ಬೆಂಗಳೂರು:ಈ ಹಿಂದೆ ಬಿಜೆಪಿ ಸರ್ಕಾರ(BJP Government)ಆಡಳಿತದಲ್ಲಿದ್ದ ವೇಳೆ ಜಾರಿಗೊಳಿಸಿದ್ದ ಮತಾಂತರ ನಿಷೇಧ ಕಾಯ್ದೆಯನ್ನು(Prohibition Of Conversion Act)ಇಂದಿನ ಸಚಿವ ಸಂಪುಟ ಸಭೆ ರದ್ದುಗೊಳಿಸಲು ಮಾಡಿದ ತೀರ್ಮಾನದ ಕುರಿತು ಇದೀಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಇದನ್ನೂ ಓದಿ:ಸೀಟ್ ಬೆಲ್ಟ್​ ಧರಿಸಿದ್ದರೂ ಚರ್ಚ್ ಪಾದ್ರಿಗೆ ಬಿತ್ತು ದಂಡ; ಕಾರಣ ಗೊತ್ತಾದ್ರೆ ನೀವೂ ಅಚ್ಚರಿಯಾಗ್ತೀರಾ!
ಈ ಬಗ್ಗೆ ಟ್ವೀಟ್(Tweet)ಮಾಡುವ ಮೂಲಕ ರಾಜ್ಯ ಸರ್ಕಾರ ಮತ್ತು ಸಿದ್ದರಾಮಯ್ಯ(Siddaramaiah)ವಿರುದ್ಧ ಗುಡುಗಿರುವ ಯತ್ನಾಳ್, “ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದರ ಮೂಲಕ ಸಿದ್ದರಾಮಯ್ಯನವರ ಹಿಂದೂ ವಿರೋಧಿ ನಿಲುವನ್ನು ಮತ್ತೆ ಕಾಂಗ್ರೆಸ್ ಸರ್ಕಾರ ಅನುಸರಿಸಿದೆ. ಆಮಿಷದ ಮತಾಂತರವನ್ನು ನಿರ್ಬಂಧಿಸುವ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದು ಹಿಂದೂ ಸಮಾಜವನ್ನು ಮತಾಂತರಗೊಳಿಸುವವರಿಗೆ ಬೆಂಬಲ ನೀಡಿದಂತೆ ಅಲ್ಲವೇ?” ಎಂದು ಟ್ವೀಟ್​ನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ:ಪತಿಯಿಂದ ದೂರ ಮಾಡಿ ಬೇರೆ ಮದುವೆ ಮಾಡಿದ್ರು: ಈಕೆ 2ನೇ ಪತಿಗೆ ರಾಖಿ ಕಟ್ಟಿದಳು!
ಆಮಿಷದ ಮತಾಂತರಕ್ಕೆ ಬೆಂಬಲ ನೀಡಲು ಸಿದ್ದರಾಮಯ್ಯನವರು ಸಜ್ಜಾಗಿದ್ದಾರೆ! ಇನ್ನು ಮುಂದೆ ಮಹದೇವಪ್ಪನೂ ‘ಕನ್​ವರ್ಟ್’, ಕಾಕಾ ಪಾಟಿಲನೂ ‘ಕನ್​ವರ್ಟ್’ ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯನವರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್(Basanagowda patil Yathnal)ಕಿಡಿಕಾರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
