ಬೆಂಗಳೂರು:ಅಭಿವೃದ್ಧಿ ಮತ್ತು ಸಾರ್ವಜನಿಕ ಸೇವೆಯ ದೃಷ್ಟಿಕೋನ ಇಟ್ಟುಕೊಂಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲು ನಿರ್ಧರಿಸಿದ್ದೇನೆ ಎಂದು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್  ಹೇಳಿದ್ದಾರೆ.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು ಭೇಟಿ ನೀಡಿದ್ದಾರೆ. ಈ ವೇಳೆ ಅವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಅಧಿಕಾರ ಇದ್ದಾಗ ಹೆಚ್ಚಿನ ಅಭಿವೃದ್ಧಿ ಮಾಡಲು ಅವಕಾಶ ಸಿಗುತ್ತದೆಯೇ ಎನ್ನುವ  ಪ್ರಶ್ನೆಗೆ ಉತ್ತರ ನೀಡಿ, ಪ್ರತಾಪಸಿಂಹ ಅವರು ಮೈಸೂರಿನ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರು ತಮಗೆ ಸಹಕಾರ ನೀಡಲಿದ್ದಾರೆ ಎಂದು ನುಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ಕೋಲಾರ ಸಂಸದ ಎಸ್. ಮುನಿಸ್ವಾಮಿ, ಶಾಸಕ ಶರಣು ಸಲಗರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪರ್ಧಿಸಲಿದ್ದಾರೆ. ಪ್ರತಾಪ್ ಸಿಂಹ ಅವರ ಬದಲಾಗಿ ಯದುವೀರ್ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − four =
Remember me
