ಬೆಂಗಳೂರು:ಆರೋಗ್ಯಕ್ಕೆ ನಿದ್ರೆ ಅತ್ಯಗತ್ಯ. ಆದರೆ ವೈಯಕ್ತಿಕ ಮತ್ತು ವೃತ್ತಿಪರ ಜೀವನವನ್ನು ನಿರ್ವಹಿಸುವುದರ ಜತೆಗೆ ಸಾಮಾನ್ಯವಾಗಿ ನಿದ್ರೆಗೆ ಹೆಚ್ಚು ಸಮಯ ನೀಡಲು ಕೆಲವೊಮ್ಮೆ ಸಾಧ್ಯವಾಗದೆ ಇರಬಹುದು. ನಿದ್ರೆಯ ಮಹತ್ವದ ಬಗ್ಗೆ ಅರಿವು ಮೂಡಿಸಲು ಮಾರ್ಚ್ 17 ರಂದು ವಿಶ್ವ ನಿದ್ರಾ ದಿನವನ್ನು ಆಚರಣೆ ಮಾಡಲಾಗುತ್ತಿದೆ.
ವಿಶ್ವ ನಿದ್ರಾ ದಿನ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ವೇಕ್​ಫೀಟ್​​ ಕಂಪನಿ ತನ್ನ ಉದ್ಯೋಗಿಗಳಿಗೆ ‘ನಿದ್ರೆ ಮಾಡಲು ಒಂದು ದಿನ ರಜೆಯನ್ನು ನೀಡಿದೆ. ಲಿಂಕ್ಡ್‌ಇನ್‌ನಲ್ಲಿ ಈ ಕುರಿತಾಗಿ ಪೋಸ್ಟ್ ಹಂಚಿಕೊಳ್ಳಲಾಗಿದೆ.
ಇದನ್ನೂ ಓದಿ:ಕರ್ನಾಟಕ ಖಾಸಗಿ ಶಾಲೆಗಳ ಪಠ್ಯ ಪುಸ್ತಕ ಶೇಕಡ 25ರಷ್ಟು ಏರಿಕೆ!
ಎಲ್ಲಾ ಉದ್ಯೋಗಿಗಳಿಗೆ ಕಳುಹಿಸಲಾಗಿರುವ ಮೇಲ್​​ನಲ್ಲಿ ‘ವಿಶ್ವ ನಿದ್ರಾ ಆಚರಣೆಯ ದಿನವಾದ 2023ರ ಮಾರ್ಚ್ 17,ರಂದು ಎಲ್ಲಾ ವೇಕ್‌ಫಿಟ್ ಉದ್ಯೋಗಿಗಳಿಗೆ ರಜೆಯೆಂದು ಘೋಷಿಸಲಾಗಿದೆ. ಆರೋಗ್ಯ ಕ್ಷೇಮಕ್ಕಾಗಿ ಇಂದು ಆಫೀಸ್​ಗೆ ಬರಬೇಡಿ. ಮಲಗಿ ವಿಶ್ರಾಂತಿಸಿ ಎಂದು ಕಂಪನಿಯು ಎಲ್ಲ ಉದ್ಯೋಗಿಗಳಿಗೆ ಹೆಚ್​ಆರ್​​ ಮೇಲ್​​ ಮಾಡಿದ್ದಾರೆ.
ಇದನ್ನೂ ಓದಿ:ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ 10ರೂ. ನೀಡಿದ 60 ವರ್ಷದ ಅಜ್ಜ!
ಕಂಪನಿಯು ತನ್ನ ಉದ್ಯೋಗಿಗಳಿಗೆ ನಿದ್ದೆಯ ಸಮಯವನ್ನು ಘೋಷಿಸಿರುವುದು ಇದೇ ಮೊದಲಲ್ಲ. ಕಳೆದ ವರ್ಷ, ಕಂಪನಿಯು ತನ್ನ ಉದ್ಯೋಗಿಗಳಿಗೆ “ರೈಟ್ ಟು ನ್ಯಾಪ್ ನೀತಿ” ಯನ್ನು ಘೋಷಿಸಿತು. ಅದು ಎಲ್ಲಾ ಉದ್ಯೋಗಿಗಳಿಗೆ ತಮ್ಮ ಕೆಲಸದ ಸಮಯದಲ್ಲಿ 30 ನಿಮಿಷಗಳ ನಿದ್ದೆ ಮಾಡಲು ಅವಕಾಶ ಮಾಡಿಕೊಟ್ಟಿತ್ತು.
ಗ್ರೇಟ್ ಇಂಡಿಯನ್ ಸ್ಲೀಪ್ ಸ್ಕೋರ್‌ಕಾರ್ಡ್‌ನ 6ನೇ ಆವೃತ್ತಿಯ ಪ್ರಕಾರ, 2022ರಲ್ಲಿ 21% ನಷ್ಟು ಜನರು ಕೆಲಸದ ಸಮಯದಲ್ಲಿ ನಿದ್ರೆಯ ಸಮಸ್ಯೆಯನ್ನು ಅನುಭವಿಸುತ್ತಾರೆ. 21% ನಷ್ಟು ಮಂದಿ ಕೆಲಸ ಮುಗಿಸಿ ಮನೆಗೆ ತೆರಳಿದ ಬಳಿಕ ಬೆಳಗ್ಗೆ ಸುಸ್ತಾಗಿ ಏಳುತ್ತಾರೆ ಎಂದು ತಿಳಿದುಬಂದಿದೆ.
100ಕ್ಕೂ ಹೆಚ್ಚು ಬಾರಿ ಇರಿದು ಈತನ ಕಥೆ ಮುಗಿಸಿದ್ರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
