ಯಾದಗಿರಿ:ಯಾದಗಿರಿ ನಗರ ಠಾಣೆ ಪಿಎಸ್ಐ ಪರಶುರಾಮ್ ಅವರು  ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ.  ಈ ಸಾವಿನ ಕುರಿತಾಗಿ ಅನೇಕ ಅನುಮಾನಗಳು ಹುಟ್ಟಿಕೊಂಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಪಿಎಸ್ಐ ನಿನ್ನೆ ಮಧ್ಯಾಹ್ನ ವಸತಿ ಗೃಹದಲ್ಲಿ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ. ಮೂಗಿನಲ್ಲಿ ಹಾಗೂ ಬಾಯಿಯಲ್ಲಿ ರಕ್ತ ಬಂದಿತ್ತು. ಈ ಸಾವಿಗೆ ಶಾಸಕ ಹಾಗೂ ಅವರ ಪುತ್ರ ಕಾರಣವೆಂದು ಆರೋಪ ಕೇಳಿ ಬಂದಿದೆ.
ಕುಟುಂಬಸ್ಥರು ಇದು ಸಹಜ ಸಾವಲ್ಲ, ಅನುಮಾನಾಸ್ಪದ ಸಾವು. ಈ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಿದರು. ಯಾದಗಿರಿ ಶಾಸಕ ಹಾಗೂ ಅವರ ಪುತ್ರನ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಯಾದಗಿರಿ ನಗರ ಠಾಣೆಯಲ್ಲಿ ಮುಂದುವರೆಲು 30 ಲಕ್ಷ ನೀಡಬೇಕು ಎಂದು ಶಾಸಕ ಹಾಗೂ ಅವರ ಪುತ್ರ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.
ಮೃತರ ಪತ್ನಿ ನೀಡಿದ ದೂರಿನ ಆಧಾರದ ಮೇರೆಗೆ ಪೊಲೀಸರು ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ  ಪಾಟೀಲ್, ಪುತ್ರ ಪಂಪನಗೌಡ ವಿರುದ್ಧ ​​ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದರಂತೆ​ 352, 108 (3), 5, ಬಿಎನ್ಎಸ್ 2023 ಮತ್ತು ಕಲಂ 3(1), (ಆರ್), (ಎಸ್), 3 (ವಿ) ಸೇರಿದಂತೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ಆತ್ಮಹತ್ಯೆ ಮಾಡಿಕೊಂಡಿಲ್ಲ. ಡೆತ್‌ನೋಟ್ ಬರೆದಿಟ್ಟಿಲ್ಲ‌. ವರ್ಗಾವಣೆ ವಿಚಾರಕ್ಕೆ ನೊಂದಿದ್ದರು ಎಂದು ಆತನ ಪತ್ನಿ ದೂರು ಕೊಟ್ಟಿದ್ದಾರೆ. ಅವರ ಆರೋಪವನ್ನು ಪರಿಗಣಿಸುತ್ತೇನೆ. ಆ ಆಯಾಮದಲ್ಲಿಯು ತನಿಖೆ ನಡೆಯಲಿದೆ. ಪ್ರಾಥಮಿಕ‌ ಮಾಹಿತಿ ಕಲೆ ಹಾಕುತ್ತಿದ್ದಾರೆ.‌ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
