ಬೆಂಗಳೂರು:ಆಷಾಢ ಅಮಾವಾಸ್ಯೆ ದಿನವಾದ ಇಂದು (ಜುಲೈ 28) ಬೆಂಗಳೂರಿನ ವಿಜಯನಗರದ ಬಂಟರ ಸಂಘದ ಸಭಾಂಗಣಲ್ಲಿ ‘ವಿಶ್ವ ಕುಂದಾಪ್ರ ಕನ್ನಡ ದಿನ’ವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕುಂದಾಪುರ ಭಾಷೆ-ಬದುಕಿನ ಕುರಿತಾದ ಹಲವು ಕಾರ್ಯಕ್ರಮಗಳು ಪ್ರೇಕ್ಷಕರ ಮನಸೆಳೆದವು.
ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಜನರು ಕುಂದಗನ್ನಡ ಭಾಷೆಯ ಮೇಲಿನ ಅಭಿಮಾನದಿಂದ 2019ರಿಂದ ವಿಶ್ವದ ಎಲ್ಲೆಡೆ ವಿಶ್ವ ಕುಂದಾಪ್ರ ಕನ್ನಡ ದಿನವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಈ ಬಾರಿಯೂ ಅದ್ದೂರಿಯಾಗಿ ಕಾರ್ಯಕ್ರಮ ನಡೆದಿದೆ. ಸಂಜೆ 4ಕ್ಕೆ ಆರಂಭವಾದ ಕಾರ್ಯಕ್ರಮದಲ್ಲಿ ಕುಂದಾಪ್ರ ‌ಕನ್ನಡ ಗೀತೆಯನ್ನು ಯುವ ಗಾಯಕಿ ಸಾನ್ವಿ ಶೆಟ್ಟಿ ಹಾಡಿ ರಂಜಿಸಿದರು. ಚೇತನ್ ನೈಲಾಡಿ ನೇತೃತ್ವದಲ್ಲಿ ‘ಹೆಂಗಸರ ಪಂಚಾಯ್ತಿ’ ಕಾರ್ಯಕ್ರಮದ ಮೂಲಕ ಸಂಸ್ಕ್ರತಿ ಬಿಂಬಿಸುತ್ತಾ ಹಾಸ್ಯದ ಮೂಲಕ ಭಾಷಿ, ಬದ್ಕ್​ ಅನಾವರಣವಾಯಿತು. ವಿಶೇಷವಾಗಿ ಕುಂದಾಪುರ ಆಚಾರ-ಸಂಸ್ಕೃತಿ-ಆಚರಣೆ ಕುರಿತಾದ ಕುಂದಾಪುರ ಕಟ್ಕಟ್ಲೆ, ಕುಂದಾಪ್ರ ಗೀತಗಾಯನ, ಮನು ಹಂದಾಡಿ ಮಾತು, ಕುಶಲವ ಯಕ್ಷಗಾನ, ಕಿರುಚಿತ್ರ ಬಿಡುಗಡೆ ಸೇರಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ರಸದೌತಣ ಉಣಬಡಿಸಿದವು.
ಕುಂದಾಪ್ರ ಕನ್ನಡದ ರಾಯಭಾರಿ ‌ಎಂದೇ ಖ್ಯಾತಿಯಾಗಿರೋ ಮನು ಹಂದಾಡಿ, ಕುಂದಾಪ್ರ ಭಾಷೆಯಲ್ಲಿ ಹಾಸ್ಯದ ಮೂಲಕವೇ ಭಾಷೆಯ ಮಹತ್ವ ಸಾರಿದರು. ತಮ್ಮ ಮಾತಿನ ಕೊನೆಯವರೆಗೂ ಪ್ರೇಕ್ಷಕರನ್ನು ನೆಗೆಗಡಲಲ್ಲಿ ತೇಲಿಸಿದರು. ಕುಂದಾಪ್ರ ಕಟ್ಕಟ್ಲೆ ಕಾರ್ಯಕ್ರಮದ ಮೂಲಕ ಈ ಭಾಗದ ಮಹತ್ವದ ಸಂಸ್ಕ್ರತಿಯನ್ನು ಪರಿಚಯಿಸಲಾಯಿತು. ನವರಾತ್ರಿ ಸಮಯದಲ್ಲಿನ ಕಟ್ಟೆಪೂಜೆ, ಹುಲಿವೇಷ ಆರ್ಭಟವನ್ನೂ ಅನಾವರಣ ಮಾಡಲಾಯಿತು. ಬಲೀಂದ್ರ ಪೂಜೆಯ ಮೌಲ್ಯವನ್ನೂ ತಿಳಿಸಲಾಯಿತು. ಅತಿ ವಿರಳವಾಗಿರುವ ‘ವಸಂತ ಕುಣಿತ’ದ ಹೌದರಾಯನ ವಾಲಗದ ಕುಣಿತವನ್ನೂ ಬೆಂಗಳೂರಿನಲ್ಲಿ ಪ್ರದರ್ಶಿಸಿದ್ದು ವಿಶೇಷ.
ಭಜನಾ ಕುಣಿತ ಪ್ರದರ್ಶಿಸಿ ‌ಭಕ್ತಿ-ಭಾವ ಮೆರೆಯಲಾಯಿತು. ಕರಾವಳಿ ಭಾಗದಲ್ಲಿ ಯಕ್ಷಗಾನವನ್ನ ಆರಾಧಿಸುತ್ತಾರೆ. ವಿಶ್ವ ಕುಂದಾಪ್ರ‌ ದಿನಾಚರಣೆಯಲ್ಲಿ ವೀರ ಅಭಿಮನ್ಯು ‌ಕಾಳಗದ ಯಕ್ಷಗಾನದಲ್ಲಿ ಅಭಿಮನ್ಯುವನ್ನು ಯುದ್ಧಭೂಮಿಗೆ ಸುಭದ್ರೆ ನೋವಿನಿಂದಲೇ ಕಳಿಸಿಕೊಡುವ ಸಂದರ್ಭದ ಯಕ್ಷಗಾನ ತುಣುಕನ್ನೂ ಪ್ರದರ್ಶಿಸಲಾಯಿತು. ದಿಮ್ಸಾಲ್, ತುಳಸಿ ಪೂಜೆ ಸೇರಿ ಕುಂದಾಪುರ ಸಂಸ್ಕ್ರತಿಯನ್ನ ಅನಾವರಣ ಮಾಡುವ ಮೂಲಕ ವಿಶ್ವ ಕುಂದಾಪ್ರ ಕನ್ನಡ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಕುಂದಾಪ್ರ ಸಂಸ್ಕ್ರತಿಯನ್ನ ಸದುದ್ದೇಶದಿಂದ ವಿಜೃಂಭಣೆಯಿಂದ ಆಚರಿಸಿ. ‌ಆದರೆ ಮೂಲಆಶಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಕುಂದಾಪುರ ಭಾಗದಲ್ಲಿ ‌ಸಾಕಷ್ಟು ಜನ ಸಾಧಕರಿದ್ದಾರೆ. ಅವರನ್ನ ಕಂಡು ಖುಷಿಪಟ್ಟರಷ್ಟೇ ಸಾಲದು, ಅವರಂತೆ ಆಗಲು ಪ್ರಯತ್ನಿಸಬೇಕು ಎಮದು ಕರೆ ನೀಡಿದರು.
ರಾಜ್ಯದಲ್ಲಿ ಮತ್ತೆ ಮಳೆ ಬಿರುಸು, ನಾಳೆ 9 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್

ಯುವತಿ ಹೆಸರಲ್ಲಿ ಮಾಡಬಾರದ್ದು ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಪಿಎಸ್​ಐ ಉದ್ಯೋಗಾಕಾಂಕ್ಷಿ! ಯುವಕರೇ ಈತನ ಟಾರ್ಗೆಟ್​…

ಯುವಕನೆಂದು ಮಂಗಳಮುಖಿಯನ್ನು ಪ್ರೀತಿಸಿದ ಬಂಟ್ವಾಳ ಯುವತಿ! 4 ವರ್ಷದ ಬಳಿಕ ಸತ್ಯ ಹೊರಬಿದ್ದದ್ದೇ ರೋಚಕ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × 5 =
Remember me
