ಮೈಸೂರು:ಇತ್ತೀಚಿಗೆ ತಮ್ಮ ತಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ತಾವು ಮೊಬೈಲ್ ನಲ್ಲಿ ಮಾತನಾಡುವ ವೇಳೆ ಪ್ರಸ್ತಾಪಿಸಿದ್ದ ಲಿಸ್ಟ್ ಬಗ್ಗೆ ವಿರೋಧ ಪಕ್ಷಗಳ ನಾಯಕರು ತರಾಟೆಗೆ ತೆಗೆದುಕೊಳ್ಳುತ್ತಿರುವ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ಯತೀಂದ್ರ ಸಿದ್ದರಾಮಯ್ಯ ನಾನು ಆ ವಿಡಿಯೋ ಬಗ್ಗೆ ಸ್ಪಷ್ಟನೆ ಕೊಡುವ ಅಗತ್ಯವೇ ಇಲ್ಲ ಎಂದಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ದುಡ್ಡಿನ ಬಗ್ಗೆ ಮಾತನಾಡಿದ್ದರೆ ಸ್ಪಷ್ಟನೆ ಕೊಡಬಹುದಿತ್ತು. ನಾನು ಸಿಎಸ್ಆರ್ ಫಂಡ್ ವಿಚಾರದ ಬಗ್ಗೆ ಮಾತನಾಡಿರುವುದು ಎಂದಿದ್ದಾರೆ.
ನಾನು ಆ ವಿಡಿಯೋ ಬಗ್ಗೆ ಸ್ಪಷ್ಟನೆ ಕೊಡುವ ಅಗತ್ಯವೇ ಇಲ್ಲ. ನಾನು ಹತ್ತಾರು ವಿಚಾರಗಳ ಕುರಿತು ಸಿಎಂ ಜೊತೆ ಮಾತನಾಡುತ್ತೇನೆ. ಹಲವು ಕೆಲಸ ಮಾಡಿಕೊಡುವಂತೆ ಪಟ್ಟಿ ಕೊಡುತ್ತೇನೆ. ನಾನು ದುಡ್ಡಿನ ಬಗ್ಗೆ ಮಾತನಾಡಿದ್ದರೆ ಸ್ಪಷ್ಟನೆ ಕೊಡಬಹುದಿತ್ತು. ನಾನು ಸಿಎಸ್ಆರ್ ಫಂಡ್ ವಿಚಾರದ ಬಗ್ಗೆ ಮಾತನಾಡಿರುವುದು.
ಇದನ್ನೂ ಓದಿ:ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಇಂದು ಭಾರತ ತಂಡ ಪ್ರಕಟ ಸಾಧ್ಯತೆ; ಪ್ರಮುಖರಿಗೆ ರೆಸ್ಟ್​
ಲಿಸ್ಟ್ ಎಂದ ಕೂಡಲೇ ವರ್ಗಾವಣೆಗೆ ಅಂತಾ ಯಾಕೆ ಹೇಳುತ್ತೀರಿ. ಇವರ ಅವಧಿಯಲ್ಲಿ ಲಿಸ್ಟ್, ವರ್ಗಾವಣೆ ಅಂದರೆ ದಂಧೆಯಾಗಿತ್ತಾ. ಇವರ ಪತ್ನಿ, ಮಗ ಮತ್ತು ಇಡೀ ಕುಟುಂಬವೇ ರಾಜಕಾರಣದಲ್ಲಿದೆ. ಅವರ ಮೇಲೂ ನಾವೂ ಅದೇ ರೀತಿ ಮಾತನಾಡಲು ಆಗುತ್ತದಾ. ಇವರ ಅವಧಿಯಲ್ಲಿ ಮಾಡಿದ ವರ್ಗಾವಣೆಯಲ್ಲಾ ದಂಧೆಯೇ. ಹಣ ಪಡೆದೇ ವರ್ಗಾವಣೆ ಮಾಡಿದ್ದಾರಾ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಹೆಸರೇಳದೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
ಒಬ್ಬ ಸಿಎಂ ಮೇಲೆ ಆರೋಪ ಮಾಡಬೇಕಾದ್ರೆ ಸಾಕ್ಷ್ಯ ಇಟ್ಟುಕೊಳ್ಳಬೇಕು. ನಮ್ಮ ತಂದೆ ಆಗಲಿ, ನಾನಾಗಲಿ ಯಾವುದೇ ದಂಧೆ ನಡೆಸುತ್ತಿಲ್ಲ. ವಿವೇಕಾನಂದ ಯಾರು ಅಂತಾ ನನಗೆ ಗೊತ್ತಿಲ್ಲ. ಇನ್ಸ್​ಪೆಕ್ಟರ್​​ ವಿವೇಕಾನಂದ ವರ್ಗಾವಣೆಗೂ ನನಗೂ ಸಂಬಂಧವಿಲ್ಲ. ನಮ್ಮ ಕ್ಷೇತ್ರದಲ್ಲಿ ವಿವೇಕಾನಂದ ಅಂತಾ ಬಿಇಒ ಕೂಡ ಇದ್ದಾರೆ. ವಿಪಕ್ಷಗಳು ಹತಾಶರಾಗಿ ನಮ್ಮ ವಿರುದ್ಧ ಆರೋಪ ಮಾಡುತ್ತಿವೆ.
ಇವರು ಅಧಿಕಾರದಲ್ಲಿದ್ದರು, ಸಿಎಂ ಆಗಿಯೂ ಕೆಲಸ ಮಾಡಿದ್ದಾರೆ. ಇವರು ಅಧಿಕಾರದಲ್ಲಿದ್ದಾಗ ದಂಧೆಯನ್ನೇ ಮಾಡುತ್ತಿದ್ರಾ ಭ್ರಷ್ಟಾಚಾರ, ದಂಧೆ ಆಗ್ತಿದೆ ಎಂದು ಸುಳ್ಳು ಆರೋಪ ಮಾಡಬಾರದು ಎಂದು ಮಾಜಿಶಾಸಕ ಯತೀಂದ್ರ ಸಿದ್ದರಾಮಯ್ಯ ಎಚ್​.ಡಿ. ಕುಮಾರಸ್ವಾಮಿ ಹೆಸರೇಳದೆ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + seventeen =
Remember me
