ಬಳ್ಳಾರಿ:ಇಂದು ಬಳ್ಳಾರಿಯ ಅಮೃತೇಶ್ವರ ಸ್ಪಟಿಕ ಲಿಂಗ ದೇಗುಲ ಉದ್ಘಾಟನೆಗೆ ಆಗಮಿಸಿದ್ದ ನಟ ಯಶ್ ಅವರ ಕಾರನ್ನು ಹಿಂಬಾಲಿಸಿಕೊಂಡು ಬರುತ್ತಿದ್ದ ಯಶ್​ ಅಭಿಮಾನಿಯ ಕಾಲಿನ ಮೇಲೆ ಅವರ ಬೆಂಗಾವಲು ಕಾರು ಹರಿದಿದೆ. ಘಟನೆ ಬಳ್ಳಾರಿಯ ನಗರದ ವಲಯದಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಹಿಮಾಚಲ ಪ್ರದೇಶದಲ್ಲಿ ಅಡ್ಡ ಮತದಾನ: 6 ಬಂಡಾಯ ಕಾಂಗ್ರೆಸ್ ಶಾಸಕರ ಸದಸ್ಯತ್ವ ರದ್ದು, ಆದೇಶ ಹೊರಡಿಸಿದ ಸ್ಪೀಕರ್
ಯಶ್ ನೋಡಲು ಬಂದ ಅಭಿಮಾನಿಯ ಕಾಲ ಮೇಲೆ ಬೆಂಗಾವಲು ಕಾರು ಹರಿದ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಪಘಾತ ಬಳ್ಳಾರಿಯ ಹೊರವಲಯದಲ್ಲಿ ಇರುವ ಬಾಲಾಜಿ ಕ್ಯಾಂಪ್​ ಬಳಿ ಸಂಭವಿಸಿದೆ. ನಟ ಯಶ್ ಬಾಲಾಜಿ ನಗರದಲ್ಲಿ ನೂತನವಾಗಿ ನಿರ್ಮಾಣವಾದ ಅಮೃತೇಶ್ವರ ಸ್ಪಟಿಕ ಲಿಂಗ ದೇವಸ್ಥಾನ ಉದ್ಘಾಟನೆಗೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ.
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದ ವಸಂತ ಎಂಬ ಯುವಕನ ಮೇಲೆ ಯಶ್ ಬೆಂಗಾವಲು ಕಾರು ಹರಿದಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ಕೊಡಿಸಲಾಗಿದೆ. ಕಾರಿ ಹಿಂಬಾಲಿಸಿಕೊಂಡು ಓಡಿ ಬಂದ ಅಭಿಮಾನಿಗಳ ನಡುವೆ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + one =
Remember me
