ಶಿವಮೊಗ್ಗ:ಸಾಹಿತಿ ಡಿ.ಎಸ್. ನಾಗಭೂಷಣ ಬುಧವಾರ ತಡರಾತ್ರಿ ನಿಧನರಾಗಿದ್ದಾರೆ. ಕಳೆದ ಮೂರು ತಿಂಗಳಿನಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ನಿನ್ನೆ ತಮ್ಮ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.
ಡಿಎಸ್​ ನಾಗಭೂಷಣ್​ 1952 ಫೆಬ್ರವರಿ 1 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕಿನ ತಿಮ್ಮಸಂದ್ರದಲ್ಲಿ ಜನಿಸಿದ್ದರು. ದೆಹಲಿ ಆಕಾಶವಾಣಿಯಲ್ಲಿ ಕನ್ನಡ ವಾರ್ತಾ ವಾಚಕರಾಗಿ 1975 ರಿಂದ 1981ರವರೆ ಸೇವೆ ಸಲ್ಲಿಸಿದ್ದ ಅವರು ಆನಂತರದಲ್ಲಿ ಸಹಾಯಕ ನಿಲಯ ನಿರ್ದೇಶಕರಾಗಿ 7 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
2005 ರಲ್ಲಿ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದರು. ಓದು, ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡಿದ್ದ ಅವರು ‘ಇಂದಿಗೆ ಬೇಕಾದ ಗಾಂಧಿ’, ‘ಲೋಹಿಯಾ ಜೊತೆಯಲ್ಲಿ’, ‘ರೂಪ ರೂಪಗಳನು ಧಾಟಿ’, ‘ಕುವೆಂಪು ಒಂದು ಪುನರನ್ವೇಷಣೆ’, ‘ಕುವೆಂಪು ಸಾಹಿತ್ಯ ದರ್ಶನ’, ‘ಜಯ ಪ್ರಕಾಶ ನಾರಾಯಣ ಒಂದು ಅಪೂರ್ಣ ಕ್ರಾಂತಿಯ ಕಥೆ’, ‘ನಮ್ಮ ಶಾಮಣ್ಣ’, ‘ಕನ್ನಡದ ಮನಸು ಮತ್ತು ಇತರ ಲೇಖನಗಳು’. ಹಾಗೂ ‘ಕಾಲಕ್ರಮ’, ‘ಗಮನ’, ‘ಅನೇಕ’, ‘ಈ ಭೂಮಿಯಿಂದ ಆ ಆಕಾಶದವರೆಗೆ’, ‘ಮರಳಿ ಬರಲಿದೆ ಸಮಾಜವಾದ’, ‘ವಸಿಷ್ಠರು ಮತ್ತು ವಾಲ್ಮೀಕಿಯರು’, ‘ಹಣತೆ’(ಜಿಎಸ್ಸೆಸ್ ಅಭಿನಂದನೆ ಗ್ರಂಥ), ‘ಗಾಂಧಿ ಕಥನ’ ಸೇರಿದಂತೆ ಹಲವು ಮಹತ್ವದ ಕೃತಿಗಳನ್ನು ರಚಿಸಿದ್ದಾರೆ. ನಿವೃತ್ತಿಯ ಬಳಿಕ ಅವರು ತಮ್ಮ ಪತ್ನಿ ಸವಿತಾ ನಾಗಭೂಷಣ ಅವರೊಂದಿಗೆ ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ನೆಲೆಸಿದ್ದರು.
ಟ್ಯಾಕ್ಸಿ ಸೇವೆಯಲ್ಲಿ ಲೂಟಿ!: ಸರ್ಕಾರ ನಿಗದಿಪಡಿಸಿದ ದರಕ್ಕಿಂತ 3 ಪಟ್ಟು ಹೆಚ್ಚು ವಸೂಲಿ

ಹಾಯ್​ ಗಯ್ಸ್​ ನೀವೇಕೆ ಒಮ್ಮೆ ಪ್ರಯತ್ನಿಸಬಾರದು…ಹೊಸ ವೇಷ ಹಾಕಿ ಪ್ರಧಾನಿ ಮೋದಿ ವ್ಯಂಗ್ಯವಾಡಿದ ಪ್ರಕಾಶ್​ ರಾಜ್!​

ಉಪನ್ಯಾಸಕರ ವರ್ಗಾವಣೆ ನಿಯಮ ಅಂತಿಮ: ಕನಿಷ್ಠ 3 ವರ್ಷಗಳ ಸೇವಾವಧಿ ಪೂರೈಸಿರಬೇಕು; ಶೇ.10 ಮಿತಿ ನಿಗದಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 + 12 =
Remember me
