ಬೆಂಗಳೂರು: ರಾಜ್ಯದಲ್ಲಿ ರೇಬಿಸ್ ಕಾಯಿಲೆಯಿಂದ ಈ ವರ್ಷ ಜುಲೈ ಅಂತ್ಯದ ವೇಳೆಗೆ 25 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ವರ್ಷ 41 ಮಂದಿ ಮೃತಪಟ್ಟಿದ್ದರು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ‘ವಿಶ್ವ ರೇಬೀಸ್ ದಿನ’( ಸೆ. 28)ದ ಅಂಗವಾಗಿ ಇಲಾಖೆಯು ಗುರುವಾರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ.
ಲೂಯಿಸ್ ಪಾಶ್ಚರ್ ಅವರ ಸ್ಮರಣಾರ್ಥ ರೇಬಿಸ್ ದಿನ ಆಚರಿಸಲಾಗುತ್ತಿದೆ. ನಾಯಿಗಳ ಕಡಿತದಿಂದ ಹರಡುವ ಈ ರೋಗ ಮಾರಣಾಂತಿಕವಾಗಿದ್ದು, ಸಮಯೋಚಿತ ವೈದ್ಯಕೀಯ ಚಿಕಿತ್ಸೆಯ ಮೂಲಕ ಗುಣಪಡಿಸಬಹುದು. ರೋಗ ನಿರ್ಮೂಲನೆಗೆ ಲಸಿಕೆಗಳು, ಔಷಧಗಳು ಹಾಗೂ ಎಲ್ಲಾ ವಿಧದ ಚಿಕಿತ್ಸೆಯನ್ನು ಸರ್ಕಾರ ಉಚಿತವಾಗಿ ಒದಗಿಸುತ್ತಿದೆ ಎಂದು ಇಲಾಖೆ ತಿಳಿಸಿದೆ.
ರಾಷ್ಟ್ರೀಯ ರೋಗ ನಿಯಂತ್ರಣದ ಸಂಸ್ಥೆಯ ರಾಷ್ಟ್ರೀಯ ರೇಬಿಸ್ ನಿರ್ಮೂಲನ ಕ್ರಿಯಾ ಯೋಜನೆ ವರದಿಯಂತೆ, ವಿಶ್ವದಾದ್ಯಂತ ಸಂಭವಿಸುವ ರೇಬಿಸ್ ಸಾವಿನ ಪ್ರಕರಣಗಳಲ್ಲಿ ಶೇ. 36 ಭಾರತದಲ್ಲಿ ವರದಿಯಾಗುತ್ತಿದ್ದು, ಪ್ರತಿ ವರ್ಷ 18 – 20 ಸಾವಿರ ಜನರು ಮೃತಪಡುತ್ತಿದ್ದಾರೆ. ಇವರಲ್ಲಿ 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಸಂಖ್ಯೆಯೇ ಹೆಚ್ಚಾಗಿದೆ. ಮಕ್ಕಳಿಗೆ ನಾಯಿ ಕಚ್ಚಿದರೆ ಹೆಚ್ಚಿನ ಸಂದರ್ಭಗಳಲ್ಲಿ ಪೋಷಕರು ಅಥವಾ ಸಂಬಂಧಪಟ್ಟವರ ಗಮನಕ್ಕೆ ಬರುವುದಿಲ್ಲ. ಇದು ಕೂಡಾ ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣ ಎಂದು ಇಲಾಖೆ ಹೇಳಿದೆ.
ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ. ಎಲ್ಲಾ ಪ್ರಾಣಿ ಕಡಿತದ ಪ್ರಕರಣಗಳಿಗೂ (ಹಾವು ಕಡಿತ ಹೊರತುಪಡಿಸಿ) ಈ ಯೋಜನೆಯಡಿ ಸೌಲಭ್ಯ ಪಡೆಯಬಹುದಾಗಿದೆ. ರೇಬಿಸ್ ನಿರೋಧಕ ಲಸಿಕೆಯು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮೇಲ್ಮಟ್ಟದ ಆಸ್ಪತ್ರೆಗಳಲ್ಲಿ ಲಭ್ಯವಿರುತ್ತದೆ. ರೇಬಿಸ್ ಇಮ್ಯುನೋಗ್ಲಾಬ್ಯುಲಿನ್ (ಆರ್‌ಐಜಿ) ಚುಚ್ಚುಮದ್ದು ಸಮುದಾಯ ಆರೋಗ್ಯ ಕೇಂದ್ರ ಹಾಗೂ ಮೇಲ್ಮಟ್ಟದ ಆಸ್ಪತ್ರೆಗಳಲ್ಲಿ ದೊರೆಯುತ್ತದೆ. ಈ ಚಿಕಿತ್ಸೆಯು ಸಂಪೂರ್ಣ ಉಚಿತವಾಗಿದ್ದು, ಜನರು ರೇಬಿಸ್ ಕಾಯಿಲೆಗೆ ಭಯ ಪಡಬೇಕಾದ ಅಗತ್ಯವಿಲ್ಲ. ಬದಲಿಗೆ ಸಮಯಕ್ಕೆ ಸರಿಯಾಗಿ ಸೂಕ್ತ ರೀತಿಯಲ್ಲಿ ಚಿಕಿತ್ಸೆ ಪಡೆಯಬೇಕಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
