ಬೆಂಗಳೂರು:ರೈತರ ಆರೋಗ್ಯ ದೃಷ್ಟಿಯಿಂದ ಕೆಲವು ಮಾರ್ಪಾಡುಗಳೊಂದಿಗೆ ಯಶಸ್ವಿನಿ ಯೋಜನೆ ಮರು ಜಾರಿ ಮಾಡುತ್ತಿದ್ದು, ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಏ.1ರಂದು ಲೋಗೋ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಯಶಸ್ವಿನಿ ಯೋಜನೆ ಮತ್ತೆ ಆರಂಭಿಸಬೇಕೆಂಬ ಬೇಡಿಕೆ ಇತ್ತು. ಈ ಯೋಜನೆಗೆ ಸರ್ಕಾರ 300 ಕೋಟಿ ರೂ. ಮೀಸಲಿಟ್ಟಿದೆ. ಇನ್ನೆರಡು ಮೂರು ವಾರಗಳಲ್ಲಿ ಯಶಸ್ವಿನಿ ಯೋಜನೆಯಲ್ಲಿ ಕೆಲವು ಮಾರ್ಪಾಡು ಮಾಡುತ್ತಿದ್ದೇವೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ನಂದಿನಿ ಕ್ಷೀರ ಅಭಿವೃದ್ಧಿ ಬ್ಯಾಂಕ್ ಲೋಗೋವನ್ನೂ ಅಮಿತ್ ಶಾ ಬಿಡುಗಡೆ ಮಾಡಲಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.
ಕಾನೂನು ಸುವ್ಯವಸ್ಥೆ ಧಕ್ಕೆ ಇಲ್ಲ:ರಾಜ್ಯದಲ್ಲಿ ಇದುವರೆಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲ. ನಮ್ಮ ಸರ್ಕಾರ ಅಭಿವೃದ್ಧಿಯತ್ತ ಮಾತ್ರ ಗಮನ ಕೊಡುತ್ತದೆ. ಬಲಪಂಥೀಯ-ಎಡಪಂಥೀಯ ಎನ್ನುವುದು ಇಲ್ಲ. ನಾವು ಶಾಂತಿ, ಸಾಮಾನ್ಯ ಜನರ ಭದ್ರತೆ, ಅಭಿವೃದ್ಧಿಗಳಂಥ ಸಿದ್ಧಾಂತಗಳನ್ನು ನಂಬುತ್ತೇವೆ ಎಂದು ತಿಳಿಸಿದರು. ಸಾಹಿತಿಗಳ ಪತ್ರ ಗಮನಿಸಿದ್ದೇನೆ. ವಾಸ್ತವಾಂಶ ಏನಿದೆ ಅಂತ ಪರಿಗಣಿಸುತ್ತೇವೆ. ಸಾಹಿತಿಗಳು ಎತ್ತಿರುವ ವಿಚಾರದ ಕುರಿತು ಏನು ಕ್ರಮ ತಗೋಬೇಕು ಎಂದು ನಿರ್ಧರಿಸುತ್ತೇವೆ ಎಂದು ಬೊಮ್ಮಾಯಿ ಹೇಳಿದರು.
ವಿಲೀನ ಚಿಂತನೆ:ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ಅಪೆಕ್ಸ್ ಬ್ಯಾಂಕ್​ನಲ್ಲಿ ಡಿಸಿಸಿ ಬ್ಯಾಂಕ್​ಗಳ ವಿಲೀನ ಪರಿಶೀಲನೆಯಲ್ಲಿದೆ. ಬ್ಯಾಂಕ್​ಗಳ ವಿಲೀನದಿಂದ ಈ ಶೇ.1 ಆದಾಯ ಉಳಿಯುತ್ತದೆ. ಹೀಗಾಗಿ ವಿಲೀನ ಚಿಂತನೆ ನಡೆದಿದೆ ಎಂದರು.
ಹಲಾಲ್ ವಿಚಾರ ಮುಂದೆ ನಿರ್ಧಾರ:ಹಲಾಲ್ ವಿರುದ್ಧ ಅಭಿಯಾನದ ವಿಚಾರದಲ್ಲಿ ನಮ್ಮ ಸರ್ಕಾರದ ನಿಲುವು ಏನು ಎಂಬುದನ್ನು ಮುಂದೆ ತಿಳಿಸುತ್ತೇವೆ. ಯಾವುದಕ್ಕೆ ಪ್ರತಿಕ್ರಿಯೆ ಕೊಡಬೇಕು, ಯಾವುದಕ್ಕೆ ಕೊಡಬಾರದು ಎಂಬುದು ಗೊತ್ತಿದೆ. ಹಲಾಲ್ ವಿರುದ್ಧ ಅಭಿಯಾನ ಈಗಷ್ಟೇ ಆರಂಭವಾಗಿದೆ. ಇದರ ಸಮಗ್ರತೆ ಗಮನಿಸಬೇಕಾಗುತ್ತದೆ. ಕೆಲವು ನಿಯಮಗಳು, ಆಚರಣೆಗಳು ಮೊದಲಿಂದಲೂ ಇವೆ. ಅದರಂತೆ ನಡೆದುಕೊಂಡು ಹೋಗುತ್ತಿದೆ. ಧಾರ್ವಿುಕ ದತ್ತಿ ಕಾಯ್ದೆ ನಿಯಮದ ಬಗ್ಗೆ ಗಂಭೀರ ಆಕ್ಷೇಪಗಳು ಎದ್ದಿವೆ. ಅದರ ಬಗ್ಗೆ ಅವಲೋಕನ ಮಾಡುತ್ತೇವೆ ಎಂದರು.
ರಾಜ್ಯದಲ್ಲಿ ಅವಧಿಗೂ ಮುನ್ನ ವಿಧಾನಸಭೆ ಚುನಾವಣೆ ನಡೆಯುವ ವಾತಾವರಣ ಇಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಷಾ ಏ.1 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಅವರೊಂದಿಗೆ ಚುನಾವಣೆ ಕುರಿತು ಚರ್ಚೆ ನಡೆಸಲಾಗುವುದು. ಬಿ.ವೈ. ವಿಜಯೇಂದ್ರ ಸಂಪುಟ ಸೇರ್ಪಡೆ ವಿಚಾರದ ಕುರಿತು ನಾನು ಯಾರೊಂದಿಗೂ ರ್ಚಚಿಸಿಲ್ಲ. ಸಿಎಂ ಬದಲಾವಣೆಯ ಪ್ರಸ್ತಾಪ ಪಕ್ಷದ ಮುಂದೆ ಇಲ್ಲ.
|ಬಿ.ಎಸ್. ಯಡಿಯೂರಪ್ಪಮಾಜಿ ಸಿಎಂ
ನಾಯಕತ್ವ ಗುಣದಿಂದ ಬಿಜೆಪಿಯಲ್ಲಿ ಉತ್ತಮ ಅವಕಾಶ ಲಭಿಸುತ್ತದೆ. ಪಕ್ಷದ ವಿಚಾರಧಾರೆ, ಉದ್ದೇಶಕ್ಕೆ ಅನುಗುಣವಾಗಿ ಸಂಘಟನೆ ಬೆಳೆಸುವ ಮೂಲಕ ಸ್ಥಾನಮಾನದ ಸದುಪಯೋಗ ಪಡೆದುಕೊಳ್ಳಬೇಕು. ಇಂತಹ ಅವಕಾಶ ಬೇರೆ ಪಕ್ಷಗಳಲ್ಲಿ ಸಿಗುವುದಿಲ್ಲ ಎಂದು ಸಚಿವ ಎಸ್. ಅಂಗಾರ ತಿಳಿಸಿದರು. ರಾಜ್ಯ ಎಸ್​ಸಿ ಮೋರ್ಚಾ ಬುಧವಾರ ಬೆಂಗಳೂರಿನ ಸ್ಕೌಟ್ಸ್ ಗೈಡ್ಸ್ ಸಭಾಭವನದಲ್ಲಿ ಆಯೋಜಿಸಿದ್ದ ಎಸ್​ಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು. ನಾನು 1989ರಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಂತು ಸೋತಿದ್ದೆ. 1994ರಿಂದ ನಿರಂತರವಾಗಿ ಗೆಲ್ಲುತ್ತ ಬಂದಿದೆ. ಹಿಂದೆ ಗೆದ್ದ ಅಭ್ಯರ್ಥಿಗಳು ಪಕ್ಷಾಂತರ ಮಾಡಿದ್ದರು. ಆದರೆ ನಾನು ಒಂದೇ ಪಕ್ಷದಲ್ಲಿ ನಿಂತು ಗೆಲುವನ್ನು ತಂದು ಕೊಟ್ಟೆ. ಅಧಿಕಾರಕ್ಕಾಗಿ ಪಕ್ಷಾಂತರ ಸಲ್ಲದು ಎಂಬುದನ್ನು ತೋರಿಸಿಕೊಟ್ಟಿದ್ದು, ಜನರ ವಿಶ್ವಾಸ ಪಡೆದಿದ್ದೇನೆ ಎಂದರು. ಎಸ್​ಸಿ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿ ಕುಮಾರ್ ಸಂಘಟನೆಗೆ ಮಾರ್ಗದರ್ಶನ ನೀಡಿದರು. ನಾಲ್ಕು ರಾಜ್ಯಗಳಲ್ಲಿ ಪಕ್ಷದ ಅದ್ವಿತೀಯ ಸಾಧನೆಗೆ ಅವರು ಮೆಚ್ಚುಗೆ ಸೂಚಿಸಿದರು. ಎಸ್​ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಇತರರು ಉಪಸ್ಥಿತರಿದ್ದರು.
ಏ.12ರಿಂದ 3 ತಂಡಗಳ ಪ್ರವಾಸ:ರಾಜ್ಯದಲ್ಲಿ ಬಿಜೆಪಿ ಬಲವರ್ಧನೆಗಾಗಿ ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಮೂರು ತಂಡಗಳು ವಿಭಾಗ ಮಟ್ಟದಲ್ಲಿ ಪ್ರವಾಸ ಮಾಡಲಿವೆ. ಏ.12ರಿಂದ 24ರವರೆಗೆ ಪ್ರವಾಸ ನಡೆಯಲಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ತಿಳಿಸಿದ್ದಾರೆ. ಈ ತಂಡಗಳು ವಿಭಾಗ ಕೇಂದ್ರದಲ್ಲಿ 2 ದಿನಗಳ ಕಾರ್ಯಕ್ರಮ ಸಂಘಟಿಸಲಿವೆ. ಪ್ರತಿ ಜಿಲ್ಲಾ ಕೇಂದ್ರದಲ್ಲೂ ಕೋರ್ ಕಮಿಟಿ ಸಭೆ ನಡೆಯಲಿದೆ. ನಂತರ ಆ ಜಿಲ್ಲಾ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಜಿಲ್ಲೆಯ ಪ್ರಮುಖರೊಂದಿಗೆ ವೈಯಕ್ತಿಕ ಮಾತುಕತೆ ಏರ್ಪಡಿಸಲಾಗುವುದು ಎಂದವರು ವಿವರಿಸಿದ್ದಾರೆ. ಈ ತಂಡಗಳು ವಿಭಾಗ ಕೇಂದ್ರದ ಮಂಡಲಗಳ ಬೂತ್ ಅಧ್ಯಕ್ಷರ ಮತ್ತು ಶಕ್ತಿ ಕೇಂದ್ರದ ಪ್ರಮುಖರ ಸಮಾವೇಶವನ್ನು ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಪೊಲೀಸರ ಸಮ್ಮುಖದಲ್ಲೇ ಪ್ರೇಮಿಗಳನ್ನು ಬೇರೆ ಮಾಡಿದ ಸಂಬಂಧಿಕರು: ಮದ್ವೆಯಾಗಿದ್ರೂ ಬಿಡಲಿಲ್ಲ…

ಸಿಳ್ಳೆಕ್ಯಾತ ಎಂದು ಸುಳ್ಳೇ ಹೇಳಿದ್ದ ನಗರಸಭೆ ಸದಸ್ಯೆಯ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
