ಯಡಿಯೂರಪ್ಪನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ನಂತರ ಜನಸಾಮಾನ್ಯರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಕ್ಷೇತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಅದರಲ್ಲೂ ಕೋವಿಡ್ ಆರೋಗ್ಯ ಕ್ಷೇತ್ರದಲ್ಲಿ ಸೃಷ್ಟಿಸಿದ ತುರ್ತು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿದೆ. ರಾಜ್ಯ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳು ಒಳಗೊಂಡಂತೆ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ ವಹಿಸಲಾಗಿದೆ. ಬಹುತೇಕ ಸರ್ಕಾರಿ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳ ಮಟ್ಟಕ್ಕೆ ಹೈಟೆಕ್ ಸ್ಪರ್ಶ ಪಡೆದುಕೊಂಡಿವೆ.
ಆಯುಷ್ಮಾನ್ ಭಾರತ್: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಈವರೆಗೂ 5.88 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ 950.97 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಚಿಕಿತ್ಸೆ ನೀಡಲಾಗಿದೆ. ಒಟ್ಟು 452 ಖಾಸಗಿ ಆಸ್ಪತ್ರೆಗಳು, 2,807 ಸರ್ಕಾರಿ ಆಸ್ಪತ್ರೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಈವರೆಗೂ 56,32,841ಕ್ಕೂ ಹೆಚ್ಚು ಜನರಿಗೆ ಆರೋಗ್ಯ ಕಾರ್ಡ್ ವಿತರಿಸಲಾಗಿದೆ. ಬಿಪಿಎಲ್ ಕುಟುಂಬದವರಿಗಾಗಿ ಅಂಗಾಂಗ ಕಸಿ ಯೋಜನೆಯಲ್ಲಿ ಕಿಡ್ನಿ ಕಸಿಗೆ 3 ಲಕ್ಷ ರೂ, ಹೃದಯ ಕಸಿಗೆ 11 ಲಕ್ಷ ರೂ., ಪಿತ್ತಜನಕಾಂಗ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುತ್ತಿದೆ. ಈವರೆಗೂ 19ಕ್ಕೂ ಹೆಚ್ಚು ಮಂದಿ ನೆರವು ಪಡೆದುಕೊಂಡಿದ್ದಾರೆ.
ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ರೋಟಾವೈರಸ್ ಲಸಿಕೆ, ಶಾಲಾ ಲಸಿಕಾ ಕಾರ್ಯಕ್ರಮ, ಇಂದ್ರಧನುಷ್ ಅಭಿಯಾನ 2.0 ಕಾರ್ಯಕ್ರಮ, ಪಲ್ಸ್ ಪೋಲಿಯೋ ಅನ್ನು ರಾಜ್ಯದಲ್ಲಿ ವ್ಯವಸ್ಥಿತವಾಗಿ ನಡೆಸಿಕೊಂಡು ಬರಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಷ್ಟ್ರೀಯ ಉಚಿತ ರೋಗ ಪತ್ತೆ ಸೇವೆಗಳ ಕಾರ್ಯಕ್ರಮ ಸಹ ಯಶಸ್ವಿಯಾಗಿ ನಡೆಸಲಾಗಿದೆ.
ಹೆಚ್ಚುವರಿ ಸಿಬ್ಬಂದಿ ನೇಮಕ: ಕೋವಿಡ್ ಸಂದರ್ಭ ರೋಗಿಗಳಿಗೆ ಸಮಸ್ಯೆ ಆಗದಂತೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಲು ಅನುವಾಗುವಂತೆ ಕ್ರಮ ವಹಿಸಲು 18 ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರತಿ ಆಸ್ಪತ್ರೆಗೆ ಹೆಚ್ಚುವರಿಯಾಗಿ 45 ಸಿಬ್ಬಂದಿಯನ್ನು ಗುತ್ತಿಗೆ ಮೇರೆಗೆ ನೇಮಕ ಮಾಡಿಕೊಳ್ಳಲಾಯಿತು. ರಾಜ್ಯದಲ್ಲಿ 1,246 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು, 824 ತಜ್ಞವೈದ್ಯರು ಮತ್ತು 88 ದಂತ ವೈದ್ಯಾಧಿಕಾರಿಗಳ ಕಾಯಂ ನೇಮಕಾತಿಗೆ ಕ್ರಮ ಕೈಗೊಳ್ಳಲಾಯಿತು. ಗುತ್ತಿಗೆ ವೈದ್ಯರ ವೇತನವನ್ನು ಮಾಸಿಕ 45 ಸಾವಿರದಿಂದ 60 ಸಾವಿರ ರೂ.ಗೆ ಹೆಚ್ಚಳ ಮಾಡಲಾಯಿತು. ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನ ವನ್ನು 4000 ರೂ.ಗೆ ಹೆಚ್ಚಿಸುವುದರ ಜತೆಗೆ ಕೋವಿಡ್ ಹೆಚ್ಚುವರಿ ಸೇವೆ ಹಿನ್ನೆಲೆ ಮಾಸಿಕ 1 ಸಾವಿರ ರೂ. ಕೋವಿಡ್ ಪ್ರೋತ್ಸಾಹಧನ ನೀಡಲಾಯಿತು.
ಆಸ್ಪತ್ರೆಗಳ ಅಭಿವೃದ್ದಿಗೆ ಕ್ರಮ: ಕ್ಯಾನ್ಸರ್ ರೋಗಿಗಳಿಗೆ ವರದಾನವಾಗಿರುವ ರಾಜ್ಯದ ಏಕೈಕ ಕ್ಯಾನ್ಸರ್ ಆಸ್ಪತ್ರೆ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯನ್ನು ಮೇಲ್ದರ್ಜೆಗೇರಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ 450 ಹಾಸಿಗೆಗಳ ಸಾಮರ್ಥ್ಯದ ನೂತನ ಕಟ್ಟಡ ನಿರ್ವಣ. ರೋಗಿಗಳಿಗೆ ಸ್ಥಳೀಯವಾಗಿ ಚಿಕಿತ್ಸೆ ಒದಗಿಸಲು ತುಮಕೂರಿನ ಜಿಲ್ಲಾ ಆಸ್ಪತ್ರೆಯಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ಕ್ಯಾನ್ಸರ್ ಕೇಂದ್ರದ ಸ್ಥಾಪನೆಗೆ ಕ್ರಮ. ಮಂಡ್ಯದಲ್ಲಿ ಕಿದ್ವಾಯಿ ಸಂಸ್ಥೆಯ ಟರ್ಷರಿ ಕೇರ್ ಸೆಂಟರ್ ಆಸ್ಪತ್ರೆ ಹಾಗೂ ಕಲಬುರಗಿಯಲ್ಲಿ ಪೆರಿಫೆರಲ್ ಸೆಂಟರ್ ಪ್ರಾರಂಭಿಸಲು ಕ್ರಮ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿಯ ಶ್ರೀ ಜಯದೇವ ಹೃದ್ರೋಗ ವಿಜ್ಞಾನಗಳ ಸಂಸ್ಥೆಯ 300 ಹಾಸಿಗೆಗಳ ಸಾಮರ್ಥ್ಯದ ಪ್ರತ್ಯೇಕ ಆಸ್ಪತ್ರೆ ನಿರ್ವಣಕ್ಕೆ ಕ್ರಮ. ಕೇಂದ್ರದ ಆರೋಗ್ಯಮಂತ್ರಾಲಯದ ಕೇಂದ್ರ ಪುರಸ್ಕೃತ ಯೋಜನೆಯಡಿ ಯಾದಗಿರಿ, ಚಿಕ್ಕಮಗಳೂರು ಹಾಗೂ ಹಾವೇರಿಯಲ್ಲಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಪಡೆಯಲು ಒಟ್ಟು 450 ಎಂಬಿಬಿಎಸ್ ಸೀಟುಗಳನ್ನು ಸೃಜಿಸಲಾಗಿದೆ.
ಹೆಚ್ಚಿದ ಐಸಿಯು ಹಾಸಿಗೆಗಳ ಸಂಖ್ಯೆ: ಕೋವಿಡ್​ಗೂ ಮೊದಲು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ 5,300 ಹಾಸಿಗೆಗಳು ಮಾತ್ರ ಆಮ್ಲಜನಕದ ಸಂಪರ್ಕ ಹೊಂದಿದ್ದವು. ಈಗ ಜಿಲ್ಲಾ ಆಸ್ಪತ್ರೆಗಳಲ್ಲಿ 100 ಹಾಸಿಗೆಗಳಿಗೆ ಆಮ್ಲಜನಕ ಸಂಪರ್ಕ ಕಲ್ಪಿಸಲಾಗಿದೆ. ಅದೇ ರೀತಿ, ತಾಲೂಕು ಆಸ್ಪತ್ರೆಗಳಲ್ಲಿ 50 ಹಾಸಿಗೆಗಳಿಗೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 30 ಹಾಸಿಗೆಗಳಿಗೆ ಆಮ್ಲಜನಕ ಸಂಪರ್ಕ ಒದಗಿಸಲಾಗಿದೆ. ಈಗ 17 ಜಿಲ್ಲಾ ಆಸ್ಪತ್ರೆಗಳಲ್ಲಿ 1,700 ಐಸಿಯು ಹಾಸಿಗೆಗಳಿವೆ. ಅದೇ ರೀತಿ, 146 ತಾಲೂಕು ಆಸ್ಪತ್ರೆಗಳಲ್ಲಿ 7,300 ಹಾಗೂ 204 ಸಮುದಾಯ ಆರೋಗ್ಯ ಕೇಂದ್ರಗಳ 6,120 ಹಾಸಿಗೆಗಳು ಆಮ್ಲಜನಕದ ಸಂಪರ್ಕ ಹೊಂದಿವೆ. ಈಗ ಐಸಿಯು ಹಾಸಿಗೆಗಳ ಸಂಖ್ಯೆ 28 ಸಾವಿರಕ್ಕೆ ಏರಿಕೆಯಾಗಿದೆ.
ಹೆಚ್ಚಿದ ಪ್ರಯೋಗಾಲಯಗಳು: ರಾಜ್ಯದಲ್ಲಿ ಈ ಮೊದಲು ಸಾಂಕ್ರಾಮಿಕ ರೋಗಗಳ ಪರೀಕ್ಷೆಗೆ ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಯನ್ನು ಅವಲಂಭಿಸಲಾಗಿತ್ತು. ಕೋವಿಡ್ ನಂತರ ರಾಜ್ಯದಲ್ಲಿ ಪ್ರಯೋಗಾಲಯಗಳ ಸಂಖ್ಯೆ 183ಕ್ಕೆ (63 ಸರ್ಕಾರಿ ಹಾಗೂ 120 ಖಾಸಗಿ ಪ್ರಯೋಗಾಲಯಳು) ಹೆಚ್ಚಳವಾಗಿದೆ. ಇದರಿಂದ ಕರೊನಾವೈರಸ್ ಸೇರಿ ಇತರ ಸಾಂಕ್ರಾಮಿಕ ರೋಗಗಳ ಪತ್ತೆಗೆ ಅನುಕೂಲವಾಗಲಿದೆ.
ಆಸ್ಪತ್ರೆಗಳಿಗೆ ಮೂಲಸೌಕರ್ಯ
ಕೋವಿಡ್ ನಿಯಂತ್ರಣಕ್ಕೆ ಕಾಲಕಾಲಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಜತೆಗೆ ಆಸ್ಪತ್ರೆಗಳನ್ನು ಬಲಪಡಿಸಲು ಆದ್ಯತೆ ನೀಡಲಾಯಿತು. ಇದರ ಪರಿಣಾಮ ಅಲ್ಪಾವಧಿಯಲ್ಲೇ ಸರ್ಕಾರಿ ಆರೋಗ್ಯ ಕೇಂದ್ರಗಳ ಬಲವರ್ಧನೆ ಸಾಧ್ಯವಾಯಿತು. ರಾಜ್ಯದ ಆಸ್ಪತ್ರೆಗಳಲ್ಲಿ ತೀವ್ರ ನಿಗಾ ಘಟಕಕ್ಕೆ (ಐಸಿಯು) ಮಾತ್ರ ಸೀಮಿತವಾಗಿದ್ದ ಆಮ್ಲಜನಕ ಪೂರೈಕೆ ಹಾಗೂ ವಿವಿಧ ಅತ್ಯಾಧುನಿಕ ಸೌಲಭ್ಯಗಳು ಕೋವಿಡ್ ನಂತರದಲ್ಲಿ ಸಾಮಾನ್ಯ ಹಾಸಿಗೆಗಳಿಗೂ ವಿಸ್ತರಣೆಯಾಯಿತು. ಇದರೊಂದಿಗೆ ಸರ್ಕಾರಿ ಆಸ್ಪತ್ರೆಗಳ ಸ್ವರೂಪ ಬದಲಾಯಿತು.
ಹೈಟೆಕ್ ಸ್ಪರ್ಶ ಪಡೆದ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳು
ವೈರಾಣು ರೋಗಗಳ ಪತ್ತೆಗೆ 183 ಪ್ರಯೋಗಾಲಯಗಳ ಸ್ಥಾಪನೆ
ಆಯುಷ್ಮಾನ್ ಭಾರತ್
ಯೋಜನೆಯಡಿ 5.88 ಲಕ್ಷಕ್ಕೂ ಹೆಚ್ಚು ಮಂದಿಗೆ ಚಿಕಿತ್ಸೆ
ಸ್ವಚ್ಛತೆಗೆ ಆದ್ಯತೆ
ಈ ಮೊದಲು ಸರ್ಕಾರಿ ಆಸ್ಪತ್ರೆಗಳೆಂದರೆ ಕೊಳಕು ಎಂದು ಮೂಗು ಮುರಿಯುತ್ತಿದ್ದ ಮಂದಿ, ಈಗ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದಾರೆ. ಕಾರಣ ಕೋವಿಡ್ ನಂತರದಲ್ಲಿ ವೈಯಕ್ತಿಕ ಸ್ವಚ್ಛತೆ ಮಾತ್ರವಲ್ಲದೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವ ವೈದ್ಯರು, ಸೇವೆ ಒದಗಿಸುವ ಸಿಬ್ಬಂದಿ ಸೇರಿ ಚಿಕಿತ್ಸೆ ಪಡೆಯುವ ರೋಗಿಗಳನ್ನು ಗಮನ ದಲ್ಲಿಟ್ಟುಕೊಂಡು ಸ್ವಚ್ಛತೆಗೆ ಒತ್ತು ನೀಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − four =
Remember me
