ಮೈಸೂರು:ಹಣಕ್ಕಾಗಿ ಸಾಮಿಲ್​ ಒಂದರ ಕಾವಲುಗಾರ ಹಾಗೂ ಮಾನಸಿಕ ಅಸ್ವಸ್ಥನನ್ನು ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಎಸ್​.ಎಸ್​. ಸಾಮಿಲ್​ನಲ್ಲಿ ನಡೆದಿದೆ.
ಮೃತರನ್ನು ವೆಂಕಟೇಶ್​(65), ಷಣ್ಮುಗಂ(60) ಎಂದು ಗುರತಿಸಲಾಗಿದ್ದು, ಪ್ರಕರಣ ಸಂಬಂಧ ಹುಣಸೂರು ಪೊಲೀಸರು ಮೂವರು ಆರೋಪಿಗಳ ಪೈಕಿ ಅಭಿಷೇಕ್​(23)ನನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳು ತಲೆಮಾರಿಸಿಕೊಂಡಿದ್ದು, ಬಂಧನಕ್ಕಾಗಿ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ಧಾರೆ.
ಜೂನ್​ 22ರಂದು ಹಣದ ಆಸೆಗಾಗಿ ಮೂವರು ಆರೋಪಿಗಳು ಹುಣಸೂರಿನ ವಿಶ್ವೇಶ್ವರಯ್ಯ ಸರ್ಕಲ್​ನಲ್ಲಿರುವ ಎಸ್​.ಎಸ್​. ಸಾಮಿಲ್​ನ ಕಾವಲುಗಾರರಾದ ವೆಂಕಟೇಶ್​ ಹಾಗೂ ಮಾನಸಿಕ ಅಸ್ವಸ್ಥ ಷಣ್ಮುಗಂನನ್ನು ಹತ್ಯೆ ಮಾಡಿದ್ದರು.
ಇದನ್ನೂ ಓದಿ:ಮದುವೆಯಾಗಲು ಹುಡುಗಿ ಸಿಗದ್ದಿದ್ದಕ್ಕೆ ಮನನೊಂದು ರೈತ ಆತ್ಮಹತ್ಯೆ
ಹತ್ಯೆ ಬಳಿಕ ಮೃತರ ಜೇಬನ್ನು ಪರಿಶೀಲಿಸಿ ಅದರಲ್ಲಿ ಸಿಕ್ಕ 488 ರೂಪಾಯಿ ಹಣವನ್ನು ದೋಚಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿಗಳನ್ನು ಪರಿಶೀಲಿಸಿ ಘಟನೆ ನಡೆದ 36 ಘಂಟೆಗಳ ಒಳಗಾಗಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಅಭಿಷೇಕ್​ ಈ ಹಿಂದೆ ಹುಣಸೂರು ಪೊಲೀಸ್​ ಠಾಣಾ ವ್ಯಪ್ತಿಯಲ್ಲಿ ನಡೆದ ಹಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಸೇರಿ ಬಿಡುಗಡೆಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
