಿಶ್ವ ಹಿಂದು ಅಂತರ್ಜಾತಿ ವಿವಾಹ ಪ್ರೋತ್ಸಾಹ ಸಂಘ ವತಿಯಿಂದ ಜ.4 ಮತ್ತು ಜ.5ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮನ್ನಿಕೇರಿಯ ಶ್ರೀ ಮಹಾಂತಲಿಂಗೇಶ್ವರ ಮಠದಲ್ಲಿ ವಿಶ್ವ ಹಿಂದು ಅಂತರ್ಜಾತಿ ವಿವಾಹಿತರ ಸಮಾವೇಶ ನಡೆಯಲಿದೆ.
ಸಂಘದ ವಾರ್ಷಿಕೋತ್ಸವ ಅಂಗವಾಗಿ ನಡೆಯಲಿರುವ ಸಮಾವೇಶವನ್ನು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಲಿದ್ದಾರೆ. ಜ.4ರ ರಾತ್ರಿ 7.30ಕ್ಕೆ ಜರುಗಲಿರುವ ವಿರಾಟ್ ಹಿಂದು ಧರ್ಮ ಜಾಗೃತಿ ಸಮಾವೇಶಕ್ಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಚಾಲನೆ ನೀಡಲಿದ್ದಾರೆ. ಸಂಸದ ಈರಣ್ಣ ಕಡಾಡಿ, ಖ್ಯಾತ ವಾಗ್ಮಿ ಜಗದೀಶ ಕಾರಂತ ಮುಖ್ಯ ಆತಿಥಿಗಳಾಗಿ ಭಾಗಿಯಾಗಲಿದ್ದಾರೆ. ಮಠದ ಅಧ್ಯಕ್ಷ ಶ್ರೀ ವಿಜಯ ಸಿದ್ದೇಶ್ವರ ಸ್ವಾಮೀಜಿ, ಸಂಘದ ಗೌರವಾಧ್ಯಕ್ಷ ಶ್ರೀ ಆರೂಢ ಭಾರತಿ ಸ್ವಾಮೀಜಿ ಉಪಸ್ಥಿತಿ ಇರಲಿದ್ದಾರೆ. ‘ಜಾತ್ಯಾತೀತ ಜ್ಯೋತಿ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಜ.5ರ ಬೆಳಗ್ಗೆ 11ಕ್ಕೆ ಜಾತ್ಯಾತೀತ ಹಿಂದು ಸಮಾವೇಶವನ್ನು ಕನ್ಹೇರಿ ಮಠದ ಜಗದ್ಗುರು ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಬಾಲಚಂದ್ರ ಜಾರಕಿಹೊಳಿ ಉಪಸ್ಥಿತಿ ಇರಲಿದ್ದಾರೆ. ಅಂದಾಜು 10 ಸಾವಿರ ಮಂದಿ ಆಗಮಿಸುವ ನಿರೀಕ್ಷೆ ಇದೆ ಎಂದು ಪ್ರಕಟಣೆಯಲ್ಲಿ ಸಂಘ ಮಾಹಿತಿ ನೀಡಿದೆ. ವಿವರಕ್ಕಾಗಿ 9480455594ಕ್ಕೆ ಸಂಪರ್ಕಿಸಬಹುದು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:two × one =
Remember me
