ಮೈಸೂರು:ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್​ ಸಿಕ್ಕಿರುವ ಬೆನ್ನಲ್ಲೇ ಮೈಸೂರು ರಾಜ ವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾವುಕ ಮಾತುಗಳನ್ನಾಡಿದ್ದಾರೆ.
ಸಮಸ್ತ ಮೈಸೂರು-ಕೊಡಗು ಪ್ರಜಾಬಾಂಧವರಿಗೆ ನನ್ನ ನಮಸ್ಕಾರ ಎಂದು ತಮ್ಮ ಫೇಸ್​ಬುಕ್​ ಪೇಜ್​ನಲ್ಲಿ ಬರವಣಿಗೆ ಆರಂಭಿಸಿರುವ ಯದುವೀರ್​, ನಿಮ್ಮೆಲ್ಲರಿಗೂ ಈಗಾಗಲೇ ತಿಳಿದಿರುವಂತೆ, ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ ಎಂದಿದ್ದಾರೆ.
ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗಿದೆ. ಕಳೆದ ಒಂಭತ್ತು ವರ್ಷಗಳಿಂದ ನಾನು ನಮ್ಮ ಕ್ಷೇತ್ರದ ಹಾಗು ನಮ್ಮ ರಾಜ್ಯದ ಸಾರ್ವಜನಿಕ ಜೀವನದ ಭಾಗವಾಗಿದ್ದು ಅನೇಕ ಪ್ರಜಾಬಾಂಧವರನ್ನು ಭೇಟಿಮಾಡುವ ಅವಕಾಶ ಸಿಕ್ಕಿದ್ದು, ನನ್ನನ್ನು ನೀವೆಲ್ಲರೂ ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಆತಿಥ್ಯವನ್ನು ನೀಡಿದ್ದೀರಿ, ಈಗ ಆ ಋಣವನ್ನು ತೀರಿಸಲು ಅವಕಾಶ ಕೇಳುತ್ತಿದ್ದೇನೆ.
ನಿಮ್ಮೆಲ್ಲರ ಬೆಂಬಲ ಮತ್ತು ಆಶೀರ್ವಾದದಿಂದ ಮೈಸೂರು ಮತ್ತು ಕೊಡಗಿನ ಸರ್ವಾಂಗೀಣ ಏಳಿಗೆ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡಲು ನಾನು ಆಶಿಸುತ್ತಿದ್ದೇನೆ ಹಾಗೂ ಮೈಸೂರು-ಕೊಡಗಿನ ಜನರ ಶುಭ ಹಾರೈಕೆ ಮತ್ತು ಬೆಂಬಲವನ್ನು ಎದುರು ನೋಡುತ್ತಿದ್ದೇನೆ.
ಚುನಾವಣೆಯಲ್ಲಿ ಪಕ್ಷವನ್ನು ಪ್ರತಿನಿಧಿಸಲು ನನ್ನ ಮೇಲೆ ನಂಬಿಕೆ ಇಟ್ಟಿರುವ ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರಿಗೂ, ಭಾ.ಜ.ಪ ದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರಿಗೂ, ಗೃಹಮಂತ್ರಿಗಳಾದ ಅಮಿತ್ ಷಾ ಅವರಿಗೂ, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಬಿ.ಎಲ್. ಸಂತೋಷ್, ರಾಜ್ಯ ಅಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಅವರಿಗೂ ಹಾಗೂ ವಿಶೇಷವಾಗಿ ಬಿಜೆಪಿ ಪಕ್ಷದ ಆತ್ಮ ಜೀವವಾಗಿರುವ ಕಾರ್ಯಕರ್ತರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ.
ಎರಡು ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ್ದಕ್ಕಾಗಿ ನಾನು ಪ್ರತಾಪ್ ಸಿಂಹ ಅವರನ್ನು ಅಭಿನಂದಿಸುತ್ತೇನೆ. ಈ ಕ್ಷೇತ್ರದ ಅಭಿವೃದ್ಧಿಗೆ ಅವರ ಬದ್ಧತೆ ನಮ್ಮೆಲ್ಲರ ಭವಿಷ್ಯದ ಆಕಾಂಕ್ಷಿಗಳಿಗೆ ಭದ್ರ ಅಡಿಪಾಯ ಹಾಕಿ ಕೊಟ್ಟಿದೆ. ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯ ಆಶಿರ್ವಾದಾನುಗ್ರಹಗಳು ನಮ್ಮೆಲ್ಲರ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೆನೆ ಎನ್ನುವ ಮೂಲಕ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬರವಣಿಗೆ ಕೊನೆಗೊಳಿಸಿದ್ದಾರೆ.

ಅಂದಹಾಗೆ ಲೋಕಸಭೆ ಚುನಾವಣೆಯ 2ನೇ ಪಟ್ಟಿಯಲ್ಲಿ 72 ಅಭ್ಯರ್ಥಿಗಳ ಹೆಸರು ಘೊಷಿಸಿರುವ ಬಿಜೆಪಿ, ಕರ್ನಾಟಕದ 20 ಸೀಟುಗಳನ್ನು ಅಂತಿಮಗೊಳಿಸಿದೆ. ನಿರೀಕ್ಷೆಯಂತೆ ಭರ್ಜರಿ ಸರ್ಜರಿ ನಡೆಸಿರುವ ವರಿಷ್ಠರು 20 ಸೀಟುಗಳ ಪೈಕಿ 10 ಕ್ಷೇತ್ರಗಳಿಗೆ ಹೊಸ ಮುಖ ಪರಿಚಯಿಸಿದ್ದಾರೆ. 8 ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಟಿಕೆಟ್ ತಪ್ಪಿದ್ದರೆ, ಶೋಭಾ ಕರಂದ್ಲಾಜೆಗೆ ಉಡುಪಿ ಚಿಕ್ಕಮಗಳೂರು ಬದಲು ಬೆಂಗಳೂರು ಉತ್ತರ ಕ್ಷೇತ್ರ ಕೊಡಲಾಗಿದೆ. ಅದೇ ರೀತಿ ದಾವಣಗೆರೆ ಟಿಕೆಟ್ ಸಿದ್ದೇಶ್ವರ್ ಕೈತಪ್ಪಿದರೂ ಅವರ ಕುಟುಂಬಕ್ಕೆ ಸಿಕ್ಕಿದೆ. ಜಾತಿ ಸಮೀಕರಣ, ಸ್ಥಳೀಯ ಲೆಕ್ಕಾಚಾರ ಸೇರಿ ಹಲವು ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಅಭ್ಯರ್ಥಿ ಆಯ್ಕೆ ಮಾಡಲಾಗಿದೆ.
ನಿರೀಕ್ಷೆಯಂತೆ ಮೈಸೂರು ಸಂಸದ ಪ್ರತಾಪ್ ಸಿಂಹರಿಗೆ ಟಿಕೆಟ್ ನೀಡದಿರಲು ವರಿಷ್ಠರು ನಿರ್ಧರಿಸಿದ್ದು, ಮೈಸೂರು ರಾಜ ವಂಶಸ್ಥ ಯದುವೀರ್ ಒಡೆಯರ್​ಗೆ ಟಿಕೆಟ್ ನೀಡಲಾಗಿದೆ. ಅರಸು ಮನೆತನಕ್ಕೆ ರಾಜಕೀಯ ಹೊಸತಲ್ಲ. ಈ ಹಿಂದೆ ಶ್ರೀಕಂಠದತ್ತ ಒಡೆಯರ್ ಅವರು ಕಾಂಗ್ರೆಸ್ ಪಕ್ಷದಿಂದ ಹಲವು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಈಗ ಅದೇ ಕುಟುಂಬದ ಯದುವೀರ್ ಬಿಜೆಪಿಯಿಂದ ಸಂಸತ್ ಪ್ರವೇಶಿಸುವ ಯತ್ನ ಮಾಡಲಿದ್ದಾರೆ. ಸ್ಥಳೀಯ ಮುಖಂಡರ ಜತೆಗಿನ ವೈಮನಸ್ಯ, ಕಾರ್ಯಕರ್ತರು, ಶಾಸಕರ ವಿರೋಧ, ಪಕ್ಷ ಸಂಘಟನೆಗೆ ಕೊಡುಗೆ ನೀಡಿಲ್ಲ ಎಂಬ ಕಾರಣಕ್ಕಾಗಿ ಪ್ರತಾಪ್ ಸಿಂಹಗೆ ಟಿಕೆಟ್ ಸಿಕ್ಕಿಲ್ಲ ಎನ್ನಲಾಗಿದೆ. ಆದರೆ, ಸಂಸದರಾಗಿ ಅವರ ಕೆಲಸಗಳ ಬಗ್ಗೆ ಯಾರೂ ಆಕ್ಷೇಪ ತೆಗೆದಿಲ್ಲ ಎನ್ನುವುದೂ ಇಲ್ಲಿ ಗಮನಾರ್ಹ.
10 ಹೊಸಮುಖ 8 ಹಾಲಿಗಳಿಗೆ ಶಾಕ್; ಬೆಂ. ಉತ್ತರಕ್ಕೆ ಶೋಭಾ, ಕಟೀಲ್ ಜಾಗಕ್ಕೆ ಕ್ಯಾಪ್ಟನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + fourteen =
Remember me
