ವಿಜಯಪುರ:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾರ್ಯವೈಖರಿ ವಿರುದ್ಧ ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಆರ್ ಪಾಟೀಲ್ ಯತ್ನಾಳ ಮತ್ತೊಮ್ಮೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ನಿನ್ನೆ ಖುದ್ದು ಮುಖ್ಯಮಂತ್ರಿ ಬಿ.ಎಸ್.ವೈ ಮತ್ತು ಪಕ್ಷದ ರಾಜ್ಯ ಅಧ್ಯಕ್ಷ ನಳಿನ್​ ಕುಮಾರ್ ಕಟೀಲು ಅವರಿಗೆ ಪತ್ರ ಬರೆದು ಅಸಮಾಧಾನ ಹೊರ ಹಾಕಿದ್ದಾರೆ.
ಜನವರಿ 4 ಮತ್ತು 5 ರಂದು ಮುಖ್ಯಮಂತ್ರಿಯವರು ವಿಭಾಗವಾರು ಶಾಸಕರ ಸಭೆಯನ್ನು ಮತ್ತೊಮ್ಮೆ ಕರೆದಿರುತ್ತಾರೆ. ಈ ಹಿಂದೆ ನಡೆದ ಸಭೆಯಲ್ಲಿ ತಮ್ಮ ತಮ್ಮ ಕ್ಷೇತ್ರದ ಅಭಿವೃದ್ಧಿಯ ಕುರಿತು ಶಾಸಕರು ಸಲ್ಲಿಸಿದ ಮನವಿಗೆ ಮುಖ್ಯಮಂತ್ರಿಯವರು ಕೂಡಲೇ ಅನುದಾನ ಬಿಡುಗಡೆ ಮಾಡಿ ಎಂದು ಷರಾ ಬರೆದು ಅಧಿಕಾರಿಗಳಿಗೆ ಕಳುಹಿಸಿದ್ದಾರೆ. ಆದರೆ, ಇದುವರೆಗೂ ಆ ಅನುದಾನ ಬಿಡುಗಡೆಯಾಗಿಲ್ಲ. ಅಂದರೆ ವಿಭಾಗವಾರು ಸಭೆ ವಿಫಲವಾಗಿದೆ ಎಂದೇ ಅರ್ಥ. ಇದರಿಂದ ಶಾಸಕರ ಮನಸ್ಸಿಗೆ ನೋವಾಗಿದೆ.
ಇದನ್ನೂ ಓದಿ:ಭೀಕರ ಸ್ಫೋಟಕ್ಕೆ 25 ಬಲಿ, 110ಕ್ಕೂ ಹೆಚ್ಚು ಜನರಿಗೆ ಗಾಯ: ವಿಮಾನ ನಿಲ್ದಾಣದಲ್ಲಿದ್ದ ಪ್ರಧಾನಿ ಟಾರ್ಗೆಟ್​ ಆಗಿದ್ರಾ?!
ಮುಖ್ಯಮಂತ್ರಿಯವರ ಭೇಟಿಗೆ ಹೋದರೆ ಅವರು ಭೇಟಿಗೆ ಸಿಗುತ್ತಿಲ್ಲ. ಬಹುಶಃ ಅವರ ಅನಾರೋಗ್ಯದ ಕಾರಣ ಹೀಗಾಗುತ್ತಿದೆ ಎಂದು ಭಾವಿಸುತ್ತೇನೆ. ಇತ್ತೀಚೆಗೆ ರಾಜ್ಯದ ವಿವಿಧ ನಿಗಮ, ಮಂಡಳಿ ಮತ್ತು ಸ್ಥಳೀಯ ಪ್ರಾಧಿಕಾರಗಳಿಗೆ ನಾಮನಿರ್ದೇಶನ ಮಾಡಲಾಯಿತು. ಆಗಲೂ ಶಾಸಕರನ್ನು ಕಡೆಗಣಿಸಿದ್ದರಿಂದಾಗಿ ಅನೇಕರಿಗೆ ನೋವಾಗಿದೆ. ಹೀಗಾಗಿ ವಿಭಾಗವಾರು ಶಾಸರಕ ಸಭೆ ಕರೆಯದೇ, ಜನವರಿ 4 ಅಥವಾ 5 ರಂದು ದಿನಪೂರ್ತಿ ಶಾಸಕಾಂಗ ಪಕ್ಷದ ಸಭೆ ಕರೆದು ಮುಖ್ಯಮಂತ್ರಿಗಳು ಶಾಸಕರ ಅಹವಾಲುಗಳನ್ನು ಆಲಿಸಿ, ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸಲು ಅವಕಾಶ ನೀಡಬೇಕು ಎಂದು ಯತ್ನಾಳ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ನೆಲಮಂಗಲ ಸಮೀಪ ಟ್ಯಾಂಕರ್- ಕಾರು ಡಿಕ್ಕಿ: ನಾಲ್ವರ ಪೈಕಿ ಓರ್ವ ಸಾವು

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:five + five =
Remember me
