ವಿಜಯಪುರ:ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ.
ಇನ್ನು ವಿಜಯಪುರದಲ್ಲಿ ಬಿಜೆಪಿಯಿಂದ ಪುನರಾಯ್ಕೆಯಾದ ಶಾಸಕ ಬಸನ್​ಗೌಡ ಪಾಟೀಲ್​ ಯತ್ನಾಳ್​ ಬೆಂಬಲಿಗರ ಸಂಭ್ರಮಾಚರಣೆ ವೇಳೆ ಮುಖಂಡನೊಬ್ಬ ತಲ್ವಾರ್​ ಹಿಡಿದು ರಸ್ತೆ ತುಂಬಾ ಓಡಾಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಶನಿವಾರ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುವ ಬೆನ್ನಲ್ಲೇ ಅಹಿತಕರ ಘಟನೆಗಳು ನಡೆಯದಿರಲಿ ಎಂಬ ಕಾರಣಕ್ಕೆ ನಗರದಾದ್ಯಂತ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿತ್ತು.
ಚುನಾವಣಾ ಅಧಿಕಾರಿಗಳು ಯತ್ನಾಳ್​ ಗೆಲುವನ್ನು ಘೋಷಿಸಿದ ಬೆನ್ನಲ್ಲೇ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ನಗರದ ಸಿದ್ದೇಶ್ವರ ಸ್ವಾಮಿ ದೇವಾಲಯದ ಬಳಿ ಜಮಾಯಿಸಿದ್ದರು.
ಇದನ್ನೂ ಓದಿ:VIDEO| ಕಾಂಗ್ರೆಸ್​ ಸಂಭ್ರಮಾಚರಣೆ ವೇಳೆ ಹಾರಾಡಿದ ಮುಸ್ಲಿಂ ಧ್ವಜ; ವ್ಯಾಪಕ ಖಂಡನೆ
ವಿಜಯಪುರ ನಗರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗೆಲುವು ಸಾಧಿಸುತ್ತಿದಂತೆ ವಿಜಯೋತ್ಸವ ನಡೆಯಿತು.
ಈ ವೇಳೆ ಕಾರ್ಯಕರ್ತ ಖಡ್ಗ ಪ್ರದರ್ಶನ ಮಾಡುವ ಮೂಲಕ ಅಸಭ್ಯ ವರ್ತನೆ ಮಾಡಿದ್ದಾನೆ. ಅಲ್ಲದೇ, ಕೈಯಲ್ಲಿ ಖಡ್ಗ ಹಿಡಿದುಕೊಂಡು ಪ್ರದರ್ಶನ ಮಾಡಿದ್ದಾನೆ.
ಇನ್ನು ಗಾಂಧಿ ಚೌಕ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಪೊಲೀದರು ಇದುವರೆಗೂ ವ್ಯಕ್ತಿಯ ವಿರುದ್ಧ ಯಾವುದೇ ಕ್ರಮ ಜರುಗಿಸದೆ ಇರುವುದು ಚರ್ಚೆಗೆ ಕಾರಣವಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 1 =
Remember me
