ಬೆಂಗಳೂರು: ‘‘ಯಡಿಯೂರಪ್ಪ ಸಿಎಂ ಅಷ್ಟೇ, ನಮ್ಮ ನಾಯಕರು ವಾಜಪೇಯಿ ಮತ್ತು ಮೋದಿ’’ ಎಂಬುದಾಗಿ ಕೇಂದ್ರದ ಮಾಜಿ ಸಚಿವ, ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ‘‘ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ’’ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಅವರ ದ್ವಿತೀಯ ಅವಧಿಯ ಪ್ರಥಮ ವರ್ಷದ ಸಾಧನೆಗಳ ಕುರಿತು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಯಡಿಯೂರಪ್ಪ ಮಾತನಾಡಿದ ಸಂದರ್ಭದಲ್ಲಿ, ‘‘ಕೆಲ ಬಿಜೆಪಿ ನಾಯಕರು ಯಡಿಯೂರಪ್ಪ ನಮ್ಮ ನಾಯಕರಲ್ಲ’’ ಎಂಬ ಹೇಳಿಕೆ ನೀಡಿದ್ದಾರಲ್ಲ ಎಂದು ಪತ್ರಕರ್ತರು ಪ್ರಶ್ನಿಸಿದರು.
ಇದನ್ನೂ ಓದಿಭಾವಿ ಪತ್ನಿಗೆ ಸೀಮಂತ ಮಾಡಿದ ಪಾಂಡ್ಯ
ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ‘‘ರಾಜ್ಯದ ಅಭಿವೃದ್ಧಿ ಮತ್ತು ಕರೊನಾ ನಿಯಂತ್ರಣ ನನ್ನ ಮೊದಲ ಆದ್ಯತೆ. ಬೇರೆ ವಿಷಯಗಳಿಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಹಾಗೂ ಪ್ರತಿಕ್ರಿಯಿಸುವುದಿಲ್ಲ’’ ಎಂದು ಹೇಳಿದರು.
ಇತ್ತೀಚೆಗೆ ಮಾಜಿ ಸಚಿವ ಉಮೇಶ್ ಕತ್ತಿ ಅವರ ನಿವಾಸದಲ್ಲಿ ಬಿಜೆಪಿಯ ಕೆಲವು ಅತೃಪ್ತ ಶಾಸಕರು ಭೋಜನಕೂಟ ನಡೆಸಿದ್ದು ಬಹಿರಂಗವಾದ ಸಂದರ್ಭದಲ್ಲಿ ಯತ್ನಾಳ್ ಈ ಹೇಳಿಕೆ ನೀಡಿದ್ದರು.
ಮಹಿಳಾ ಪೊಲೀಸ್‌ಗೇ ಕಿರುಕುಳ: ಮಾಜಿ ಪ್ರಿಯಕರ ಅಂದರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
