ಬೆಂಗಳೂರು: ಯಾದಗಿರಿ ಪಿಎಸ್‌ಐ ಸಾವು ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸುವಂತೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡಿಲ್ಲ. ಡೆತ್‌ನೋಟ್ ಬರೆದಿಟ್ಟಿಲ್ಲ. ವರ್ಗಾವಣೆ ವಿಚಾರಕ್ಕೆ ನೊಂದಿದ್ದರು ಎಂದು ಆತನ ಪತ್ನಿ ದೂರು ಕೊಟ್ಟಿದ್ದಾರೆ. ಅವರ ಆರೋಪವನ್ನು ಪರಿಗಣಿಸುತ್ತೇನೆ. ಆ ಆಯಾಮದಲ್ಲಿಯು ತನಿಖೆ ನಡೆಯಲಿದೆ. ಪ್ರಾಥಮಿಕ್ ಮಾಹಿತಿ ಕಲೆ ಹಾಕುತ್ತಿದ್ದಾರೆ.ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಸ್ಥಳೀಯ ಶಾಸಕರಿಗೆ ಹಣ ಕೊಟ್ಟಿದ್ದರು ಎಂಬ ಆರೋಪವನ್ನು ಸರಿ ಅಥವಾ ಇಲ್ಲ ಅಂತ ಹೇಳಲು ಬರುವುದಿಲ್ಲ. ತನಿಖೆ ನಡೆಸಿದ ನಂತರ ಸತ್ಯಾಂಶ ಹೊರಬರಲಿದೆ. ನಾನು ಸಮುದಾಯ ಯಾವುದು ಎಂಬುದನ್ನು ನೋಡುವುದಿಲ್ಲ, ಕಾನೂನನ್ನು ನೋಡುತ್ತೇನೆ. ಆ ರೀತಿಯ ಘಟನೆ ನಡೆದಾಗ ಎಫ್‌ಐಆರ್ ಹಾಕಿಕೊಳ್ಳಬೇಕು. ಎಫ್‌ಐಆರ್ ದಾಖಲಿಸುವ ಮುನ್ನ ಪರಿಶೀಲನೆ ನಡೆಸುತ್ತಾರೆ. ಶಾಸಕರುಅಥವಾ ಬೇರೆಯವರಿದ್ದರು, ಆಡಳಿತ ಪಕ್ಷದ ಶಾಸಕರಾಗಿದ್ದರೂ ಸಹ ಎ್ಐಆರ್ ದಾಖಲಿಸುತ್ತಾರೆ ಎಂದು ಹೇಳಿದರು.
ಬಿಜೆಪಿ ಮತ್ತು ಜೆಡಿಎಸ್‌ನವರು ಪಾದಯಾತ್ರೆಯನ್ನು ಕಾನೂನು ಬಾಹಿರವಾಗಿ ಮಾಡುವುದಿಲ್ಲ. ಶಾಂತಿಯುತವಾಗಿ ನಡೆಸುವುದಾಗಿ ಕೇಳಿಕೊಂಡಿದ್ದರಿಂದ ಸಿಎಂ ಜೊತೆ ಚರ್ಚಿಸಿ ಅವಕಾಶ ನೀಡಿದ್ದೇವೆ. ಯಾವುದೇ ರೀತಿಯ ಅಹಿತಕರ ಘಟನೆಗಳಾಗಬಾರದು, ಜನರಿಗೆ ತೊಂದರೆಗಳಾಗದಂತೆ ನೋಡಿಕೊಳ್ಳುವಂತೆ ಕಂಡಿಷನ್ ಹಾಕಲಾಗಿದೆ.-ಡಾ.ಜಿ.ಪರಮೇಶ್ವರ, ಗೃಹ ಸಚಿವ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
