

ಬಳ್ಳಾರಿ : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಒಬ್ಬ ಧೀಮಂತ ನಾಯಕ. ಅವರು ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಇದು ನಮಗೆ ಆಘಾತ ತಂದಿದೆ. ಅವರು ಬಳ್ಳಾರಿ ನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಲಿ ಎಂದು ನಾನು ಮನವಿ ಮಾಡಿದ್ದೇನೆ ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಹೇಳಿದರು.
ಬಳ್ಳಾರಿ ನಗರದ ಅಟಲ್‌ಬಿಹಾರಿ ವಾಜಪೇಯಿ ಬಡಾವಣೆಯಲ್ಲಿರುವ ಬಳ್ಳಾರಿ ಜಿಲ್ಲಾ ಬಿಜೆಪಿ ಕಚೇರಿ ಬಳಿ ಪ್ರಗತಿ ರಥ ಜಾಥಾಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಮಾಜಿ ಸಿಎಂ ಬಿಎಸ್‌ವೈ ಅವರು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿರುವುದು ನಮಗೆ ಆಘಾತ ತಂದಿದೆ, ಅವರು ಮತ್ತೆ ಚುನಾವಣೆಗೆ ನಿಲ್ಲಬೇಕು. ಅವರು ಬಳ್ಳಾರಿಯಲ್ಲಿ ಚುನಾವಣೆಗೆ ನಿಲ್ಲುವಂತೆ ನಾನು ಮನವಿ ಮಾಡಿರುವೆ. ಕೋರ್ ಕಮಿಟಿ ಸಭೆಯಲ್ಲಿ ವೈಯಕ್ತಿಕವಾಗಿ ನಾನು ಅವರನ್ನು ಭೇಟಿ ಮಾಡಿ, ಬಳ್ಳಾರಿಯಲ್ಲಿ ಚುನಾವಣೆಗೆ ನಿಲ್ಲುವಂತೆ ನಾ ಮನವಿ ಮಾಡಿರುವೆ. ಒಂದು ಲಕ್ಷ ಮತಗಳ ಅಂತರದಿಂದ ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಮ್ಮದು. ಅವರು ಇಲ್ಲಿಗೆ ಬಂದ್ರೆ, ನಾ ಅವರಿಗೆ ಕ್ಷೇತ್ರ ಬಿಟ್ಟು ಕೊಡುವೆ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಮುರಹರಗೌಡ, ಗುರುಲಿಂಗನಗೌಡ, ರಾಮಲಿಂಗಪ್ಪ, ಡಾ.ಬಿ.ಕೆ.ಸುಂದರ್, ಡಾ.ಅರುಣಾ ಸೇರಿದಂತೆ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು, ಇನ್ನಿತರ ಮುಖಂಡರು ಹಾಜರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
